ಈ ಸಂದರ್ಭದಲ್ಲಿ ಮಾತನಾಡಿದ ರೂಪಾಲಿ ಎಸ್. ನಾಯ್ಕ ಅವರು, ಪಶ್ಚಿಮ ಪದವೀಧರ ಕ್ಷೇತ್ರದ ಅಭಿವೃದ್ಧಿ, ಪದವೀಧರರ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಅವರ ಹಕ್ಕುಗಳ ರಕ್ಷಣೆಯ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರನ್ನು ಬೆಂಬಲಿಸಬೇಕು ಎಂದರು.
ಕಾರವಾರ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರನ್ನು ಗೆಲ್ಲಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ಅವರು ಕಾರವಾರ ಮತ್ತು ಅಂಕೋಲಾದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ವಿನಂತಿಸಿದರು.
ಕಾರವಾರದ ಶ್ರೀ ಸೋಮನಾಥ ಎಜ್ಯುಕೇಶನ್ ಸೊಸೈಟಿಯ ಬಿಣಗಾದ ಶ್ರೀ ಸೋಮನಾಥ ಪ್ರೌಢಶಾಲೆ ಹಾಗೂ ಬಾಡದ ಐಟಿಐ ಕಾಲೇಜಿಗೆ ಭೇಟಿ ನೀಡಿದ ಅವರು, ಪದವೀಧರ ಮತದಾರರನ್ನು ಸಂಪರ್ಕಿಸಿ ಸಂಕನೂರ ಪರವಾಗಿ ಮತಯಾಚಿಸಿದರು. ಬಳಿಕ ದಿವೇಕರ್ ಕಾಲೇಜು ಹಾಗೂ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿಗೂ ಭೇಟಿ ನೀಡಿ ಪ್ರಚಾರ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ರೂಪಾಲಿ ಎಸ್. ನಾಯ್ಕ ಅವರು, ಪಶ್ಚಿಮ ಪದವೀಧರ ಕ್ಷೇತ್ರದ ಅಭಿವೃದ್ಧಿ, ಪದವೀಧರರ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಅವರ ಹಕ್ಕುಗಳ ರಕ್ಷಣೆಯ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರನ್ನು ಬೆಂಬಲಿಸಬೇಕು. ಪದವೀಧರರ ಧ್ವನಿಯಾಗಿ ವಿಧಾನಪರಿಷತ್ತಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.ಅಂಕೋಲಾದಲ್ಲಿಯೂ ಪ್ರಚಾರ ಮುಂದುವರಿಸಿದ ರೂಪಾಲಿ ಎಸ್. ನಾಯ್ಕ ಅವರು ಮಧ್ಯಾಹ್ನ ಜೈಹಿಂದ್ ಕಾಲೇಜು ನಂತರ ಸರ್ಕಾರಿ ಪದವಿಪೂರ್ವ ಕಾಲೇಜು, ಜೂನಿಯರ್ ಪಿ.ಎಂ. ಕಾಲೇಜು ಹಾಗೂ ಸಂಜೆ ಅಂಕೋಲಾ ಅರ್ಬನ್ ಬ್ಯಾಂಕ್, ಜಿ.ಸಿ. ಕಾಲೇಜಿಗೆ ಭೇಟಿ ನೀಡಿ ಮತಯಾಚಿಸಿದರು. ವಿವಿಧ ಶಿಕ್ಷಣ ಸಂಸ್ಥೆಗಳ ಪದವೀಧರ ಮತದಾರರನ್ನು ಸಂಪರ್ಕಿಸಿ ಬಿಜೆಪಿ ಅಭ್ಯರ್ಥಿ ಸಂಕನೂರ ಅವರನ್ನು ಬೆಂಬಲಿಸುವಂತೆ ಕೋರಿದರು.ಕಾರವಾರದ ಪ್ರಚಾರದ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ನಾಗೇಶ್ ಕುರುಡೇಕರ್, ಪ್ರಮುಖರಾದ ರವಿರಾಜ್ ಅಂಕೋಲೆಕರ್, ಮನೋಜ್ ಬಾಂದೇಕರ್, ವೈಶಾಲಿ ತಾಂಡೇಲ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.ಅಂಕೋಲಾದ ಪ್ರಚಾರದಲ್ಲಿ ಪ್ರಮುಖರಾದ ಸಂಜಯ ನಾಯ್ಕ, ರಾಜೇಂದ್ರ ನಾಯ್ಕ, ಜಯಾ ನಾಯ್ಕ, ಚಂದ್ರಕಾಂತ ನಾಯ್ಕ ಮುಂತಾದ ಪ್ರಮುಖರು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.