ಗ್ರಾಮೀಣರು ಗುಡಿ ಕೈಗಾರಿಕೆ ಆರಂಭಿಸಿ ಸ್ವಾವಲಂಬಿಗಳಾಗಿ

KannadaprabhaNewsNetwork |  
Published : Sep 26, 2025, 01:00 AM IST
25 | Kannada Prabha

ಸಾರಾಂಶ

ದೇವನಹಳ್ಳಿ: ಗ್ರಾಮೀಣ ಭಾಗದಲ್ಲಿ ಗುಡಿ ಕೈಗಾರಿಕೆಗಳನ್ನು ಪ್ರಾರಂಭಿಸಿ ಅವಶ್ಯಕ ವಸ್ತುಗಳನ್ನು ತಯಾರಿಸಿ ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ದೇವನಹಳ್ಳಿ: ಗ್ರಾಮೀಣ ಭಾಗದಲ್ಲಿ ಗುಡಿ ಕೈಗಾರಿಕೆಗಳನ್ನು ಪ್ರಾರಂಭಿಸಿ ಅವಶ್ಯಕ ವಸ್ತುಗಳನ್ನು ತಯಾರಿಸಿ ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಪಟ್ಟಣದಲ್ಲಿ ತಾಲೂಕು ಗ್ರಾಮೋದ್ಯೋಗ ಕಸುಬುದಾರರ ಕೈಗಾರಿಕಾ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂಘದ 2ನೇ ಮಹಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಸಹಕಾರ ಸಂಘಗಳಲ್ಲಿ ಹಣಕಾಸಿನ ವ್ಯವಹಾರ ಮಾಡಬೇಕು. ಸಕಾಲಕ್ಕೆ ಸಾಲ ಮರುಪಾವತಿಸಿದರೆ ಸಂಘಗಳು ಅಭಿವೃದ್ಧಿಯಾಗುತ್ತದೆ. ರೈತರು ಮತ್ತು ಮಹಿಳೆಯರು ಸಹಕಾರ ಸಂಘಗಳ ಹಲವಾರು ಯೋಜನೆಗಳ ಸೇವಾ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸದಸ್ಯರೆಲ್ಲರ ಪರಿಶ್ರಮದಿಂದ ಪ್ರತಿ ತಿಂಗಳು ಸಂಘಕ್ಕೆ ಬಾಡಿಗೆ ಹಣ ಬರುವಂತೆ ಆದಾಯ ಮಾಡಿಕೊಂಡಿರುವುದು ಉತ್ತಮ ಕೆಲಸ ಎಂದರು.

ಸಂಘದ ಆರ್.ಜಯರಾಮ್ ಮಾತನಾಡಿ, ಸಹಕಾರ ಸಂಘದ ಖಾದಿ ಭವನದ 2ನೇ ಅಂತಸ್ತಿನ ಶಂಕುಸ್ಥಾಪನೆ ಆಗಿದೆ. ಅನೇಕರ ಸಹಕಾರದಿಂದ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ. ಎಲ್ಲರನ್ನು ಒಗ್ಗೂಡಿಸಿಕೊಂಡು ಸಂಘವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕು. ಪ್ರತಿಯೊಂದು ಸಮುದಾಯದ ಕುಲಕಸಬಿಗೂ ಅವರವರ ಕೆಲಸಗಳಿಗೆ ಹಲವಾರು ಕಾರ್ಯಯೋಜನೆಗಳಿದ್ದು ಸದುಪಯೋಗ ಪಡಿಸಿಕೊಳ್ಳಬೇಕು. ಖಾದಿ ಬೋರ್ಡ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗದವರಿಗೆ ಕಡಿಮೆ ಬಡ್ದಿ ದರದಲ್ಲಿ ದೊರೆಯುತ್ತಿದ್ದು ಸದ್ಬಳಸಿಕೊಳ್ಳಬೇಕು ಎಂದರು.

ಗ್ರಾಮೋದ್ಯೋಗ ಕಸಬುದಾರರ ಕೈಗಾರಿಕಾ ವಿವಿಧೋದ್ದೇಶ ಸಹಕಾರ ಸಂಘದ ಸಿಇಒ ಎಚ್.ಎನ್.ಶ್ರೀನಿವಾಸಮೂರ್ತಿ ಆಯವ್ಯಯ ಮಂಡಿಸಿದರು.

ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಎಸ್ ರವಿ, ಬಯಪ ಅಧ್ಯಕ್ಷ ಶಾಂತಕುಮಾರ್, ಬಮೂಲ್ ನಿರ್ದೇಶಕ ಎಸ್.ಪಿ.ಮುನಿರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ್, ಮುಖಂಡರಾದ ಲಕ್ಷ್ಮೀ ನಾರಾಯಣಪ್ಪ, ಪ್ರಸನ್ನ ಕುಮಾರ್, ಲೋಕೇಶ್, ಕೆ.ಸಿ.ಮಂಜುನಾಥ್, ದಿನ್ನೂರು ವೆಂಕಟೇಶ್, ಬೂದಿಗೆರೆ ಶ್ರೀನಿವಾಸಗೌಡ, ಖಾದಿ ಬೋರ್ಡ್‌ ಉಪಾಧ್ಯಕ್ಷೆ ಮಂಜುಳಾಮೋಹನ್, ನಿರ್ದೇಶಕರಾದ ಪಟಾಲಪ್ಪ, ಎಂ.ಶ್ರೀನಿವಾಸ್, ಆರ್. ಲಕ್ಷ್ಮಣಮೂರ್ತಿ, ಎಸ್.ನಾಗೇಗೌಡ, ಡಿ. ಮುನಿರಾಜು, ಬಿ.ಎಲ್.ರಘು, ಸುಮಂತ್, ನಾರಾಯಣಸ್ವಾಮಿ, ರಾಧಾ, ಮುನಿರಾಜು, ಕೈಗಾರಿಕಾ ವಿಸ್ತರಣಾಧಿಕಾರಿ ಶ್ರೀನಿವಾಸಮೂರ್ತಿ ಇತರರಿದ್ದರು.

೨೫ ದೇವನಹಳ್ಳಿ ಚಿತ್ರಸುದ್ದಿ:೦೧

ದೇವನಹಳ್ಳಿ ತಾಲೂಕು ಗ್ರಾಮೋದ್ಯೋಗ ಕಸುಬುದಾರರ ಕೈಗಾರಿಕಾ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಖಾದಿ ಭವನದ 2ನೇ ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಶಂಕುಸ್ಥಾಪನೆ ನೆರವೇರಿಸಿದರು.

PREV

Recommended Stories

2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?