ನವರಾತ್ರಿ ಅಂಗವಾಗಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ರೂಪಾಲಿ

KannadaprabhaNewsNetwork |  
Published : Oct 01, 2025, 01:00 AM IST

ಸಾರಾಂಶ

ನವರಾತ್ರಿ ಅಂಗವಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಮಂಗಳವಾರ ಕಾರವಾರ ಹಾಗೂ ಅಂಕೋಲಾದ ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಕಾರವಾರ

ನವರಾತ್ರಿ ಅಂಗವಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಮಂಗಳವಾರ ಕಾರವಾರ ಹಾಗೂ ಅಂಕೋಲಾದ ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

ಕಾರವಾರದ ಬಾಡ ದುರ್ಗಾದೇವಿ ದೇವಸ್ಥಾನ, ಸದಾಶಿವಗಡ ಶ್ರೀ ದುರ್ಗಾದೇವಿ ದೇವಸ್ಥಾನ, ನಂದನಗದ್ದಾ ಶ್ರೀ ಸಂತೋಷಿಮಾತಾ ದೇವಾಲಯ, ಅಂಕೋಲಾ ಶ್ರೀ ಶಾಂತಾದುರ್ಗಾ ದೇವಸ್ಥಾನ, ಬೆಳಂಬಾರ ಶ್ರೀ ದುರ್ಗಾದೇವಿ ದೇವಸ್ಥಾನ, ಕೊಡಸಣಿ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನ ಹಾಗೂ ಅಮದಳ್ಳಿ ಶ್ರೀ ಭೂದೇವಿ ದೇವಸ್ಥಾನಗಳಿಗೆ ತೆರಳಿ, ದೇವಿಯ ದರ್ಶನ ಪಡೆದು, ದೇವಿಗೆ ಉಡಿ ಸೇವೆ ಸಲ್ಲಿಸಿ, ಪೂಜೆ ಸಲ್ಲಿಸಿ ದರ್ಶನ ಪಡೆದರು. ಅಮದಳ್ಳಿ ಬ್ರಹ್ಮದೇವವಾಡ ಶ್ರೀ ದುರ್ಗಾದೇವಿ ದರ್ಶನ ಪಡೆದರು.

ನವರಾತ್ರಿ ಸಂದರ್ಭದಲ್ಲಿ ನಮ್ಮ ನಾಡಿನ ಸಮಸ್ತ ಜನತೆಗೆ, ವಿಶೇಷವಾಗಿ ಕಾರವಾರ ಅಂಕೋಲಾ ಕ್ಷೇತ್ರದ ಜನತೆಯ ಪರವಾಗಿ ಪ್ರಾರ್ಥಿಸಿದರು.

ಈ ಸಂದರ್ಭ ಪಕ್ಷದ ಪ್ರಮುಖರು, ಕಾರ್ಯಕರ್ತರು, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.ಸ್ವರ್ಣವಲ್ಲೀಯಲ್ಲಿ ಶರನ್ನವರಾತ್ರಿ ಉತ್ಸವ:

ಶಿರಸಿ ತಾಲೂಕಿನ ಸ್ವರ್ಣವಲ್ಲೀಯಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ಶ್ರೀಮದ್ ಗಂಗಾಧರೇದ್ರ ಸರಸ್ವತೀ ಸ್ವಾಮೀಜಿ ಬ್ರಾಹ್ಮೀಮುಹೂರ್ತದಲ್ಲಿ ಮತ್ತು ಶ್ರೀ ಶ್ರೀಮದ್ ಆನಂದಬೋಧೇದ್ರ ಸರಸ್ವತೀ ಸ್ವಾಮೀಜಿ ಸಾಯಂಕಾಲ ಶ್ರೀಚಕ್ರಾರ್ಚನೆಯನ್ನು ಹಾಗೂ ಶ್ರೀದೇವಿ ಮತ್ತು ಶಾರದಾ ಪೂಜೆಗೈದರು.ಗಣಪತಿ ಪೂಜೆ, ಪಂಚಾಮೃತ ಅಭಿಷೇಕ, ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ, ದೇವಿ ಭಾಗವತ, ಅಧ್ಯಾತ್ಮ ರಾಮಾಯಣ, ಪುರಾಣ, ಶತರುದ್ರ, ಬ್ರಹ್ಮಾಸ್ತ್ರ ಜಪ, ಚಂಡಿ ಪಾರಾಯಣ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ವೈದಿಕರಿಂದ ನೆರವೇರಿದವು. ಕುದ್ರಿಗೆ, ಅಡಕಾರ, ಮಾವಿನಹೊಳೆ, ನಗರ-ಬಸ್ತಿಕೇರಿ, ಹೊಸಪಟ್ಟಣ, ಕಳಸಿನಮೂಟೆ, ಕುಚಿನಾಡು ರಾಮಕ್ಷತ್ರಿಯ ಶಿಷ್ಯರು ಹಾಗೂ ವೈಯಕ್ತಿಕ ಸೇವಾಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವಿಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿ, ಶ್ರೀ ಶ್ರೀಗಳವರಿಂದ ತೀರ್ಥ, ಆಶೀರ್ವಾದ ಮಂತ್ರಾಕ್ಷತೆ ಪಡೆದರು.ಸಾಯಂಕಾಲ ನಡೆದ ಶರನ್ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಿರಸಿ ಇನ್ನರ್ ವೀಲ್ ಕ್ಲಬ್ ಅವರಿಂದ ಭಜನೆ, ತನುಶ್ರೀ ಗಣಪತಿ ಹೆಗಡೆ ಬೆಕ್ಮನೆ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನೆರವೇರಿತು. ಅಜಯ ಹೆಗಡೆ ವರ್ಗಾಸರ ಮತ್ತು ನಿರಂಜನ ಭಟ್ಟ ಉಂಚಳ್ಳಿ ತಬಲಾದಲ್ಲಿ ಸಹಕರಿಸಿದರು. ಸ್ವರ್ಣವಲ್ಲೀಯ ನಾಟ್ಯಕಲಾ ತಂಡದವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಕಲಾವಿದರಿಗೆ ಪ್ರಮಾಣಪತ್ರ, ಸ್ಮರಣಿಕೆ ಮತ್ತು ಸುವರ್ಣಮಂತ್ರಾಕ್ಷತೆ ನೀಡಲಾಯಿತು. ಆರ್.ಎನ್. ಭಟ್ ಸುಗಾವಿ ಕಾರ್ಯಕ್ರಮ ನಿರ್ವಹಿಸಿದರು.

PREV

Recommended Stories

ಇಂದಿನಿಂದ ಮಹಿಳಾ ಏಕದಿನ ವಿಶ್ವಕಪ್‌ : 8 ತಂಡ, 31 ಪಂದ್ಯ
ಅಕ್ರಮ ತಡೆಗೆ ‘ಡಿಜಿಟಲ್‌’ ಭೂಸ್ವಾಧೀನ: ಬೈರೇಗೌಡ