ಡಾ.ಅಗರಿ ನವೀನ್ ಅವರು ಮೂಲ್ಕಿ ಸುಂದರರಾಮ್ ಶೆಟ್ಟಿ ನಗರ ಸೌಹಾರ್ದ ಸಹಕಾರಿ ಸಂಘದಲ್ಲಿ 19 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲ್ಕಿ ಸುಂದರರಾಮ್ ಶೆಟ್ಟಿ ನಗರದ ವಿಜಯಾ ಬ್ಯಾಂಕ್ ಎಂಪ್ಲಾಯೀಸ್ ಲೇಔಟ್‌ನ ಅಯ್ಯಪ್ಪ ದೇವಾಲಯದಲ್ಲಿ ಶಿವನ ಗುಡಿ ಸ್ಥಾಪನೆಯ ಕಾರ್ಯದಲ್ಲಿ ಕೊಡುಗೆ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರುಸಹಕಾರ ಕ್ಷೇತ್ರದ ಸಾಧನೆಗಾಗಿ ನೀಡಲಾಗುವ ಸಹಕಾರ ರತ್ನ ಪ್ರಶಸ್ತಿಯನ್ನು ಪುತ್ತೂರು ಮೂಲದ ಹಿರಿಯ ಸಮಾಜ ಸೇವಕ ಡಾ. ಅಗರಿ ನವೀನ್ ಭಂಡಾರಿ ಅವರಿಗೆ ಬಾಗಲಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರದಾನ ಮಾಡಿದರು.
ನವೀನ್ ಭಂಡಾರಿ, ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಉತ್ತರ ವಲಯದ ಮಾಜಿ ನಿರ್ದೇಶಕರಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಡಾ.ಅಗರಿ ನವೀನ್ ಬೆಂಗಳೂರು ನಗರದ ಬೊಮ್ಮನಹಳ್ಳಿಯಲ್ಲಿ 111 ಎಕ್ರೆ ಪ್ರದೇಶದಲ್ಲಿ ಸುಸಜ್ಜಿತವಾದ ಮೂಲ್ಕಿ ಸುಂದರರಾಮ್ ಶೆಟ್ಟಿ ಬಡಾವಣೆ ನಿರ್ಮಾಣಕ್ಕೆ ಕಾರಣಕರ್ತ. ಇಲ್ಲಿ 535 ಅಪಾರ್ಟ್‌ಮೆಂಟ್‌ನ್ನು ಇವರ ನೇತೃತ್ವದಲ್ಲಿ ನಿರ್ಮಿಸಲಾಗಿದೆ.ಡಾ.ಅಗರಿ ನವೀನ್ ಅವರು ಮೂಲ್ಕಿ ಸುಂದರರಾಮ್ ಶೆಟ್ಟಿ ನಗರ ಸೌಹಾರ್ದ ಸಹಕಾರಿ ಸಂಘದಲ್ಲಿ 19 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲ್ಕಿ ಸುಂದರರಾಮ್ ಶೆಟ್ಟಿ ನಗರದ ವಿಜಯಾ ಬ್ಯಾಂಕ್ ಎಂಪ್ಲಾಯೀಸ್ ಲೇಔಟ್‌ನ ಅಯ್ಯಪ್ಪ ದೇವಾಲಯದಲ್ಲಿ ಶಿವನ ಗುಡಿ ಸ್ಥಾಪನೆಯ ಕಾರ್ಯದಲ್ಲಿ ಕೊಡುಗೆ ನೀಡಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.