ಸಿಎಂ ಭೇಟಿಯಾದ ಬೀದರ್‌ ಸಂಸದರಾಗಿ ಆಯ್ಕೆಯಾದ ಸಾಗರ ಖಂಡ್ರೆ

KannadaprabhaNewsNetwork |  
Published : Jun 08, 2024, 12:37 AM ISTUpdated : Jun 08, 2024, 12:42 PM IST
ಚಿತ್ರ 7ಬಿಡಿಆರ್‌2ಬೆಂಗಳೂರಿನ ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿದ್ದ ಸಾಗರ ಖಂಡ್ರೆ ಅವರಿಗೆ ಆಶೀರ್ವದಿಸಿ, ಕೇಂದ್ರ ಸಚಿವ ಖೂಬಾ ವಿರುದ್ಧ ಪ್ರಚಂಡ ಬಹುಮತದಿಂದ ಜಯ ಸಾಧಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಿದರು. ಸಚಿವರಾದ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್‌ ಖಾನ್‌, ಮಾಜಿ ಸಚಿವ ರಾಜಶೇಖರ ಪಾಟೀಲ್‌, ಮಾಜಿ ಶಾಸಕ ಅಶೋಕ ಖೇಣಿ, ಮಾಜಿ ಮೇಯರ್‌ ಶರಣು ಮೋದಿ ಮತ್ತಿತರರು ಇದ್ದರು. | Kannada Prabha

ಸಾರಾಂಶ

ಕಲ್ಯಾಣ ಕರ್ನಾಟಕದಲ್ಲಿ ಐದಕ್ಕೆ ಐದೂ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಜಯ ತಂದುಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.

ಬೀದರ್‌: ಸದನದಲ್ಲಿ ಸದಾ ಹಾಜರಿದ್ದು, ಎಲ್ಲ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಶ್ರದ್ಧಯಿಂದ ಆಲಿಸಿ, ಹಿರಿಯರಿಂದ ಸಾಕಷ್ಟು ಅರಿತು, ಕಲಿತು ಸೂಕ್ತವಾಗಿ ಸ್ಪಂದಿಸುವವರು ಮಾತ್ರ ಉತ್ತಮ ಸಂಸದೀಯ ಪಟುವಾಗಿ ಬೆಳೆಯಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಅವರು, ಬೀದರ್‌ ಲೋಕಸಭಾ ಕ್ಷೇತ್ರದ ಸಂಸದರಾಗಿ ನೂತನವಾಗಿ ಆಯ್ಕೆಯಾಗಿರುವ ಸಾಗರ ಈಶ್ವರ ಖಂಡ್ರೆಗೆ ಕಿವಿಮಾತು ಹೇಳಿದ್ದಾರೆ.

ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿದ್ದ ಸಾಗರ ಖಂಡ್ರೆಗೆ ಆಶೀರ್ವದಿಸಿ, ಕೇಂದ್ರ ಸಚಿವ ಖೂಬಾ ವಿರುದ್ಧ ಪ್ರಚಂಡ ಬಹುಮತದಿಂದ ಜಯ ಸಾಧಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಿದರು. ಸದನದಲ್ಲಿ ಸಂಸದರಾಗಿ ಹೇಗೆ ರಾಜ್ಯದ ಹಿತ ಕಾಯಬೇಕು ಎಂಬ ಬಗ್ಗೆ ತಿಳಿಸಿದ ಸಿಎಂ, ಗ್ರಂಥಾಲಯದ ಪ್ರಯೋಜನೆ ಪಡೆದು ಸದನದಲ್ಲಿ ಮುತ್ಸದ್ದಿ ರಾಜಕಾರಣಿಗಳು ಮಾಡಿರುವ ಭಾಷಣ ಓದುವಂತೆಯೂ ಸಲಹೆ ಮಾಡಿದರು.

ಈ ವೇಳೆ ಅರಣ್ಯ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್‌ಖಾನ್‌, ಮಾಜಿ ಸಚಿವ ರಾಜಶೇಖರ ಪಾಟೀಲ್‌, ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ, ಮಾಜಿ ಶಾಸಕ ಅಶೋಕ ಖೇಣಿ, ಚಿಂಚೋಳಿ ಸುಭಾಷ ವಿ ರಾಠೋಡ, ಕಲಬುರಗಿ ಮಾಜಿ ಮೇಯರ್‌ ಶರಣು ಮೋದಿ ಇತರರಿದ್ದರು.ಕಲ್ಯಾಣ ಕರ್ನಾಟಕ ನಾಯಕರಿಗೆ ಸಿಎಂ ಅಭಿನಂದನೆ:

ಕಲ್ಯಾಣ ಕರ್ನಾಟಕದಲ್ಲಿ ಐದಕ್ಕೆ ಐದೂ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಜಯ ತಂದುಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸುರೆ ತೊಳ್ದು, ಭಿಕ್ಷೆ ಬೇಡ್ತಾ ಎಸ್ಸೆಸ್ಸೆಲ್ಸಿಯಲ್ಲಿ ಫಸ್ಟ್ ಕ್ಲಾಸ್
ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ ಪ್ರಕ್ರಿಯೆಗೆ ಚಾಲನೆ