ಮೋದಿ ಸರ್ಕಾರದ 11 ವರ್ಷಗಳ ಸಾಧನೆಯ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಛಲವಾದಿ ನಾರಾಯಣಸ್ವಾಮಿ ಅಭಿಮತಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಖಾಸಗಿ ಹೋಟೆಲ್‌ನಲ್ಲಿ ಮೋದಿ ಸರ್ಕಾರದ 11 ವರ್ಷಗಳ ಸಾಧನೆಯ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ 11 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ದಶಕಗಳ ಜಡತ್ವ ಮುರಿದು, ದಿಟ್ಟ ನಿರ್ಧಾರಗಳ ಮೂಲಕ ವಿಕಸಿತ ಭಾರತಕ್ಕೆ ಭದ್ರ ಬುನಾದಿ ಹಾಕಿದೆ ಎಂದು ಹೇಳಿದರು.
ಕರ್ನಾಟಕಕ್ಕೆ ನರೇಂದ್ರ ಮೋದಿ ಸರ್ಕಾರ ಹಲವಾರು ಕೊಡುಗೆಗಳನ್ನು ನೀಡಿದೆ. ಇದರಲ್ಲಿ 2014-2024ರ ಅವಧಿಯಲ್ಲಿ, ಕರ್ನಾಟಕದ ರಸ್ತೆ, ರೈಲ್ವೆ, ನಗರಾಭಿವೃದ್ಧಿ ಮತ್ತು ಇಂಧನ ಕ್ಷೇತ್ರಗಳಲ್ಲಿ 5 ಲಕ್ಷ ಕೋಟಿ ರು.ಗಳಿಗೂ ಹೆಚ್ಚು ಹೂಡಿಕೆ ಮಾಡಿದೆ. ಕರ್ನಾಟಕದಲ್ಲಿ 1,860 ಕಿ.ಮೀ. ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದ್ದು, ಇದು ರಾಜ್ಯದ ಒಟ್ಟು ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಗುಣಗೊಳಿಸಿದೆ. ಬೆಂಗಳೂರು-ಮೈಸೂರು ಎಕ್ಸಪ್ರೆಸ್ ವೇಗೆ 8,408 ಕೋಟಿ ರು. ಮತ್ತು ಬೆಂಗಳೂರಿನ ಸ್ಯಾಟಲೈಟ್ ಟೌನ್ ರಿಂಗ್ ರೋಡ್‌ಗೆ 27 ಸಾವಿರ ಕೋಟಿ ರು. ಬಿಡುಗಡೆ ಮಾಡಲಾಗಿದೆ. ನೈಋತ್ಯ ರೈಲ್ವೆಗೆ ವಾರ್ಷಿಕ ಸರಾಸರಿ ಅನುದಾನವು ಯುಪಿಎ ಸರ್ಕಾರದ 835 ಕೋಟಿಯಿಂದ, ಮೋದಿ ಸರ್ಕಾರದ ಅವಧಿಯಲ್ಲಿ 3,424 ಕೋಟಿಗೆ ಏರಿಕೆಯಾಗಿದೆ. ರೈಲ್ವೆ ಮಾರ್ಗಗಳ ವಿದ್ಯುದ್ದೀಕರಣದಲ್ಲಿ ಐತಿಹಾಸಿಕ ಪ್ರಗತಿ ಸಾಧಿಸಲಾಗಿದೆ. 2009-14ರ ಅವಧಿಯಲ್ಲಿ ವಾರ್ಷಿಕ ಸರಾಸರಿ ಕೇವಲ 18 ಕಿಮೀ ವಿದ್ಯುದ್ದೀಕರಣವಾಗುತ್ತಿದ್ದರೆ,2014-25ರ ಅವಧಿಯಲ್ಲಿ ಇದು 16 ಪಟ್ಟು ಹೆಚ್ಚಾಗಿದೆ. ವಾರ್ಷಿಕ ಸರಾಸರಿ 294 ಕಿಮೀಗೆ ಏರಿಕೆಯಾಗಿದೆ. ಇಂದು ಕರ್ನಾಟಕದ 96.5% ರೈಲ್ವೆ ಮಾರ್ಗ ವಿದ್ಯುದ್ದೀಕರಣಗೊಂಡಿದೆ. ಕರ್ನಾಟಕದಲ್ಲಿ 10 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ ಮತ್ತು 56 ರೈಲು ನಿಲ್ದಾಣಗಳನ್ನು ಅಮೃತ ಭಾರತ ಯೋಜನೆಯಡಿ ಆಧುನೀಕರಣಗೊಳಿಸಲಾಗುತ್ತಿದೆ. ಕರ್ನಾಟಕದ ರೈಲ್ವೆ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ನಿರಂತರವಾಗಿ ಆದ್ಯತೆ ನೀಡುತ್ತಿದ್ದು, ಇದು ರಾಜ್ಯಕ್ಕೆ ನೀಡುವ ವಾರ್ಷಿಕ ಅನುದಾನದ ಹೆಚ್ಚಳದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ.2024-25ರ ಆರ್ಥಿಕ ವರ್ಷದಲ್ಲಿ ರಾಜ್ಯಕ್ಕೆ 7,559 ಕೋಟಿ ರು. ಅನುದಾನ ನೀಡಲಾಗಿದ್ದರೆ, 2025-26ರ ಸಾಲಿಗೆ ಈ ಮೊತ್ತವನ್ನು 7,564 ಕೋಟಿಗಳಿಗೆ ಹೆಚ್ಚಿಸಲಾಗಿದೆ. ಬೆಂಗಳೂರಿನ ಸುತ್ತ 271 ಕಿಮೀ ಉದ್ದದ ವೃತ್ತಾಕಾರದ ರೈಲು ಸಂಪರ್ಕ ಯೋಜನೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ.
ಜಿಲ್ಲಾಧ್ಯಕ್ಷರಾದ ಎ ಮುರುಳಿ, ನಿಯೋಜಿತ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಬಾಳೆಕಾಯಿ ರಾಮದಾಸ್, ಜಿ.ಟಿ.ಸುರೇಶ್, ಅಭಿಯಾನದ ಪ್ರಮುಖರಾದ ಡಾ.ಮಂಜುನಾಥ್, ಜಿ.ಎಚ್.ಮೋಹನ್ ಕುಮಾರ್, ಸಿಂಧು ಅಶೋಕ್, ಕಾರ್ಯಕರ್ತರು, ಪದಾಧಿಕಾರಿಗಳು ಉಪಸ್ಥಿತರಿದ್ದರು.