ಕನ್ನಡಪ್ರಭ ವಾರ್ತೆ ತಿಪಟೂರು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಏಳಿಗೆಗೆ ಅವಿರತ ಶ್ರಮಿಸುತ್ತಿದ್ದರೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸರ್ಕಾರದ ಕಾರ್ಯಕ್ರಮಗಳನ್ನು ಜನಸಮಾನ್ಯರಿಗೆ ತಲುಪಿಸುವ ಜೊತೆಗೆ ಬಡ ಜನರ ಏಳಿಗೆಗೆ ಶ್ರಮಿಸುತ್ತಿದ್ದಾರೆಂದು ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.ತಾಲೂಕಿನ ಶ್ರೀ ಗುರುಕುಲ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ನಡೆದ ಗಾಂಧಿ ಸ್ಮೃತಿ ಹಾಗೂ ನವಜೀವನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳಿಂದಲೂ ಧರ್ಮಸ್ಥಳ ಕ್ಷೇತ್ರದಲ್ಲಿ ಧಾರ್ಮಿಕತೆಯ ವಿಧಿವಿಧಾನಗಳನ್ನು ಅನುಸರಿಸುತ್ತಿದ್ದು ಪ್ರಪಂಚದುದ್ದಗಲಕ್ಕೂ ಧಾರ್ಮಿಕತೆಯನ್ನು ಸಾರುವುದರೊಟ್ಟಿಗೆ ದೂರದೃಷ್ಠಿಯ ಫಲದಿಂದ ರಾಜ್ಯದ ಬಡಜನತೆಯ ಏಳಿಗಗೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಮಹಿಮೆಯ ಬಗ್ಗೆ ತನ್ನ ರಾಜಕೀಯ ಜೀವನದಲ್ಲಿ ಆದ ಘಟನೆಯೊಂದನ್ನು ನೆನಪಿಸಿಕೊಂಡರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಷಡಕ್ಷರಿ ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆಗಳು ಜನತೆಗೆ ದೊರೆಯುತ್ತಿವೆ ಎಂದರು. ಗುರುಕುಲಾನಂದಾಶ್ರಮದ ಶ್ರೀ ಇಮ್ಮಡಿ ಕರಿಬಸವದೇಶೀಕೇಂದ್ರ ಸ್ವಾಮೀಜಿ ಮಾತನಾಡಿದರು. ಶ್ರೀ ಕಾಡುಸಿದ್ದೇಶ್ವರ ಮಠದ ಕಿರಿಯ ಶ್ರೀಗಳಾದ ಅಭಿನವ ಶ್ರೀಗಳು, ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ, ಸಂಪನ್ಮೂಲ ವ್ಯಕ್ತಿ ಬಿ.ಆರ್. ಗುರುಪ್ರಸಾದ್, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಅಮರಾನಾಥ್ ಶೆಟ್ಟಿ ಸೇರಿದಂತೆ ತಾಲೂಕುಗಳ ಯೋಜನಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಫೋಟೋ 13-ಟಿಪಿಟಿ1ರಲ್ಲಿ ಕಳುಹಿಸಲಾಗಿದೆ. ಶೀರ್ಷಿಕೆ : ಗಾಂಧಿ ಸ್ಮೃತಿ ಹಾಗೂ ನವಜೀವನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ, ಶಾಸಕ ಕೆ.?ಡಕ್ಷರಿ ಮತ್ತಿತರರು.