ಆ್ಯಂಬುಲೆನ್ಸ್ ಸೇವೆಗೆ ಎಸ್.ಆರ್.ಪಾಟೀಲ ಚಾಲನೆ

KannadaprabhaNewsNetwork |  
Published : Jul 02, 2026, 03:00 AM IST
01ಹಕಹಜ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೀಳಗಿಬಾಗಲಕೋಟ ವಿಜಯಪುರ ಅವಳಿ ಜಿಲ್ಲೆಗಳ 400 ಗ್ರಾಮಗಳ ಜನರಿಗೆ ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಿಂದ ಬಹಳಷ್ಟು ಉಪಯುಕ್ತವಾಗಿದೆ ಎಂದು ಎಸ್.ಆರ್.ಪಾಟೀಲ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಬೀಳಗಿ

ಬಾಗಲಕೋಟ ವಿಜಯಪುರ ಅವಳಿ ಜಿಲ್ಲೆಗಳ 400 ಗ್ರಾಮಗಳ ಜನರಿಗೆ ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಿಂದ ಬಹಳಷ್ಟು ಉಪಯುಕ್ತವಾಗಿದೆ ಎಂದು ಎಸ್.ಆರ್.ಪಾಟೀಲ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು.

ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿರುವ ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ₹35 ಲಕ್ಷ ವೆಚ್ಚದ ನೂತನ ALS (Advanced Life Support) ಆ್ಯಂಬುಲೆನ್ಸ್‌ ಸೇವೆಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

ಅತ್ಯಾಧುನಿಕ ಜೀವ ರಕ್ಷಕ ವೈದ್ಯಕೀಯ ಉಪಕರಣಗಳನ್ನು ಹೊಂದಿರುವ ಈ ಆ್ಯಂಬುಲೆನ್ಸ್, ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಆಸ್ಪತ್ರೆ ತಲುಪುವ ಮುನ್ನವೇ ಅಗತ್ಯ ಚಿಕಿತ್ಸೆಯನ್ನು ಒದಗಿಸಲು ನೆರವಾಗಲಿದ್ದು, ಸಾರ್ವಜನಿಕರಿಗೆ ಗುಣಮಟ್ಟದ ತುರ್ತು ಆರೋಗ್ಯ ಸೇವೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು.

ಆಸ್ಪತ್ರೆಯ ಎಲ್ಲ ವೈದ್ಯರಿಗೆ ವೈದ್ಯರ ದಿನಾಚರಣೆ ಶುಭಾಶಯ ಕೋರಿದ ಅವರು ದುಬಾರಿ ವೆಚ್ಚದ ಅಲ್ಟ್ರಾ ಸೌಂಡ್ ಮತ್ತು ಎಕ್ಸರೆಯನ್ನು ಈ ಆಸ್ಪತ್ರೆಯಲ್ಲಿ ಉಚಿತವಾಗಿ ಒದಗಿಸುವ ಮೂಲಕ ರೋಗಿಗಳ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತಿದ್ದೇವೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಪಾಟೀಲ್ ಮಾತನಾಡಿ, ಸುತ್ತಲಿನ ನೂರಾರು ಹಳ್ಳಿಗಳ ಜನ ಕಿಡ್ನಿ ಅಥವಾ ಹೃದಯ ತೊಂದರೆಯಂಥ ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ದೂರದ ನಗರಗಳಿಗೆ ಹೋಗಬೇಕಾಗಿತ್ತು. ಸದ್ಯ ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದಿಂದ ಈ ಸಮಸ್ಯೆಗೆ ಪರಿಹಾರವಾಗಿದೆ. ಮುಂದಿನ ದಿನಗಳಲ್ಲಿ ಬಡ ಜನತೆಗೆ ಇನ್ನಷ್ಟು ಆಧುನಿಕ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಗುರಿ ನಮ್ಮದಾಗಿದೆ ಎಂದರು.

ವೈದ್ಯಕೀಯ ಅಧಿಕ್ಷಕ ವಿಜಯಾನಂದ ಹಳ್ಳಿ, ಆಡಳಿತ ಅಧಿಕಾರಿ ರಾಘವೇಂದ್ರ ಪಾಟೀಲ, ಎಸ್ಆರ್ ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯ,ಆಸ್ಪತ್ರೆಯ ಪ್ರಾಚಾರ್ಯ ಅಹ್ಮದ ಅಸ್ಲಾಂ, ಎಸ್ಆರ್ ಪಾಟೀಲ್ ಆಯುರ್ವೇದಿಕ್ ಮಹಾವಿದ್ಯಾಲಯದ ಪ್ರಾಚಾರ್ಯ ಸಿ.ಆರ್. ಪೂಜಾರಿ, ನಿರ್ದೇಶಕಿ ರಾಜೇಶ್ವರಿ ಬಿರಾದಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೈಜ ದೇವರ ಕೆಲಸ ಮಾಡುತ್ತಿರುವ ಕ್ರೆಡಿಟ್‌ ಆಕ್ಸೆಸ್ ಇಂಡಿಯಾ ಫೌಂಡೇಶನ್‌
ಶಾಸಕ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಿ