ಧಾರವಾಡ: 2024- 25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಪ್ರತಿ ಕ್ವಿಂಟಲ್‌ಗೆ ₹5,940ರಂತೆ ಧಾರವಾಡ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ಸರ್ಕಾರದಿಂದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಖರೀದಿಸಲು ರೈತರ ನೋಂದಣಿಯು 80 ದಿನಗಳ ವರೆಗೆ ಅಂದರೆ ಮಾ. 11ರಿಂದ ಮೇ 29ರ ವರೆಗೆ ಹಾಗೂ ಉತ್ಪನ್ನ ಖರೀದಿಸಲು 90 ದಿನಗಳವರೆಗೆ ಅಂದರೆ ಮಾ. 11ರಿಂದ ಜೂ.8ರ ವರೆಗೆ ಅವಧಿಯನ್ನು ನಿಗದಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.ಕೇಂದ್ರಗಳ ವಿವರ
ಕುಂದಗೋಳ ತಾಲೂಕಿನ ಯರಗುಪ್ಪಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತದಿಂದ ಕುಂದಗೋಳ ಎ.ಪಿ.ಎಂ.ಸಿ (ಮೋ:9901583895), ಕಮಡೊಳ್ಳಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತದಿಂದ ಕಮಡೊಳ್ಳಿ (8792301165), ಯರಗುಪ್ಪಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತ- ಸಂಶಿ ( 9901583895), ಹಿರೇಹರಕುಣಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತದಿಂದ ಹಿರೇಹರಕುಣಿ (98441981169), ಕಳಸ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತದಿಂದ ಕಳಸ (8123472931), ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತದಿಂದ ಶಿರಗುಪ್ಪಿ (9538696718) ಹಾಗೂ ನವಲಗುಂದ ತಾಲೂಕಿನ ಶಿರೂರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತದಿಂದ ಶಿರೂರ (9611498476) ಖರೀದಿ ಕೇಂದ್ರಗಳಾಗಿವೆ.ಆಧಾರ ಗುರುತಿನ ಚೀಟಿಯ ಮೂಲ ಪ್ರತಿ ಹಾಗೂ ಅದರ ನಕಲು ಪ್ರತಿ. ಬ್ಯಾಂಕ್ ಖಾತೆ ಪಾಸ್ ಬುಕ್.
ಕುಸುಬೆ ತೇವಾಂಶ ಶೇ.14ಕ್ಕಿಂತ ಕಡಿಮೆ ಇರಬೇಕು. ಕುಸುಬೆ ಉತ್ಪನ್ನ ಗುಣಮಟ್ಟದ ಗಾತ್ರ, ಬಣ್ಣ ಮತ್ತು ಆಕಾರವನ್ನು ಹೊಂದಿರಬೇಕು. ಗಟ್ಟಿಯಾಗಿರಬೇಕು ಮತ್ತು ಮಣ್ಣಿನಿಂದ ಬೇರ್ಪಡಿಸಲ್ಪಟ್ಟು ಸ್ವಚ್ಛವಾಗಿರಬೇಕು, ಸಾಣಿಗೆಯಿಂದ ಸ್ವಚ್ಛಗೊಳಿಸಿರಬೇಕು. ಕ್ರಿಮಿಕೀಟಗಳಿಂದ ಮುಕ್ತವಾಗಿರಬೇಕು. ರೈತರಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದವರು ನೀಡುವ ಗೋಣಿ ಚೀಲದಲ್ಲಿ 50ಕೆ.ಜಿ. ಪ್ರಮಾಣದಲ್ಲಿ ತುಂಬಬೇಕು. ಕುಸುಬೆ ಪ್ರತಿ ಎಕರೆಗೆ ಐದು ಕ್ವಿಂಟಲ್‌ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಟ 20 ಕ್ವಿಂಟಲ್‌ವರೆಗೆ ಖರೀದಿ ಪ್ರಮಾಣ ನಿಗದಿಪಡಿಸಿ ಖರೀದಿಸಲಾಗುವುದು. ಸರ್ಕಾರದ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‌ಗೆ ₹594ರಂತೆ ಕುಸುಬೆಯನ್ನು ಖರೀದಿಸಲಾಗುವುದು.ಸರ್ಕಾರಿ ರಜೆ ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಮಾತ್ರ ಖರೀದಿಸಲಾಗುವುದು. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಉಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.