ಆರೆಸ್ಸೆಸ್‌, ಬಿಜೆಪಿ ಒಂದು ನಾಣ್ಯದ ಎರಡು ಮುಖಗಳು: ಎಸ್.ಜಿ. ನಂಜಯ್ಯನಮಠ

KannadaprabhaNewsNetwork |  
Published : Oct 24, 2025, 01:00 AM IST
ಜಮಖಂಡಿ ನಗರದ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ನಿವಾಸದ ಆವರಣದಲ್ಲಿ ಮತ ಕಳ್ಳತನ ನಿಲ್ಲಿಸಿ, ಜನಾದೇಶ ಕಗ್ಗೋಲೆ ನಿಲ್ಲಿಸಿ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಸಹಿ ಮಾಡುವದರ ಮೂಲಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಚಾಲನೆ ನೀಡಿದರು. | Kannada Prabha

ಸಾರಾಂಶ

ಆರ್‌ಎಸ್‌ಎಸ್, ಬಿಜೆಪಿ ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂಬುವುದು ಇಡೀ ಜಗತ್ತಿಗೆ ಗೊತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.

ಕನ್ನಡಪ್ರಭ ವಾರ್ತೆ ಜಮಖಂಡಿ

ಆರ್‌ಎಸ್‌ಎಸ್, ಬಿಜೆಪಿ ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂಬುವುದು ಇಡೀ ಜಗತ್ತಿಗೆ ಗೊತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು. ನಗರದ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ನಿವಾಸದ ಆವರಣದಲ್ಲಿ ಮತ ಕಳ್ಳತನ ನಿಲ್ಲಿಸಿ, ಜನಾದೇಶ ಕಗ್ಗೊಲೆ ನಿಲ್ಲಿಸಿ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಸಹಿ ಮಾಡುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಆರ್‌ಎಸ್‌ಎಸ್ ನ ಪ್ರಮುಖರಾದ ಮೊಹನ್‌ ಭಾಗವತ್‌ರ ಸೂಚನೆಯನ್ನೇ ಬಿಜೆಪಿ ಪರಿಪಾಲನೆ ಮಾಡಿಕೊಳ್ಳುತ್ತ ಬರುತ್ತಿದೆ. ಬಿಜೆಪಿಯ ಜಾತ್ಯತೀತ ನಿಲುವು ಆರ್‌ಎಸ್‌ಎಸ್‌ಗೆ ಆಗಿಬರಲ್ಲ. ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರ ವಿರುದ್ಧವೂ ಆರ್‌ಎಸ್‌ಎಸ್‌ ಅಸಮಾಧಾನ ಗೊಂಡಿತ್ತು ಎಂದು ಹೇಳಿದರು.

ಭೀಮ ಸಂಚಲನ, ಬಸವಸಂಚಲನ ಮಾಡುವ ಹಕ್ಕು ಎಲ್ಲರಿಗೂ ಇದೆ ಎಂದು ಅಭಿಪ್ರಾಯಪಟ್ಟರು.

ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ಸಚಿವ ಪ್ರಿಯಾಂಕ ಖರ್ಗೆ ಅವರು ಕೇಳಿದ ಪ್ರಶ್ನೆಗಳಿಗೆ ಆರ್‌ಎಸ್‌ಎಸ್‌ನವರು ಯಾಕೆ ಉತ್ತರಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರ ಹೊರಡಿಸಿದ ಪೂರ್ವಾನುಮತಿ ಪಡೆದು ಸಬೆ, ಸಮಾರಂಭಗಳನ್ನು ನಡೆಸಬೇಕು ಎಂಬ ಆದೇಶವನ್ನೇ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದೆ. ಸರ್ಕಾರಿ ಜಾಗೆ ಬಳಕೆಗೆ ಎಲ್ಲರಿಗೂ ಅನ್ವಯವಾಗುವಂತೆ ಮಾಡಿದ್ದಾರೆ. ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಇದ್ದರೂ ಪರವಾನಗಿ ಪಡೆದುಕೊಳ್ಳಬೇಕು. ಆರ್‌ಎಸ್‌ಎಸ್‌ಗೆ ಮಾತ್ರ ಈ ಆದೇಶವಾಗಿಲ್ಲ ಎಂದು ಹೇಳಿದರು.

ಮಜ್ದೂರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೌಫಿಕ್‌ ಪಾರ್ಥನಳ್ಳಿ, ನಗರಸಭೆ ಅಧ್ಯಕ್ಷ ಈಶ್ವರ ವಾಳೆನ್ನವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾದೇವ ಪಾಟೀಲ, ಮಹೇಶ ಕೋಳಿ, ರವಿ ಯಡಹಳ್ಳಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!