ರಾಜ್ಯದ ಅಭಿವೃದ್ಧಿಗೆ ಎಸ್.ಎಂ.ಕೃಷ್ಣ ಕೊಡುಗೆ ಅಪಾರ: ದೇವರಾಜ್

KannadaprabhaNewsNetwork | Published : Dec 13, 2024 12:50 AM

ಸಾರಾಂಶ

ಚಿಕ್ಕಮಗಳೂರುರಾಜ್ಯದ ಅಭಿವೃದ್ಧಿಗೆ ವಿವಿಧ ರೀತಿ ಕೊಡುಗೆ ನೀಡಿದ ಹಿರಿಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಕಳೆದು ಕೊಂಡಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್‌.ಎಚ್‌. ದೇವರಾಜ್ ಹೇಳಿದರು.

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದೇವರಾಜ್

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ರಾಜ್ಯದ ಅಭಿವೃದ್ಧಿಗೆ ವಿವಿಧ ರೀತಿ ಕೊಡುಗೆ ನೀಡಿದ ಹಿರಿಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಕಳೆದು ಕೊಂಡಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್‌.ಎಚ್‌. ದೇವರಾಜ್ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ಎಸ್.ಎಂ.ಕೃಷ್ಣ ಅವರು ಉತ್ತಮ ಸಂಸ್ಕಾರಯುತ ಜೀವನ ನಡೆಸಿದ್ದಾರೆ. ಅವರ ಸಾಮಾಜಿಕ ಕಾರ್ಯಗಳು ಇಂದಿಗೂ ಜೀವಂತ. ಅತ್ಯಂತ ಕಿರಿಯ ವಯಸ್ಸಿನಲ್ಲಿ ವಿವಿಧ ಸ್ಥಾನಮಾನಗಳನ್ನು ಹೊಂದಿದ್ದರು ಎಂದು ಹೇಳಿದರು.

ರಾಜಧಾನಿ ಬೆಂಗಳೂರಿಗೆ ಅಭಿವೃದ್ಧಿಯ ಮೂಲಕ ಹೊಸ ರೂಪ ಕೊಡುವುದರೊಂದಿಗೆ ಐಟಿ, ಬಿಟಿ ಕೇಂದ್ರವಾಗಿ ಜಗತ್ತಿನ ಗಮನ ಸೆಳೆಯುವಂತೆ ಮಾಡಿದ ಕೀರ್ತಿಎಸ್.ಎಂ.ಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ. ಶಿವಾನಂದಸ್ವಾಮಿ ಮಾತನಾಡಿ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ದೂರದೃಷ್ಟಿಯಿಂದ ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಯಿತು. ಅವರು ಅಪರೂಪದ ರಾಜಕಾರಣಿ, ಯಾವುದೇ ಕೆಲಸ ಕೈಗೆತ್ತಿಕೊಂಡರೂ ಅದನ್ನು ಪೂರ್ಣಗೊಳಿಸದೇ ವಿರಮಿಸುತ್ತಿರಲಿಲ್ಲ. ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ಜಾರಿಗೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಬೆಟ್ಟಗೆರೆ ಪ್ರವೀಣ್, ಜಿಲ್ಲಾ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಸಿಡಿಎ ಸದಸ್ಯ ಶೃದೀಪ್, ಆಶ್ರಯ ಸಮಿತಿ ಸದಸ್ಯ ಪ್ರಸಾದ್‌ ಅಮಿನ್, ನಗರಸಭೆ ಸದಸ್ಯರಾದ ಪರಮೇಶ್‌ ರಾಜ್‌ ಅರಸ್, ಪ್ರಕಾಶ್‌ ರೈ, ಮುಖಂಡರಾದ ಜೇಮ್ಸ್‌ ಡಿಸೋಜಾ, ಶಿವರಾಂ, ಸಂತೋಷ್, ಶಬುದ್ದೀನ್, ಕುಸುಮಾ ಭರತ್, ಮಲ್ಲಿಕಾದೇವಿ, ಶೋಭಾ, ಪ್ರಕಾಶ್ ಇದ್ದರು.

11 ಕೆಸಿಕೆಎಂ 3ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಚ್‌.ಎಚ್‌. ದೇವರಾಜ್‌, ಮಂಜೇಗೌಡ, ಎಂ.ಸಿ. ಶಿವಾನಂದಸ್ವಾಮಿ, ಹಿರೇಮಗಳೂರು ರಾಮಚಂದ್ರ, ಪ್ರವೀಣ್‌ ಇದ್ದರು.

Share this article