ದಾಬಸ್‍ಪೇಟೆ: ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯ ಇಡೀ ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಸಾಹಿತ್ಯ ಕೊಡುಗೆ. ವಾಲ್ಮೀಕಿ ರಾಮಾಯಣ ದೇಶ, ಭಾಷೆಗೆ ಸೀಮಿತಗೊಳ್ಳದೆ ಜಾಗತಿಕವಾಗಿ ಆರಾಧಿಸಲ್ಪಟ್ಟಿದೆ ಎಂದು ವಿ- ಕೇರ್ ಇಂಟರ್ ನ್ಯಾಷನಲ್ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಅಂಚೆಮನೆ ರಾಜಶೇಖರ್ ಹೇಳಿದರು. ಪಟ್ಟಣದ ವಿ- ಕೇರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಜಾತಿ- ಧರ್ಮದ ಹೆಸರಿನಲ್ಲಿ ಮನುಷ್ಯ- ಮನುಷ್ಯರ ನಡುವಿನ ಸಂಬಂಧಗಳು ಕುಸಿಯುತ್ತಿರುವ ಪ್ರಸ್ತುತ ದಿನಗಳಲ್ಲಿ ವಾಲ್ಮೀಕಿ ರಾಮಾಯಣ ದಾರಿದೀಪವಾಗಿದೆ. ಮಹರ್ಷಿ ವಾಲ್ಮೀಕಿ ಜೀವನ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದ್ದು, ಅವರು ಇಡೀ ಮನುಕುಲಕ್ಕೆ ಮಹಾನ್ ಸಂತರಾಗಿದ್ದಾರೆ ಎಂದರು.