ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾಗ ಅಂತಿಮಗೊಳಿಸಿದ ಕೂಡಲೇ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುವುದು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟವರಿಗೆ ಶಾಸಕರು ಸಲಹೆ ಮಾಡಿದರು.ದೇವರ ದಾಸಿಮಯ್ಯ ಕುರಿತು ಹೆಚ್ಚಿನ ಅಧ್ಯಯನಗಳು ನಡೆಯಬೇಕು. ಜೊತೆಗೆ ಪುಸ್ತಕವನ್ನು ಹೊರತರುವಂತಾಗಬೇಕು. ಆ ನಿಟ್ಟಿನಲ್ಲಿ ದೇವರ ದಾಸಿಮಯ್ಯ ಅವರ ಸಂಶೋಧನಾ ಅಧ್ಯಯನಕ್ಕಾಗಿ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಿ ಹೆಚ್ಚಿನ ಅನುದಾನ ಬಿಡುಗಡೆಗೆ ಮುಂದಾಗಲಾಗುವುದು ಎಂದು ತಿಳಿಸಿದರು.
ಶಿರಂಗಾಲದಲ್ಲಿ ಕೈಮಗ್ಗ ಘಟಕ ಉತ್ತೇಜನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇಂದಿನ ಜಾಗತಿಕರಣ ಯುಗದಲ್ಲಿ ಸಣ್ಣ ಮತ್ತು ಗುಡಿ ಕೈಗಾರಿಕೆಗಳು ಇಲ್ಲದಂತಾಗಿದೆ. ಸಣ್ಣ ಮತ್ತು ಗುಡಿ ಕೈಗಾರಿಕೆಗಳನ್ನು ಉಳಿಸಿಕೊಂಡು ಆಧುನಿಕತೆಗೂ ಹೊಂದಿಕೊಂಡು ಬದುಕು ನಡೆಸುವಂತಾಗಬೇಕು ಎಂದು ಕರೆ ನೀಡಿದರು.
ಕುಶಾಲನಗರದಲ್ಲಿ ದೇವರ ದಾಸಿಮಯ್ಯ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಆ ನಿಟ್ಟಿನಲ್ಲಿ ಜಾಗಕ್ಕಾಗಿ ಹಲವು ವರ್ಷಗಳಿಂದ ಪ್ರಯತ್ನಿಸಲಾಗುತ್ತಿದೆ ಎಂದು ಶಾಸಕರ ಗಮನಕ್ಕೆ ತಂದರು.
ಜಿಲ್ಲಾ ನೇಕಾರರ ಒಕ್ಕೂಟದ ಕಾರ್ಯದರ್ಶಿ ನಾಗರಾಜ ಶೆಟ್ಟಿ ಅವರು ಮಾತನಾಡಿ, ನೇಕಾರಿಕೆ ಪುನಃಶ್ಚೇತನಕ್ಕೆ ಒತ್ತು ನೀಡಬೇಕಿದೆ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಯಾವುದಾದರೂ ವೃತ್ತಕ್ಕೆ ದೇವರ ದಾಸಿಮಯ್ಯ ಅವರ ಹೆಸರಿಡುವಂತಾಗಬೇಕು ಎಂದು ಕೋರಿದರು.
176 ಕ್ಕೂ ಹೆಚ್ಚು ವಚನಗಳನ್ನು ಬರೆದಿರುವ ದೇವರದಾಸಿಮಯ್ಯ ಅವರು 10 ನೇ ಶತಮಾನದಲ್ಲಿಯೇ ಸಮಾಜದ ಬದುಕಿನ ಬಗ್ಗೆ ಅಗಾಧವಾಗಿ ಚಿಂತನೆ ಮಾಡಿದ್ದಾರೆ ಎಂದರು.
ಸಂಸ್ಕೃತಿ ಗಟ್ಟಿಗೊಳ್ಳಲು ಬೇರುಗಳನ್ನು ತಿಳಿದುಕೊಳ್ಳಬೇಕು. ಆ ನಿಟ್ಟಿನಲ್ಲಿ ದೇವರ ದಾಸಿಮಯ್ಯ ಅವರ ಬಗ್ಗೆ ಇನ್ನಷ್ಟು ಸಂಶೋಧನಾ ಕಾರ್ಯಗಳು ನಡೆಯಬೇಕು. ಕುಲಕಸುಬುಗಳು ನಾಶವಾಗಬಾರದು ಎಂದರು.
ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷರಾದ ಟಿ.ವಿ.ಜಗದೀಶ, ಶ್ರೀ ರಾಮಲಿಂಗೇಶ್ವರ ಚೌಡೇಶ್ವರಿ ದೇವಾಲಯ ಸಮಿತಿಯ ಅಧ್ಯಕ್ಷರಾದ ಗಜೇಂದ್ರ, ಕುಶಾಲನಗರದ ಕುರುಹಿನಶೆಟ್ಟಿ ಸಂಘದ ಅಧ್ಯಕ್ಷರಾದ ವೇಣು, ತೊರೆನೂರು ಗ್ರಾ.ಪಂ.ಅಧ್ಯಕ್ಷರಾದ ಶೋಭ, ಪ್ರಕಾಶ, ಪದ್ಮ, ಪ್ರೇಮ್ ಕುಮಾರ್ ಇತರರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜು ಉಪನ್ಯಾಸಕರಾದ ಎಚ್.ವಿ.ನಾಗರಾಜು ನಿರೂಪಿಸಿದರು. ಗಣೇಶ ಮತ್ತು ತಂಡದವರು ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ವಂದಿಸಿದರು.