ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕ್ರೀಡೆಗೆ ಹೆಸರುವಾಸಿಯಾಗಿರುವ ಚಾಮರಾಜನಗರ ಜಿಲ್ಲೆ, ಖೋಖೋ, ಕಬ್ಬಡಿ, ವಾಲಿಬಾಲ್, ಹಗ್ಗಜಗ್ಗಾಟ ಈ ಎಲ್ಲಾ ಕ್ರೀಡೆಗಳಲ್ಲಿಯು ಜಿಲ್ಲೆಯು ಹೆಸರು ಮಾಡಿದೆ. ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಪ್ರೋತ್ಸಾಹಿಸುವ ಅಗತ್ಯವಿದೆ. ಇಂತಹ ಗ್ರಾಮೀಣ ಕ್ರೀಡಾಕೂಟಗಳು ಹೆಚ್ಚು ನಡೆಯುವಂತಾಗಲಿ ಎಂದರು.
ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಲಾಗುವುದು. ಬ್ಯಾಸ್ಕೆಟ್ ಬಾಲ್ ಕೋರ್ಟ್ , ಜಿಮ್ ಸೌಲಭ್ಯಕ್ಕಾಗಿ ಅನುದಾನ ಬಿಡುಗಡೆಯಾಗಿದೆ. ಕ್ರೀಡಾಪಟುಗಳು ಉತ್ತಮ ಸಾಧನೆ ಮೂಲಕ ರಾಜ್ಯಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ತಿಳಿಸಿದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ. ಸುರೇಶ್ ಅವರು ಮಾತನಾಡಿ, ತಾಲೂಕು ಗ್ರಾಮೀಣ ಕ್ರೀಡಾಕೂಟದಲ್ಲಿ ವಿಜೇತರಾದವರನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ತಾಲೂಕು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಚೂಡ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಹಿರಿಯ ಕ್ರೀಡಾಪಟು ವಿ. ಶ್ರೀನಿವಾಸ್ ಪ್ರಸಾದ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.