ಗ್ಯಾರಂಟಿಗಳಡಿ ದಕ್ಷಿಣ ಕ್ಷೇತ್ರಕ್ಕೆ ಇಲ್ಲಿಯವರೆಗೆ ₹524.14 ಕೋಟಿ

KannadaprabhaNewsNetwork |  
Published : Mar 31, 2026, 02:00 AM IST
ಕ್ಯಾಪ್ಷನ30ಕೆಡಿವಿಜಿ34 ದಾವಣಗೆರೆಯಲ್ಲಿ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲಾ, ತಾಲೂಕು ಪದಾಧಿಕಾರಿಗಳ ಸಭೆ ನಡೆಯಿತು. | Kannada Prabha

ಸಾರಾಂಶ

ಪಂಚಗ್ಯಾರಂಟಿ ಯೋಜನೆಗಳಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಲ್ಲಿಯವರೆಗೆ ₹524.14 ಕೋಟಿ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡುವ ಮೂಲಕ ಕ್ಷೇತ್ರದ ಜನತೆಗೆ 2023ರ ಚುನಾವಣಾ ಸಮಯದಲ್ಲಿ ನೀಡಿದ್ದ ವಾಗ್ದಾನದಂತೆ ನಡೆದುಕೊಂಡಿದೆ ಎಂದು ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕ ದಿನೇಶ್ ಗೂಳಿಗೌಡ ಹೇಳಿದ್ದಾರೆ.

- ಕಾಂಗ್ರೆಸ್‌ ಸರ್ಕಾರ ವಾಗ್ದಾನ ನೀಡಿದಂತೆ ನಡೆದುಕೊಂಡಿದೆ: ರಾಜ್ಯ ಉಪಾಧ್ಯಕ್ಷ, ಶಾಸಕ ದಿನೇಶ್ ಗೂಳಿಗೌಡ ಹೇಳಿಕೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಪಂಚಗ್ಯಾರಂಟಿ ಯೋಜನೆಗಳಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಲ್ಲಿಯವರೆಗೆ ₹524.14 ಕೋಟಿ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡುವ ಮೂಲಕ ಕ್ಷೇತ್ರದ ಜನತೆಗೆ 2023ರ ಚುನಾವಣಾ ಸಮಯದಲ್ಲಿ ನೀಡಿದ್ದ ವಾಗ್ದಾನದಂತೆ ನಡೆದುಕೊಂಡಿದೆ ಎಂದು ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕ ದಿನೇಶ್ ಗೂಳಿಗೌಡ ಹೇಳಿದರು.

ನಗರದಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. "ನೋ ಕಮಿಷನ್ ನೋ ಕರಪ್ಷನ್ " ಎಂಬ ಧ್ಯೇಯದೊಂದಿಗೆ ಪಂಚಗ್ಯಾರಂಟಿ ಯೋಜನೆಗಳನ್ನು ಯಾವುದೇ ಜಾತಿಮತ ಬೇಧವಿಲ್ಲದೇ ಜನರ ಜೀವನಮಟ್ಟ ಸುಧಾರಣೆಗೋಸ್ಕರ, ಪಾರದರ್ಶಕವಾಗಿ ಜಾರಿಗೆ ತಂದ ವಿಶ್ವದ ಅತಿ ದೊಡ್ಡ ಜನಕಲ್ಯಾಣ ಕಾರ್ಯಕ್ರಮವಾಗಿದೆ ಎಂದರು.

ಅನ್ನಭಾಗ್ಯ, ಶಕ್ತಿ ಯೋಜನೆಗೆ, ಗೃಹಲಕ್ಷ್ಮಿ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳಡಿ ದಾವಣಗೆರೆ ಜಿಲ್ಲೆಗೆ ಇದುವರೆಗೂ ₹3523 ಕೋಟಿ 49 ಲಕ್ಷ ಗಳನ್ನು ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಸರ್ಕಾರ ರೈತಪರ, ಮಹಿಳೆಪರ. ಹಿಂದುಳಿದ, ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಶ್ರಮಿಸುತ್ತಿರುವ, ಯುವಕರ ಆಶಾಕಿರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 20 ದಿನಗಳ ಹಿಂದಷ್ಟೇ ₹4,48,450 ಕೋಟಿ ಆಯವ್ಯಯ ಮಂಡಿಸಿದ್ದಾರೆ. ಇದರಲ್ಲಿ ₹51,600 ಕೋಟಿ ಹಣವನ್ನು ಪಂಚ ಗ್ಯಾರಂಟಿಗಳಿಗಾಗಿ ಬಜೆಟ್‌ನಲ್ಲಿ ಮೀಸಲಿಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ನೀಡಿದ್ದ ಮಹಿಳೆಯರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ಕಾಂಗ್ರೆಸ್ ಬೆನ್ನಿಗೆ ನಿಂತು ಪ್ರೋತ್ಸಾಹಿಸಬೇಕು. ಮುಂಬರುವ ಸ್ಥಳೀಯ ಸಂಸ್ಥೆ, ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರ ಮತ ಕಾಂಗ್ರೆಸ್ ಗೆ ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೋಜ್ ಖಾನ್, ಚಿಕ್ಕಮಗಳೂರು ಶಾಸಕ ತಮ್ಮಯ್ಯ, ಮೆಸ್ಕಾಂ ಅಧ್ಯಕ್ಷ ಹರೀಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಬೆಂಗಳೂರು ವಿಭಾಗದ ಜಿಲ್ಲಾಧ್ಯಕ್ಷ ಜಿ.ಕೃಷ್ಣಪ್ಪ, ಚಿತ್ರದುರ್ಗ ಜಿಲ್ಲಾಧ್ಯಕ್ಷ ಶಿವಣ್ಣ, ದಾವಣಗೆರೆ ಜಿಲ್ಲಾಧ್ಯಕ್ಷ ಶಾಮನೂರು ಬಸವರಾಜ್, ಶಿವಮೊಗ್ಗ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ರಾಮನಗರ ಜಿಲ್ಲಾಧ್ಯಕ್ಷ ಕೆ.ರಾಜು ಸೇರಿದಂತೆ ವಿವಿಧ ವಿಭಾಗದ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷರು, ತಾಲೂಕು ಅಧ್ಯಕ್ಷರು ಉಪಸ್ಥಿತರಿದ್ದರು.

- - -

(ಕೋಟ್‌) 284 ಬೂತ್‌ಗಳಲ್ಲೂ ಗ್ಯಾರಂಟಿ ಸಮಿತಿ ವತಿಯಿಂದ ಪ್ರಚಾರ ಕೈಗೊಳ್ಳಬೇಕು. ಗ್ಯಾರಂಟಿಗಳು ಕಾಂಗ್ರೆಸ್‌ಗೆ ಶಕ್ತಿ ನೀಡಿದೆ. ರಾಜ್ಯ ಸರ್ಕಾರ ಪಂಚಗ್ಯಾರಂಟಿ ಯೋಜನೆಗಳಿಗಾಗಿ ಇಲ್ಲಿಯವರೆಗೆ ₹1.31 ಲಕ್ಷ ಕೋಟಿ ಹಣ ವ್ಯಯ ಮಾಡಿದೆ. ಇದನ್ನು ಜನತೆಗೆ ತಿಳಿಸುವ ಹೊಣೆಗಾರಿಕೆ ಸಮಿತಿ ಸದಸ್ಯರ ಮೇಲಿದೆ.

- ಎಚ್.ಎಂ.ರೇವಣ್ಣ, ಅಧ್ಯಕ್ಷ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ.

- - -

-30ಕೆಡಿವಿಜಿ34.ಜೆಪಿಜಿ:

ದಾವಣಗೆರೆಯಲ್ಲಿ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ, ಜಿಲ್ಲಾ, ತಾಲೂಕು ಪದಾಧಿಕಾರಿಗಳ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜಕ್ಕೆ ತಿಗಳ ಸಮುದಾಯದ ಕೊಡುಗೆ ಅಪಾರ
ಸಮಾಜದಲ್ಲಿ ಮಹಿಳೆಯರ ಸಾಧನೆ ಗಮನಾರ್ಹ