ಕುಂಟೋಜಿ ಭಾಗ ಅಭಿವೃದ್ಧಿಗೆ 8.5 ಕೋಟಿ ಅನುದಾನ

KannadaprabhaNewsNetwork |  
Published : Oct 28, 2026, 02:45 AM IST
ಅಪ್ಪಾಜಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ 8.5 ಕೋಟಿಗೂ ಅಧಿಕ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಕೆಎಸ್‌ಡಿಎಲ್‌ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ತಾಲೂಕಿನ ಕುಂಟೋಜಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ ₹8.5 ಕೋಟಿಗೂ ಅಧಿಕ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಕೆಎಸ್‌ಡಿಎಲ್‌ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ಕುಂಟೋಜಿ ಗ್ರಾಮದಲ್ಲಿ ಹನುಮಂತ ದೇವಸ್ಥಾನಕ್ಕೆ ಗುದ್ದಲಿ ಪೂಜೆ ನೆರವೇರಿಸಿ, ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿಗಳ ವಿಶೇಷ ನಗರಾಭಿವೃದ್ಧಿ ಯೋಜನೆಯಡಿಯಲ್ಲಿ ಕುಂಟೋಜಿ–ಬಿದರಕುಂದಿ ರಸ್ತೆ ಅಭಿವೃದ್ಧಿಗೆ ₹70 ಲಕ್ಷ ಹಾಗೂ ಕುಂಟೋಜಿ–ಕೋಡಿಮಟ್ಟಿ ರಸ್ತೆ ನಿರ್ಮಾಣಕ್ಕೆ ₹2 ಕೋಟಿ ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿವೆ ಎಂದರು.ಕುಂಟೋಜಿ–ಗುಡ್ಯಾಳ ರಸ್ತೆ ನಿರ್ಮಾಣಕ್ಕೆ ₹4.5 ಕೋಟಿ ಮೊತ್ತದ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದ್ದು, ಹನುಮಂತ ದೇವರ ಗುಡಿಗೆ ₹30 ಲಕ್ಷ ಹಾಗೂ ದುರ್ಗಮ್ಮದೇವಿ ದೇವಸ್ಥಾನಕ್ಕೆ ₹50 ಲಕ್ಷ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.ಮರು ಗುದ್ದಲಿ ಪೂಜೆ ಬೇಡ:

ಈ ಕಾಮಗಾರಿಗೆ ಈಗಾಗಲೇ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಅದನ್ನು ಯಾರೇ ನೆರವೇರಿಸಿರಲಿ, ಮತ್ತೊಮ್ಮೆ ಗುದ್ದಲಿ ಪೂಜೆ ಮಾಡುವುದು ಸರಿಯಲ್ಲ ಎಂದು ಶಾಸಕ ನಾಡಗೌಡ ಸ್ಪಷ್ಟಪಡಿಸಿದರು. ಕಾರ್ಯಕರ್ತರು ಒತ್ತಾಯಿಸಿ ಪೂಜೆ ನೆರವೇರಿಸಲೇಬೇಕು ಎಂದು ಮನವಿ ಮಾಡಿದ್ದರು. ಆದರೆ, ಕಾಮಗಾರಿ ಪೂರ್ಣಗೊಂಡ ಬಳಿಕ ವಿಶೇಷ ಪೂಜೆ ನೆರವೇರಿಸಿ, ಜಾತ್ರೆಯ ರೀತಿ ಕಾರ್ಯಕ್ರಮ ಆಯೋಜಿಸೋಣ ಎಂದು ತಿಳಿಸಿದರು.ಕಾಲುವೆ ನೀರಿಗೆ ಮಳೆ ಕೊರತೆ ಸವಾಲು:

ಈ ವರ್ಷ ಮಳೆ ಕೊರತೆಯಿಂದ ನದಿ ಹಾಗೂ ಜಲಾಶಯಗಳಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಕಡಿಮೆಯಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಪ್ರಸ್ತುತ ಸುಮಾರು 9 ಟಿಎಂಸಿ ನೀರು ಮಾತ್ರವಿದ್ದು, ಕುಡಿಯಲು ಮೊದಲ ಆದ್ಯತೆ ನೀಡಬೇಕಾಗಿದೆ. ಕೆರೆಗಳನ್ನು ತುಂಬಿಸುವ ಉದ್ದೇಶದಿಂದ ಕಾಲುವೆಗಳಿಗೆ ನೀರು ಹರಿಸಿದರೂ, ಮಾರ್ಗಮಧ್ಯೆ ನೂರಾರು ಅನಧಿಕೃತ ಪಂಪ್‌ಸೆಟ್‌ಗಳ ಮೂಲಕ ನೀರು ಎತ್ತಲಾಗುತ್ತಿದೆ.ಇದರಿಂದ ಕೊನೆಯ ಭಾಗದ ಗ್ರಾಮಗಳಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ. ನೀರಿನ ನಿರ್ವಹಣೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನಿಯಂತ್ರಣದಲ್ಲಿದ್ದು, ಪರಿಸ್ಥಿತಿ ಸುಧಾರಿಸಿದ ಕೂಡಲೇ ಕಾಲುವೆ ನೀರು ಒದಗಿಸಲು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದರು.ಭೂಸ್ವಾಧೀನ ರೈತರಿಗೆ ಪರಿಹಾರ:

ಕಾಲುವೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ‘ಕನ್ಸೆಂಟ್ ಅವಾರ್ಡ್’ ಅಡಿಯಲ್ಲಿ ಒಪ್ಪಿಗೆ ನೀಡುವ ರೈತರಿಗೆ ಎಕರೆಗೆ ₹25 ಲಕ್ಷ ಹಾಗೂ ನೀರಾವರಿ ಜಮೀನಿಗೆ ₹30 ಲಕ್ಷದವರೆಗೆ ಪರಿಹಾರ ನೀಡಲಾಗುತ್ತಿದೆ. ಎರಡು ತಿಂಗಳೊಳಗೆ ನೇರವಾಗಿ ರೈತರ ಖಾತೆಗೆ ಜಮೆ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ನಾಡಗೌಡ ತಿಳಿಸಿದರು.ಪಶು ಆಸ್ಪತ್ರೆ ನಿರ್ಮಾಣ:

ಮುದ್ದೇಬಿಹಾಳ ಪಟ್ಟಣದ ಬಜಾರ್ ಪ್ರದೇಶದಲ್ಲಿದ್ದ ಸರ್ಕಾರಿ ಪಶು ಆಸ್ಪತ್ರೆಯನ್ನು ಸಾರ್ವಜನಿಕರು ಹಾಗೂ ಜಾನುವಾರುಗಳ ಅನುಕೂಲಕ್ಕಾಗಿ ಪಟ್ಟಣದ ಹೊರವಲಯಕ್ಕೆ ಸ್ಥಳಾಂತರಿಸಲಾಗುತ್ತಿದೆ. ₹65 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದ್ದು, ಇದರಿಂದ ರೈತರಿಗೆ ಮತ್ತು ಪಶುಪಾಲಕರಿಗೆ ಅನುಕೂಲವಾಗಲಿದೆ ಎಂದರು.ಶಾಸಕರಿಗೆ ಸನ್ಮಾನ: ಗ್ರಾಮದ ಅಭಿವೃದ್ಧಿಗೆ ಅನುದಾನ ನೀಡಿದ ಶಾಸಕರಿಗೆ ಕುಂಟೋಜಿ ಗ್ರಾಮಸ್ಥರು ಹಾಗೂ ಚನ್ನವೀರ ಶಿವಾಚಾರ್ಯರು ಸನ್ಮಾನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೋನ್‌ಇನ್‌ನಲ್ಲಿ ಕಸದ ಸಮ್ಯಸ್ಯೆಗಳದ್ದೇ ಸದ್ದು!
ಎಸ್‌ಐಆರ್‌ನಿಂದಾಗಿ ಬೆಂಗಳೂರಿನಲ್ಲಿ 46.88 ಲಕ್ಷ ಮತದಾರರ ಹೆಸರುಗಳು ಡಿಲೀಟ್ । ರಾಜಧಾನಿಯಲ್ಲಿ ಬರೀ 59 ಲಕ್ಷ ಮತದಾರರು