ಗ್ರಾಮೀಣ ಕೃಷಿ ಕಾರ್ಯಾನುಭವ

KannadaprabhaNewsNetwork |  
Published : Feb 22, 2024, 01:45 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್ ಬಾಟಂ  | Kannada Prabha

ಸಾರಾಂಶ

ತಾಲೂಕಿನ ಗೊಡಬನಹಾಳ್ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಹಿರಿಯೂರಿನ ತೋಟಗಾರಿಕಾ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಅಣಬೆ ಬೇಸಾಯ ಹಾಗೂ ಮಾರುಕಟ್ಟೆ ಮಾರ್ಗೋಪಾಯಗಳ ಕುರಿತು ತರಬೇತಿ ನಡೆಯಿತು.

ಚಿತ್ರದುರ್ಗ: ತಾಲೂಕಿನ ಗೊಡಬನಹಾಳ್ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಹಿರಿಯೂರಿನ ತೋಟಗಾರಿಕಾ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಅಣಬೆ ಬೇಸಾಯ ಹಾಗೂ ಮಾರುಕಟ್ಟೆ ಮಾರ್ಗೋಪಾಯಗಳ ಕುರಿತು ತರಬೇತಿ ನಡೆಯಿತು.

ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ.ಡಿ.ಶಶಿಕಲಾ ಬಾಯಿ ಅವರು ಅಣಬೆ ಬೇಸಾಯದ ಕ್ರಮಗಳು ಹಾಗೂ ಬೆಳೆದ ಅಣಬೆಗೆ ಮಾರುಕಟ್ಟೆ ಮಾರ್ಗೋಪಾಯಗಳ ಬಗ್ಗೆ ತರಬೇತಿ ಹಾಗೂ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ನಂತರ ಬೆಳೆದ ಅಣಬೆಯಿಂದ ಮೌಲ್ಯವರ್ಧಿತ ಉತ್ಪನ್ನಗಳ ಬಗ್ಗೆ ವಿಶೇಷ ಮಾಹಿತಿ ನೀಡಿದರು. ಕಟಾವು ಮಾಡಿದ ಅಣಬೆ ಬಗ್ಗೆ ಸಂಸ್ಕರಣೆ, ಶೇಖರಣೆ ಹಾಗೂ ಮೌಲ್ಯವರ್ಧನೆ ಸೇರಿದಂತೆ ವಿವಿಧ ಹಂತಗಳಲ್ಲಿ ಮನೆಯಲ್ಲಿಯೇ ಶೇಖರಣೆ ಮಾಡುವ ವಿಧಾನ ತಿಳಿಸಿಕೊಟ್ಟರು.

ಹಲವು ವರ್ಷಗಳಿಂದ ಅಣಬೆ ಬೇಸಾಯ ಮಾಡುತ್ತಿರುವ ರೈತರು ಹಾಗೂ ರೈತ ಮಹಿಳೆಯರು ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿ ಸದುಪಯೋಗ ಪಡೆದುಕೊಂಡರು. ಅಣಬೆ ಬೆಳೆಗಾರರಿಗೆ ಹಾಗೂ ಅಣಬೆ ಉದ್ಯಮಿದಾರರೊಂದಿಗೆ ಬೈ ಬ್ಯಾಕ್ ಅಥವಾ ಕಾಂಟ್ರಾಕ್ಟ್ ಫಾರ್ಮಿಂಗ್ ಮೂಲಕ ಅಣಬೆ ಖರೀದಿಸುವುದಾಗಿ ತಿಳಿಸಿದರು. ಅಣಬೆ ಉದ್ದಿಮೆದಾರ ಪ್ರಜ್ವಲ್ ಕೃಷ್ಣ ಅವರು ಮದರ್ ಎಂಟರ್‌ಪ್ರೈಸಸ್ ಸಂಸ್ಥೆವತಿಯಿಂದ ರಾಜ್ಯಾದ್ಯಂತ ಅಣಬೆ ಹಾಗೂ ಅಣಬೆ ಪುಡಿಯನ್ನು ಕಾಂಟ್ರಾಕ್ಟ್ ಫಾರ್ಮಿಂಗ್ ಮೂಲಕ ಖರೀದಿಸಲಾಗುವುದು ಎಂದು ತಿಳಿಸಿದರು.

ಹಿರಿಯೂರು ತೋಟಗಾರಿಕಾ ಮಹಾವಿದ್ಯಾಲಯದ ಕೃಷಿ ತಾಂತ್ರಿಕತೆ ಸಹಾಯಕ ಪ್ರಾಧ್ಯಾಪಕ ರಾಜಶೇಖರ ಡಿ ಬಾರ್ಕೆರ ತರಬೇತಿ ನೀಡಿದರು. ಅಣಬೆ ಬೆಳೆಗಾರರಾದ ರೇಣುಕಾ ತುಮಕೂರು ಅವರು ಅಣಬೆ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದರು.ತೋಟಗಾರಿಕಾ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಶೃತಿ ಪಿ.ಗೋಂಡಿ, ಗೊಡಬನಹಾಳ್ ಗ್ರಾಮದ ಮುಖಂಡರಾದ ಅಶೋಕ್, ಮಲ್ಲೇಶ್, ಪ್ರಸನ್ನಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ