ವಲಸೆ ಮಕ್ಕಳಿಗೆ ಆಧಾರ್ ನೀಡಲು ಸಾಥಿ ಅಭಿಯಾನ

KannadaprabhaNewsNetwork |  
Published : Jun 05, 2025, 02:16 AM IST
ಚಿತ್ರದುರ್ಗ ಎರಡನೇ ಪುಟದ  ಲೀಡ್ | Kannada Prabha

ಸಾರಾಂಶ

ಚಿತ್ರದುರ್ಗ: ಪರಿತ್ಯಕ್ತ ಹಾಗೂ ಇನ್ನಿತರೆ ಕಾರಣಗಳಿಗೆ ಆಧಾರ್ ನೋಂದಣಿಯಾಗದ ಮಕ್ಕಳ ಆಧಾರ್ ನೋಂದಣಿಗೆ ಸಾಥಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದರು.

ಚಿತ್ರದುರ್ಗ: ಪರಿತ್ಯಕ್ತ ಹಾಗೂ ಇನ್ನಿತರೆ ಕಾರಣಗಳಿಗೆ ಆಧಾರ್ ನೋಂದಣಿಯಾಗದ ಮಕ್ಕಳ ಆಧಾರ್ ನೋಂದಣಿಗೆ ಸಾಥಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ, ಜಿಲ್ಲಾಮಟ್ಟದ ಸಾಥಿ ಸಮಿತಿ ಸದಸ್ಯರಿಗೆ ಆಯೋಜಿಸಲಾದ ಪರಿಚಯಾತ್ಮಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ಸೂಚನೆ ಪ್ರಕಾರ, ತಂದೆ-ತಾಯಿ ಇಲ್ಲದಿರುವ ಪರಿತ್ಯಕ್ತ ಮಕ್ಕಳು, ವಲಸೆ ಇನ್ನಾವುದೇ ಕಾರಣಗಳಿಂದ ಆಧಾರ್ ಹೊಂದಿರದ ಮಕ್ಕಳನ್ನು ಗುರುತಿಸಿ ಆಧಾರ್ ಕಾರ್ಡ್ ನೀಡಲು ಸಾಥಿ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. ಪರಿತ್ಯಕ್ತ ಮಕ್ಕಳಿಗೆ ಕಾನೂನು ಗುರುತು ಮತ್ತು ಸರ್ಕಾರದ ಸೌಲಭ್ಯಗಳನ್ನು ಒದಗಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಮಟ್ಟದ ಸಾಥಿ ಸಮಿತಿ ರಚಿಸಲಾದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಕಾರ್ಮಿಕ, ಪೊಲೀಸ್, ಆರೋಗ್ಯ ಇಲಾಖೆಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪರಿತ್ಯಕ್ತ ಮಕ್ಕಳ ಸರ್ವೇ ಕಾರ್ಯ ನಡೆಸಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗ್ರಾಮ ಮಟ್ಟದಲ್ಲಿ ಪರಿತ್ಯಕ್ತ ಮಕ್ಕಳ ಗುರುತಿಸುವಿಕೆಗೆ ಸಹಕರಿಸಬೇಕು. ಎಲ್ಲಾ ತಾಲೂಕುಗಳ ತಹಸೀಲ್ದಾರರು ಮುತುವರ್ಜಿ ವಹಿಸಿ ಮಕ್ಕಳ ಆಧಾರ್ ನೋಂದಣಿಗೆ ಶ್ರಮಿಸಬೇಕು ಎಂದರು. ಗ್ರಾಮ, ಹೋಬಳಿ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಲಭ್ಯವಿರುವ ಆಧಾರ್ ಕೇಂದ್ರಗಳಲ್ಲಿ ಪರಿತ್ಯಕ್ತ ಮಕ್ಕಳ ಆಧಾರ್ ನೋಂದಣಿ ಮಾಡಿಸಬೇಕು. ಆಧಾರ್ ಜತೆಗೆ ಜನನ ದೃಢೀಕರಣ ಪತ್ರವೂ ಇಲ್ಲದಿದ್ದರೆ ಕಾನೂನು ಸೇವೆಗಳ ಪ್ರಾಧಿಕಾರದ ಗಮನಕ್ಕೆ ತಂದಲ್ಲಿ ಉಚಿತವಾಗಿ ಮಾಡಿಸಿಕೊಡಲಾಗುವುದು. ಜೂ.26 ರೊಳಗೆ ಆಧಾರ್ ಇಲ್ಲದ ಮಕ್ಕಳನ್ನು ಗುರುತಿಸಿ, ಜೂ.27 ರಿಂದ ಆ.5ರ ವರೆಗೆ ಆಧಾರ್ ನೋಂದಣಿ ಮಾಡಿಸಬೇಕು. ಆ.9ಕ್ಕೆ ಜಿಲ್ಲೆಯಿಂದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೋಂದಣಿ ಕುರಿತಾದ ವರದಿ ಸಲ್ಲಿಸಲಾಗುವುದು. ನಂತರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ವರದಿ ನೀಡಲಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಸಾಕ್ಷರತೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಮಕ್ಕಳ ರಕ್ಷಣಾಧಿಕಾರಿ ಸವಿತಾ, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಪ್ಯಾನಲ್ ವಕೀಲರುಗಳಾದ ಎಂ.ವಿ.ರುದ್ರಯ್ಯ, ಪಾಲಯ್ಯ.ಸಿ, ಅನಿಸ್ ಫಾತಿಮಾ, ಬಿ.ಮಂಜುಳಾ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ