ಇಂದು ಬೆಳಗಾವಿಗೆ ಆರ್‌ಎಸ್‌ಎಸ್‌ಸರಸಂಘಚಾಲಕ ಭಾಗವತ್‌

KannadaprabhaNewsNetwork |  
Published : Jul 06, 2026, 02:00 AM IST
ಮೋಹನ್ ಭಾಗವತ್ | Kannada Prabha

ಸಾರಾಂಶ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಸೋಮವಾರ ಬೆಳಗಾವಿಗೆ ಆಗಮಿಸುವ ಹಿನ್ನೆಲೆಯಲ್ಲಿ ನಗರದಲ್ಲಿನ ಮೂರು ಪ್ರಮುಖ ಸ್ಥಳಗಳ ಸುತ್ತಲಿನ ಎರಡು ಕಿ.ಮೀ.ವ್ಯಾಪ್ತಿಯನ್ನು ರೆಡ್ ಝೋನ್ ಹಾಗೂ ನೋ ಫ್ಲೈ ಝೋನ್ ಎಂದು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ:

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಸೋಮವಾರ ಬೆಳಗಾವಿಗೆ ಆಗಮಿಸುವ ಹಿನ್ನೆಲೆಯಲ್ಲಿ ನಗರದಲ್ಲಿನ ಮೂರು ಪ್ರಮುಖ ಸ್ಥಳಗಳ ಸುತ್ತಲಿನ ಎರಡು ಕಿ.ಮೀ.ವ್ಯಾಪ್ತಿಯನ್ನು ರೆಡ್ ಝೋನ್ ಹಾಗೂ ನೋ ಫ್ಲೈ ಝೋನ್ ಎಂದು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಜುಲೈ 6ರಿಂದ 14ರವರೆಗೆ ಮೋಹನ್ ಭಾಗವತ್ ಅವರು ಬೆಳಗಾವಿ ನಗರದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಭದ್ರತೆ ಹಾಗೂ ಸಾರ್ವಜನಿಕ ಶಾಂತಿ–ಸುವ್ಯವಸ್ಥೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಬಂಧ ವಿಧಿಸಲಾಗಿದೆ.

ಬೆಳಗಾವಿಯ ಫೌಂಡ್ರಿ ಕ್ಲಸ್ಟರ್ ಅತಿಥಿಗೃಹ, ಅಂಗೋಳ ಕೈಗಾರಿಕಾ ಪ್ರದೇಶ, ಸಂತ ಮೀರಾ ಶಾಲೆ, ಸಹ್ಯಾದ್ರಿ ಕಾಲೊನಿ, ಭಾಗ್ಯನಗರ ನಾಲ್ಕನೇ ಕ್ರಾಸ್, ಅಂಗೋಳ ಹಾಗೂ ಶ್ರೀ ಜಗನ್ನಾಥರಾವ್ ಜೋಶಿ ಸ್ಮಾರಕ ಭವನ, ಗೂಡ್ಸ್‌ಶೆಡ್ ರಸ್ತೆ, ಶಾಸ್ತ್ರಿನಗರ, ಖಡೆಬಜಾರ್ ಸುತ್ತಲಿನ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ಮಾನವರಹಿತ ವೈಮಾನಿಕ ಸಾಧನಗಳ ಹಾರಾಟವನ್ನು ನಿಷೇಧಿಸಲಾಗಿದೆ.

ಈ ಪ್ರದೇಶಗಳಲ್ಲಿ ಯುಎವಿ, ಯುಎಎಸ್, ಡ್ರೋನ್, ಮಾನವರಹಿತ ವಿಮಾನ ವ್ಯವಸ್ಥೆ ಹಾಗೂ ಪ್ಯಾರಾಗ್ಲೈಡರ್‌ಗಳ ಹಾರಾಟ, ಬಳಕೆ ಮತ್ತು ಕಾರ್ಯಾಚರಣೆಗೆ ಸಂಪೂರ್ಣ ನಿರ್ಬಂಧ ಇರಲಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರಡಿ ಪ್ರದತ್ತವಾದ ಅಧಿಕಾರ ಬಳಸಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಆದೇಶದ ಕಟ್ಟುನಿಟ್ಟಿನ ಅನುಷ್ಠಾನದ ಹೊಣೆಯನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ವಹಿಸಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಡೂರು ತಾಲೂಕು ಕಚೇರಿಗೆ ರಾಜೇಂದ್ರಕುಮಾರ್ ಕಠಾರಿಯಾ ಭೇಟಿ
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ: ಕೆ.ಆರ್.ನಂದಿನಿ