-ವಿಕಲಚೇತನ ಮಹಿಬೂಬಗೆ ಜಿಪಂ ಮಾಜಿ ಸದಸ್ಯ ಎಚ್.ಸಿ. ಪಾಟೀಲ್ ಕಿಟ್ ವಿತರಣೆ
ಕನ್ನಡಪ್ರಭ ವಾರ್ತೆ ಹುಣಸಗಿ
ನಿರ್ಗತಿಕರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಸಿ. ಪಾಟೀಲ್ ಹೇಳಿದರು.ರಾಜನ ಕೋಳೂರು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ ನಿರ್ಗತಿಕ ವಿಕಲಚೇತನರಿಗೆ ದೈನಂದಿನ ಬಳಕೆ ವಸ್ತುಗಳ ಕಿಟ್ ವಿತರಿಸಿ ಅವರು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಅತ್ಯಂತ ಬಡವರಿಗೆ ಹಾಗೂ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಉತ್ತೇಜನ ನೀಡುವುದರೊಂದಿಗೆ ಆರ್ಥಿಕ ಸುಧಾರಣೆಗೆ ಬೆನ್ನುತಟ್ಟುವ ಕೆಲಸ ಮಾಡಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.
----
ಫೋಟೊ: ಹುಣಸಗಿ ತಾಲೂಕಿನ ರಾಜನಕೋಳೂರು ಗ್ರಾಮದಲ್ಲಿ ವಿಕಲಚೇತನ ಮಹಿಬೂಬ ಅವರಿಗೆ ದೈನಂದಿನ ವಸ್ತುಗಳ ಕಿಟ್ ಗಳನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಸಿ. ಪಾಟೀಲ್ ಅವರು ವಿತರಿಸಿದರು.14ವೈಡಿಆರ್11: