ದೊಡ್ಡಬಳ್ಳಾಪುರ: ಗ್ರಾಮೀಣ ಪ್ರದೇಶ ಹಾಗೂ ದೂರದ ಪ್ರದೇಶಗಳಿಗೆ ತುರ್ತು ಆರೋಗ್ಯ ಸೇವೆ ಒದಗಿಸಲು ಸಂಚಾರಿ ಇ-ಬೈಕ್ ಗಳು ಸಹಕಾರಿ ಆಗಲಿವೆ ಎಂದು ಜಿಪಂ ಸಿಇಒ ಡಾ.ವಾಸಂತಿ ಅಮರ್ ಹೇಳಿದರು.
ಸರ್ಕಾರ ಈಗಾಗಲೇ ರಾಜ್ಯಾದ್ಯಂತ ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ ಯೋಜನೆಯನ್ನು ಜಾರಿಗೊಳಿಸಿದೆ. ಇದಕ್ಕೆ ಪೂರಕವಾಗಿ ಇಂದು ಆಪ್ಟಮ್ ಇಂಡಿಯಾ ಸಂಸ್ಥೆ ನಮ್ಮ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇ- ಬೈಕ್ ಗಳನ್ನು ನೀಡುತ್ತಿರುವುದು ಪ್ರಶಂಸನೀಯ. ಸಂಚಾರಿ ಇ- ಬೈಕ್ ಗಳು ತುರ್ತು ಆರೋಗ್ಯ ಸೇವೆಗಳನ್ನು ಜನರಿಗೆ ಒದಗಿಸಲಿದೆ. ಗ್ರಾಮೀಣ ಭಾಗದವರಿಗೆ ಸೂಕ್ತ ಸಾರಿಗೆ ವ್ಯವಸ್ಥೆಯಿಲ್ಲದೆ, ತುರ್ತು ಆರೋಗ್ಯ ಸೇವೆಗಳಲ್ಲಿ ವಿಳಂಬವಾಗುತ್ತದೆ. ಈ ರೀತಿಯ ಸಂದರ್ಭಗಳಲ್ಲಿ ಇ-ವಾಹನಗಳು ಆರೋಗ್ಯ ಸಿಬ್ಬಂದಿಗೆ ಸಹಾಯಕವಾಗುತ್ತವೆ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಆಸ್ಪತ್ರೆಗೆ ಹೋಗಲು ಸಾಧ್ಯವಾಗದವರಿಗೆ, ರೋಗಿಗಳಿಗೆ ತ್ವರಿತ ಚಿಕಿತ್ಸೆ, ಔಷಧಿಗಳನ್ನು ತಲುಪಿಸಲು ಹಾಗೂ ಮನೆ, ಮನೆಗೂ ಆರೋಗ್ಯ ಸೇವೆಯನ್ನು ಒದಗಿಸಲು ಈ ವಾಹನಗಳು ಮಹತ್ವದ ಪಾತ್ರ ವಹಿಸುತ್ತವೆ.ಇ-ಬೈಕ್‌ಗಳು ಪರಿಸರ ಸ್ನೇಹಿಯಾಗಿದ್ದು, ವಾಯುಮಾಲಿನ್ಯ ಆಗದಂತೆ ತಡೆಗಟ್ಟುತ್ತವೆ. ವಾಹನಗಳ ನಿರ್ವಹಣೆ ಸೇರಿದಂತೆ ಸರಿಯಾಗಿ ಬಳಸಿಕೊಳ್ಳಬೇಕು. ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಸರಿಯಾದ ಸಮಯಕ್ಕೆ ಆರೋಗ್ಯ ಸೇವೆ ಒದಗಿಸಿ ಎಂದು ಆರೋಗ್ಯ ಸಿಬ್ಬಂದಿಗೆ ಸಲಹೆ ನೀಡಿದರು.
ಬಾಕ್ಸ್.......
-ಇ- ಬೈಕ್ ಗಳು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಲಿವೆ.
-ಆರೋಗ್ಯ ಸೇವೆ ಮತ್ತು ಸಿಬ್ಬಂದಿಯ ಕಾರ್ಯ ಕ್ಷಮತೆ ಹೆಚ್ಚಲಿದೆ.
-ಬಡವರು, ಮಧ್ಯಮ ವರ್ಗದವರು ಹಾಗೂ ಆಸ್ಪತ್ರೆಗೆ ತೆರಳದವರಿಗೆ ಅನುಕೂಲ.
ಫೋಟೋ-