ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಕಿರುಗಾವಲು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳಲ್ಲೂ ಸಾಕಷ್ಟು ಪ್ರತಿಭೆ ಇದೆ. ಇಂತಹ ಕ್ರೀಡಾಕೂಟಗಳ ಮೂಲಕ ಅದು ಹೊರ ಬರಲು ಸಾಧ್ಯ ಎಂದರು.
ಜಿಪಂ ಮಾಜಿ ಸದಸ್ಯೆ ಸುಜಾತಾ ಕೆ.ಎಂ.ಪುಟ್ಟು ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಎಲ್ಲರೂ ಕ್ರೀಡಾ ಮನೋಭಾವನೆಯೊಂದಿಗೆ ಟೂರ್ನಿಯಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಯೂ ಬಹಳ ಮುಖ್ಯವಾಗಿದೆ. ಗ್ರಾಮೀಣ ಪ್ರದೇಶಗಳ ಮಕ್ಕಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಲಿ ಎಂದು ಆಶಿಸಿದರು.14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮಂಡ್ಯ ಪ್ರಥಮ ಸ್ಥಾನ, ಕೆ.ಆರ್.ಪೇಟೆ ದ್ವಿತೀಯ ಸ್ಥಾನ ಹಾಗೂ ಬಾಲಕರ ವಿಭಾಗದಲ್ಲಿ ಮಳವಳ್ಳಿ-ಪ್ರಥಮ, ಮಂಡ್ಯ ದಕ್ಷಿಣ ದ್ವಿತೀಯ ಸ್ಥಾನ ಪಡೆದುಕೊಂಡಿತು. 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮಳವಳ್ಳಿ ಪ್ರಥಮ ಸ್ಥಾನ ಮತ್ತು ಮಂಡ್ಯ ದಕ್ಷಿಣ ದ್ವಿತೀಯ ಸ್ಥಾನ ಹಾಗೂ ಬಾಲಕಯರ ವಿಭಾಗದಲ್ಲಿ ಕೆ.ಆರ್.ಪೇಟೆ ಪ್ರಥಮ ಸ್ಥಾನ ಮತ್ತು ಶ್ರೀರಂಗಪಟ್ಟಣ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಮಂಡ್ಯ: ತಾಲೂಕು ಹೊಳಲು ಗ್ರಾಮದ ಶ್ರೀವೆಂಕಟೇಶ್ವರ ವಿದ್ಯಾನಿಕೇತನ ಶಾಲೆ ವಿದ್ಯಾರ್ಥಿನಿ ಪಲ್ಲವಿ ಎನ್.ಗೌಡ ಮಂಡ್ಯ ಜಿಲ್ಲೆಯಿಂದ ರಾಷ್ಟ್ರಮಟ್ಟದ ಇನ್ಸ್ ಸ್ಪೈರ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದ್ದಾರೆ.2025-26ನೇ ಸಾಲಿನ ಇನ್ಸ್ ಸ್ಪೈರ್ ಅವಾರ್ಡ್ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನವು ಅ.12 ರಿಂದ ಅ.14ರವರೆಗೆ ನವದೆಹಲಿಯಲ್ಲಿ ನಡೆಯಲಿದೆ. ಮಂಡ್ಯ ಜಿಲ್ಲೆಯಿಂದ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪಲ್ಲವಿ ಎನ್. ಗೌಡ ಆಯ್ಕೆಯಾಗಿದ್ದಾರೆ. ಪ್ರತಿಭಾನ್ವಿತ ಯುವ ವಿಜ್ಞಾನಿಯನ್ನು ಶಾಲಾ ಶಿಕ್ಷಣ ಇಲಾಖೆ ಮಂಡ್ಯ ಉಪ ನಿರ್ದೇಶಕರು, ಮಂಡ್ಯ ಉತ್ತರ ವಲಯದ ಬಿಇಒ ಮತ್ತು ಬಿಆರ್‌ಸಿ, ಅಭಿನವ ಭಾರತಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಶಿವಮೂರ್ತಿ ಕೀಲಾರ, ಶಾಲೆ ಮುಖ್ಯಸ್ಥ ಸಿ.ಜೆ.ಜವರೇಗೌಡ, ಸುಮಾ, ವೀಣಾ, ಶೋಭಾ ಮತ್ತು ಕುಸುಮ, ಪ್ರಸನ್ನ ಕುಮಾರ್, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗ, ಗ್ರಾಮಸ್ಥರು ಅಭಿನಂದಿಸಿದ್ದಾರೆ.