ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಕೆಲಸ ನಿರ್ವಹಿಸಿ: ಎಸ್ಪಿ ಉಮೇಶ

KannadaprabhaNewsNetwork |  
Published : Oct 31, 2024, 01:06 AM IST
ಸೋಮವಾರ ಯಾದಗಿರಿ ತಹಸೀಲ್ ಕಾರ್ಯಲಯದ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಯಾದಗಿರಿ ವತಿಯಿಂದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು. | Kannada Prabha

ಸಾರಾಂಶ

Run corruption free, transparent work: SP Umesh

-ಕರ್ನಾಟಕ ಲೋಕಾಯುಕ್ತ ವತಿಯಿಂದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಯಾದಗಿರಿ

ಭ್ರಷ್ಟಾಚಾರವನ್ನು ತೊಲಗಿಸಿ ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸಾರ್ವಜನಿಕರೊಂದಿಗೆ ಸೌಜನ್ಯತೆಯಿಂದ ಸ್ಪಂದಿಸಿ ಅನಗತ್ಯ ಕಾಲಹರಣ ಮಾಡದೇ ಪಾರದರ್ಶಕ ಕರ್ತವ್ಯ ನಿರ್ವಹಿಸುವಂತೆ ಹಾಗೂ ಕೆಲಸ ಮಾಡುವ ಪತ್ರಿಯೊಬ್ಬ ಅಧಿಕಾರಿಯು ಸೇವಾ ಮನೋಭಾವದೊಂದಿಗೆ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪಿ.ಕೆ ಉಮೇಶ ತಿಳಿಸಿದ್ದಾರೆ.

ಯಾದಗಿರಿ ತಹಸೀಲ್ದಾರ್‌ ಕಾರ್ಯಲಯದ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ವತಿಯಿಂದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

2024ರ “Say No To Corruption; Commit to the Nation ಧ್ಯೇಯ ವಾಕ್ಯದೊಂದಿಗೆ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ-2024 ಆಚರಣೆ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಿ ಭ್ರಷ್ಟಾಚಾರವನ್ನು ತೊಲಗಿಸಿ ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಈ ಕಛೇರಿಯು ಜನಸಾಮಾನ್ಯರ ಕಛೇರಿಯಾಗಿದ್ದು, ಪ್ರತಿಯೊಬ್ಬ ವ್ಯಕ್ತಿಯು ಒಂದಿಲ್ಲೊಂದು ಕಾರಣಕ್ಕಾಗಿ ತಹಸೀಲ್ದಾರರ ಕಚೇರಿಗೆ ಸಂರ್ಪಕಿಸಬೇಕಾಗುತ್ತದೆ, ಕಾರಣ ಪ್ರತಿ ಸಾರ್ವಜನಿಕರೊಂದಿಗೆ ಸೌಜನ್ಯತೆಯಿಂದ ಸ್ಪಂದಿಸಬೇಕು.

ಅನಗತ್ಯ ಕಾಲಹರಣ ಮಾಡದೇ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸುವಂತೆ ಹಾಗೂ ಕೆಲಸ ಮಾಡುವ ಪತ್ರಿಯೊಬ್ಬ ಅಧಿಕಾರಿಯು ಸೇವಾ ಮನೋಭಾವದೊಂದಿಗೆ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕವಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಲಾಯಿತು. ಹಿರಿಯ ಉಪ ನೋಂದಣಾಧಿಕಾರಿಗಳ ಕಾರ್ಯಲಯಕ್ಕೆ ಭೇಟಿ ನೀಡಿ, ಕಛೇರಿಯಲ್ಲಿ ಹಾಜರಿದ್ದ ಅಧಿಕಾರಿ, ಸಿಬ್ಬಂದಿಯವರಿಗೆ "ಭ್ರಷ್ಟಾಚಾರ ವಿರುದ್ಧ ಅರಿವು ಸಪ್ತಾಹ-2024 " ಕಾರ್ಯಕ್ರಮದ ಪ್ರತಿಜ್ಞಾವಿಧಿ ಬೋಧಿಸಲಾಯಿತು. ನಂತರ ಅನಗತ್ಯ ಕಾಲಹರಣ ಮಾಡದೇ ನಿಗಧಿತ ಅವಧಿಯಲ್ಲಿ ಸೇವೆ ನೀಡಲು ಹಾಗೂ ಭ್ರಷ್ಟಾಚಾರ ಮುಕ್ತ ಪದ್ಧ ತಿ ಮೈಗೂಡಿಸಿಕೊಳ್ಳುವಂತೆ ಸೂಚಿಸಲಾಯಿತು. ಕಛೇರಿಗೆ ಬರುವ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಯಿತು.

ಯಾದಗಿರಿ ತಹಸೀಲ್ದಾರ ಸುರೇಶ ಅಂಕಲಗಿ ಹಾಗೂ ತಹಸೀಲ್ದಾರ್‌ ಕಾರ್ಯಲಯದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

------

30ವೈಡಿಆರ್‌2: ಯಾದಗಿರಿ ತಹಸೀಲ್ದಾರ ಕಾರ್ಯಲಯದ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ವತಿಯಿಂದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!