ರಟ್ಟೀಹಳ್ಳಿ: ಬ್ರಿಟಿಷರ ಗುಲಾಮಗಿರಿಯಿಂದ ಭಾರತವನ್ನು ಸ್ವತಂತ್ರ್ಯಗೊಳಿಸಲು ತಮ್ಮ ಪ್ರಾಣ ಅರ್ಪಣೆ ಮಾಡಿದ ಲಕ್ಷಾಂತರ ದೇಶ ಭಕ್ತರನ್ನು ನೆನೆಯುವುದು ನಮ್ಮ ಕರ್ತವ್ಯ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಭವ್ಯ ಭಾರತ ನಿರ್ಮಾಣದ ಕನಸು ಹೊತ್ತ ಲಕ್ಷಾಂತರ ದೇಶ ಭಕ್ತರ ತ್ಯಾಗ, ಬಲಿದಾನ ಇಂದು ಸಾಕಾರಗೊಂಡಿದೆ. ಸ್ವಾತಂತ್ರ್ಯಾ ನಂತರ ಭಾರತ ಅತ್ಯಂತ ಬಲಿಷ್ಠವಾಗಿದ್ದು, ಆರ್ಥಿಕವಾಗಿ, ಶೈಕ್ಷಣಿಕವಾಗಿ, ವೈದ್ಯಕೀಯ, ಕೃಷಿ ಕ್ಷೇತ್ರ ಸೇರಿದಂತೆ ಎಲ್ಲ ರಂಗಗಳಲ್ಲಿಯೂ ಭಾರತ ಬಲಿಷ್ಠವಾಗಿ ಬೆಳೆದಿದೆ ಎಂದರು.
78 ವರ್ಷದ ಸ್ವತಂತ್ರ್ಯ ನಂತರ ಭಾರತ ನಿರುದ್ಯೋಗ ಸಮಸ್ಯೆ, ಭ್ರಷ್ಟಾಚಾರ, ಬಡತನ ಇನ್ನೂ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದನ್ನು ಹೋಗಲಾಡಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮುಂದಾಗಿ ಭಾರತವನ್ನು ವಿಶ್ವ ಗುರುವಾಗಿಸಲು ಶ್ರಮವಹಿಸಬೇಕಾಗಿದೆ. ಆ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದ್ದೇ ಆದಲ್ಲಿ ಉಳಿದ ಎಲ್ಲ ಕ್ಷೇತ್ರಗಳಲ್ಲಿ ಮುಂದುವರಿಯಲು ಸಾಧ್ಯ ಎಂದರು.ತಹಸೀಲ್ದಾರ್ ಕೆ. ಗುರುಬಸವರಾಜ ಮಾತನಾಡಿ, ಭಾರತೀಯರಾದ ನಾವುಗಳು ಮೊದಲು ದೇಶಾಭಿಮಾನ, ಭಾಷಾಭಿಮಾನ ಬೆಳೆಸಿಕೊಳ್ಳಬೇಕು. ಆ ಮೂಲಕ ದೇಶದ ಅಭಿವೃದ್ಧಿಯಲ್ಲಿ ನಮ್ಮೇಲ್ಲರ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಹಕಾರಿ ಸಂಘ
ಆಂಗ್ಲೊ ಉರ್ದು ಪ್ರೌಢ ಶಾಲೆ
ಪಟ್ಟಣದ ಆಂಗ್ಲೊ ಉರ್ದು ಪ್ರೌಢ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸಂಸ್ಥೆ ಅಧ್ಯಕ್ಷ ಮಹಮ್ಮದ ಹುಸೇನ್ ಖಾಜಿ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಎಂ.ಎಂ ಮುಲ್ಲಾ, ಸಂಸ್ಥೆಯ ಕಾರ್ಯದರ್ಶಿ, ಸದಸ್ಯರು ಹಾಗೂ ಶಿಕ್ಷಕ ಸಿಬ್ಬಂದಿ ವರ್ಗದವರು ಇದ್ದರು.ತಾಲೂಕಿನ ಕಣವಿಸಿದ್ದಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಗ್ರಾಪಂ ಅಧ್ಯಕ್ಷ ಫಕ್ಕಿರೇಶ ತುಮ್ಮಿನಕಟ್ಟಿ ನೆರವೇರಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಬೇಳಕೆರಪ್ಪ ಸಣ್ಣಪ್ಪನವರ, ಬೀರೇಶ ಕರಡೆಣ್ಣನವರ, ಮಂಜಪ್ಪ ಎತ್ತಿನಹಳ್ಳಿ, ಕುಮಾರ ಹರಿಜನ, ವಸಂತ ತುಮ್ಮಿನಕಟ್ಟಿ, ರುದ್ರಪ್ಪ ಮರಡೇರ, ಶಾಲಾ ಮುಖ್ಯೋಪಾಧ್ಯಾಯ ವಿ.ಎಸ್. ಪೂಜಾರ, ಶಿಕ್ಷಕ, ಶಿಕ್ಷಕಿಯರು ಇದ್ದರು.
ಪಟ್ಟಣದ ಹೆಸ್ಕಾಂ ಕಚೇರಿಯ ಆವರಣದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸಹಾಯಕ ಕಾರ್ಯನಿರ್ವಾಹಕ ಎಂಜಿನೀಯರ್ ರಾಜೀವ ಮರಿಗೌಡ್ರ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಸೆಕ್ಷನ್ ಆಫೀಸರ್ ನಾಗರಾಜ ಸೋಮಕ್ಕಳವರ, ಸಿಬ್ಬಂದಿ ಇದ್ದರು.