ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ (ಫೆ.20) ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ನಾಮಫಲಕ, ಸೂಚನಾ ಫಲಕ, ಜೀಬ್ರಾ ಕ್ರಾಸಿಂಗ್ ಇರುವ ಕೆಲವು ಕಡೆ ರಸ್ತೆ ಅಗಲೀಕರಣಗೊಳಿಸಿ ಮಿಡಿಯನ್‌ಗೆ ಬಣ್ಣ ಹಚ್ಚಬೇಕು. ರಸ್ತೆಗಳಲ್ಲಿ ಬ್ಲಾಕ್ ಸ್ಪಾಟ್ ಇರುವ ಕಡೆ ರಸ್ತೆ ಸುರಕ್ಷತೆ ಬ್ಲಿಂಕರ್ ಗಳನ್ನು ಅಳವಡಿಸಬೇಕು ಎಂದರು.ರಾಷ್ಟ್ರೀಯ ಹೆದ್ದಾರಿಯ ಜಂಕ್ಷನ್‌ಗಳಲ್ಲಿ ಬರುವ ಕೂಡು ರಸ್ತೆಗಳನ್ನು ಅಭಿವೃದ್ಧಿಪಡಿಸಿ ಸೂಚನಾ ಫಲಕಗಳನ್ನು ಹಾಕಬೇಕು. ಇಂತಹ ಕೂಡು ರಸ್ತೆಗಳ ಬಳಿ ವಾಹನಗಳ ಸವಾರರಿಗೆ ಯಾವುದೇ ಗೊಂದಲಗಳಾಗಬಾರದು. ವಾಹನಗಳ ಸಂಚಾರಕ್ಕೆ ಸೂಕ್ತ ಮಾರ್ಗದರ್ಶನ ಮಾಡುವ ಫಲಕಗಳನ್ನು ಅಗತ್ಯವಿರುವೆಡೆ ಶೀಘ್ರವೇ ಅಳವಡಿಸಬೇಕೆಂದು ತಿಳಿಸಿದರು.
ಹೆದ್ದಾರಿ ರಸ್ತೆಗಳಲ್ಲಿ ಸೂಕ್ತವಿರುವ ಕಡೆ ಬಸ್‌ಸ್ಟಾಪ್‌ಗಳು ನಿಮಾಣವಾಗಬೇಕು. ಕೆ.ಎಸ್.ಆರ್.ಟಿ.ಸಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜೊತೆಗೂಡಿ ಬಸ್ ಸ್ಟಾಪ್ ಗಳಿಗೆ ಸ್ಥಳ ಗುರುತಿಸಬೇಕು. ವೈಜ್ಞಾನಿಕವಾಗಿ ಈ ಎಲ್ಲ ಕಾರ್ಯಗಳು ಆಗಬೇಕು. ರಸ್ತೆ ಸುರಕ್ಷತಾ ನಿಯಮಗಳು ಕಡ್ಡಾಯವಾಗಿ ಪಾಲನೆಯಾಗುವಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೆಶಕ ರಾಹುಲ್ ಗುಪ್ತಾ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಮಹೇಶ್, ಕೆಶಿಪ್ ನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವಿನಾಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟಲಕ್ಷ್ಮೀ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಸುಧಾ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಅಶೋಕ್ ಕುಮಾರ್, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.