ಕನ್ನಡಪ್ರಭ ವಾರ್ತೆ ವಿಜಯಪುರ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನಗಳ ಸಂಯುಕ್ತಾಶ್ರಯದಲ್ಲಿ ಹಸಿರು ವಿಜಯಪುರಕ್ಕಾಗಿ ಓಡು ವಿಜಯಪುರ ಓಡು ಎಂಬ ವೃಕ್ಷಥಾನ್ ಹೆರಿಟೇಜ್ ರನ್-2024 ಗೆ ಭಾನುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ಬಳಿ ಚಾಲನೆ ನೀಡಲಾಯಿತು.ವಿಧಾನಸಭಾ ಸಭಾಪತಿ ಯು.ಟಿ.ಖಾದರ್, ಸಚಿವ ಎಂ.ಬಿ.ಪಾಟೀಲ ಚಾಲನೆ ನೀಡಿದರು. ಮೊದಲು ಬೆಳಗ್ಗೆ 6ಕ್ಕೆ, 21ಕಿ.ಮಿ ಮ್ಯಾರಥಾನ್ ಗೆ ಚಾಲನೆ ನೀಡಲಾಯಿತು. ಬಳಿಕ 6.45ಕ್ಕೆ 10ಕಿ.ಮಿ ರನ್‌ಗೆ ಚಾಲನೆ ಹಾಗೂ 7.30ಕ್ಕೆ 5 ಕಿ.ಮಿ. ಹೆರಿಟೇಜ್ ರನ್ ಗೆ ಚಾಲನೆ ನೀಡಲಾಯಿತು. ಅಂತಾರಾಷ್ಟ್ರೀಯ ಆಧುನಿಕ ತಂತ್ರಜ್ಞಾನ ಬಳಸಿ ನಡೆಸಿದ ಈ ಮ್ಯಾರಾಥಾನ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮ್ಯಾರಾಥಾನ್ ಓಟಗಾರರು, ಯುವಕರು, ಯುವತಿಯರು, ಮಕ್ಕಳು ಹಾಗೂ ವಯೋವೃದ್ಧರು ಸಹ ಸೇರಿ ಅಂದಾಜು 10ಸಾವಿರಕ್ಕೂ ಅಧಿಕ ಓಟಗಾರರು ಭಾಗಿಯಾಗಿದ್ದರು.
ಈ ವೇಳೆ ಸಭಾಪತಿ ಯು.ಟಿ.ಖಾದರ್, ಸಚಿವ ಎಂ.ಬಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಶಾಸಕ ವಿಠ್ಠಲ ಕಟಕದೊಂಡ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಸಿಇಒ ರಿಷಿ ಆನಂದ, ಎಸ್ಪಿ ಲಕ್ಷ್ಮಣ ನಿಂಬರಗಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಹೆರಿಟೇಜ್ ರನ್ ಉಸ್ತುವಾರಿಗಳಾದ ಡಾ.ಮಹಾಂತೇಶ ಬಿರಾದಾರ, ಮುರುಗೇಶ ಪಟ್ಟಣಶೆಟ್ಟಿ ಸೇರಿದಂತೆ ಅನೇಕ ಆಯೋಜಕರು, ಜನಪ್ರತಿನಿಧಿಗಳು, ಗಣ್ಯರು ಹಾಗೂ ಅಧಿಕಾರಿಗಳು ಹ್ಯಾಪಿ ರನ್ ಓಡುವ ಮೂಲಕ ಇತರರಿಗೆ ಹುರಿದುಂಬಿಸಿದರು.ಬಾಕ್ಸ್
ವಿಜೇತರಿಗೆ ಬಹುಮಾನ ವಿತರಣೆವೃಕ್ಷಥಾನ್ ಹೆರಿಟೇಜ್ ರನ್-2024ನ ಒಟ್ಟು 26 ವಿಭಾಗಗಳಲ್ಲಿ ಸ್ಪರ್ಧಿಸಿ ಗೆದ್ದ ವಿಜೇತ ಓಟಗಾರರಿಗೆ ಬಹುಮಾನ ವಿತರಣೆ ಮಾಡಲಾಯಿತು. ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯು.ಟಿ.ಖಾದರ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿಜೇತರಿಗೆ ಬಹುಮಾನ ವಿತರಿಸಿದರು.
ಈ ಬಾರಿಯ ಓಟದಲ್ಲಿ ಸುಮಾರು 60ಕ್ಕೂ ಹೆಚ್ಚು ಜನ ದೈಹಿಕ ಶಿಕ್ಷಕರು ನಿರ್ಣಾಯಕರಾಗಿ ಪಾಲ್ಗೊಂಡು ನಿಖರ ಫಲಿತಾಂಶ ಪ್ರಕಟವಾಗಲು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ರೇಸ್ ಸಮಿತಿಯ ಸಂಕೇತ ಬಗಲಿ ತಿಳಿಸಿದ್ದಾರೆ. ಮಹಿಳೆಯರು ಮತ್ತು ಪುರುಷರ ಎರಡು ಪ್ರತ್ಯೇಕ ವಿಭಾಗಗಳಲ್ಲಿ ಹಾಗೂ ನಾನಾ ವಯೋಮಾನದ ಕೆಟೆಗರಿಗಳಲ್ಲಿ ವಿಜೇತರಾಗಿದ್ದಾರೆ.