ದೇಶದ ಐಕ್ಯತೆ, ಏಕತೆ, ಸಮಗ್ರತೆಗಾಗಿ ಏಕತಾ ಓಟ: ಕೋಟ ಶ್ರೀನಿವಾಸ ಪೂಜಾರಿ

KannadaprabhaNewsNetwork |  
Published : Oct 30, 2024, 12:40 AM IST
29ಓಟ | Kannada Prabha

ಸಾರಾಂಶ

ಭಾರತದ ಮಾಜಿ ಉಪ ಪ್ರಧಾನಿ, ‘ಭಾರತ ರತ್ನ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಎಂಜಿಎಂ ಕಾಲೇಜ್ ಬಳಿಯಿಂದ ಕಡಿಯಾಳಿ ವರೆಗೆ ಹಮ್ಮಿಕೊಂಡ ಏಕತಾ ಓಟ ನಡೆಯಿತು.

ಸರ್ದಾರ್ ವಲ್ಲಭ ಭಾಯಿ ಪಟೇಲ್ ಜನ್ಮದಿನದ ಅಂಗವಾಗಿ ಏಕತಾ ಓಟ ಆಯೋಜನೆ

ಕನ್ನಡಪ್ರಭ ವಾರ್ತೆ ಉಡುಪಿ

ದೇಶಕ್ಕೆ ಏಕತೆ, ಸಮಗ್ರತೆಯನ್ನು ಕಾಪಾಡುವಲ್ಲಿ ಭಾರತದ ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರು ನೀಡಿದ ಕೊಡುಗೆ ಮಹತ್ವಪೂರ್ಣ. ಅವರ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಏಕತಾ ಓಟ’ದ ಮೂಲಕ ಇಡೀ ದೇಶ ಒಂದಾಗಿ ದೇಶದ ಐಕ್ಯತೆ, ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವ ದೃಢ ಸಂಕಲ್ಪ ತೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಭಾರತದ ಮಾಜಿ ಉಪ ಪ್ರಧಾನಿ, ‘ಭಾರತ ರತ್ನ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಎಂಜಿಎಂ ಕಾಲೇಜ್ ಬಳಿಯಿಂದ ಕಡಿಯಾಳಿ ವರೆಗೆ ಹಮ್ಮಿಕೊಂಡ ಏಕತಾ ಓಟದಲ್ಲಿ ಭಾಗವಹಿಸಿ ಮಾತನಾಡಿದರು.ಏಕತಾ ಓಟದ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜೀವನಾದರ್ಶವನ್ನು ನೆನಪಿಸಿಕೊಳ್ಳುವ ಜೊತೆಗೆ 150ನೇ ಜಯಂತ್ಯುತ್ಸವದ ಪ್ರಯುಕ್ತ ಹಮ್ಮಿಕೊಂಡ ಏಕತಾ ಓಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಸಂಸದರು, ಶಾಸಕರು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.ಈ ಓಟದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಪೆರಣoಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ನಗರ ಸಭೆ ನಿಕಟಪೂರ್ವ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ನಿಕಟಪೂರ್ಣ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಮುಖರಾದ ಶ್ರೀಕಾಂತ್ ಕಾಮತ್, ನಳಿನಿ ಪ್ರದೀಪ್ ರಾವ್, ಮಂಜುಳಾ ಪ್ರಸಾದ್, ಗಿರಿಧರ್ ಆಚಾರ್ಯ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ