ಶ್ರವಣಬೆಳಗೊಳದಲ್ಲಿ ಡಯಾಲಿಸಿಸ್ ಕೇಂದ್ರ
ಶ್ರೀ ಬಾಹುಬಲಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಆರೋಗ್ಯ, ಶಿಕ್ಷಣ, ಸಾಮಾಜಿಕ ಕಳಕಳಿಯಿಂದ ಆರಂಭಿಸಿದ ಸಂಸ್ಥೆಗಳಲ್ಲಿ ಇಂದು ವಿಶೇಷ ಸೌಲಭ್ಯಗಳನ್ನು ಒದಗಿಸುತ್ತಿರುವುದು ಶ್ಲಾಘನೀಯವಾದುದು. ಇದರಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಈ ಭಾಗದ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಬೆಂಗಳೂರಿನ ಫಾರ್ಟಿನೆಟ್ ಟೆಕ್ನಾಲಜಿ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಕಿಶೋರ್ ರೆಡ್ಡಿ ನೇತೃತ್ವದಲ್ಲಿ 16 ಲಕ್ಷ ರು. ವೆಚ್ಚದ 2 ಡಯಾಲಿಸಿಸ್ ಯಂತ್ರಗಳನ್ನು ನೀಡಿದ್ದು, ನವಕಾರ್ ಬಯೋ ಕೆಮಿಕಲ್ ಸಂಸ್ಥೆಯಿಂದ 2.5 ಲಕ್ಷ ರು. ವೆಚ್ಚದ ಆರ್‌ಒ ಘಟಕವನ್ನು ನೀಡಿದ್ದು, ಶ್ರುತ ಕೇವಲಿ ಟ್ರಸ್ಟ್ ಸಂಸ್ಥೆಯು ನಿರ್ವಹಣೆ ಮಾಡಲಿದೆ ಎಂದು ಹೇಳಿದರು.ರೋಟರಿ ಸಂಸ್ಥೆಯು 89 ವರ್ಷಗಳಿಂದ ಸಾಮಾಜಿಕ ಸೇವೆ ಮಾಡುತ್ತಿದ್ದು, ಶಾಲೆ, ಅಂಗನವಾಡಿ, ಆರೋಗ್ಯ ಕೇಂದ್ರಗಳು ಹಾಗೂ ರಕ್ತನಿಧಿ ಕೇಂದ್ರಗಳಿಗೆ ಸಹಕಾರ ನೀಡುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ತೆರೆದು ಸೇವೆ ಒದಗಿಸುತ್ತಿದೆ ಎಂದು ತಿಳಿಸಿದರು.
ಶ್ರವಣಬೆಳಗೊಳದ ಶ್ರೀ ಬಾಹುಬಲಿ ಆಸ್ಪತ್ರೆಯಲ್ಲಿ ಆರಂಭವಾದ ಡಯಾಲಿಸಿಸ್ ಕೇಂದ್ರವನ್ನು ರೋಟರಿ ಸಂಸ್ಥೆಯ ಮಂಜುನಾಥ್ ಅನಿಕರ್ ಉದ್ಘಾಟಿಸಿದರು.