ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ತಾಲೂಕು ಘಟಕ ಸಾಹಿತ್ಯ ಪ್ರೇರಣೆ ಕಾರ್ಯಕ್ರಮದಲ್ಲಿ ಸಾಹಿತ್ಯ ಸಂಚಾರ ಇದರ 45ನೇ ಕಾರ್ಯಕ್ರಮ ಇತ್ತೀಚೆಗೆ ಪಾಂಡೇಶ್ವರದ ಯಡಬೆಟ್ಟು ವಿದ್ಯೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ತಾಲೂಕು ಘಟಕ ಸಾಹಿತ್ಯ ಪ್ರೇರಣೆ ಕಾರ್ಯಕ್ರಮದಲ್ಲಿ ಸಾಹಿತ್ಯ ಸಂಚಾರ ಇದರ 45ನೇ ಕಾರ್ಯಕ್ರಮ ಇತ್ತೀಚೆಗೆ ಪಾಂಡೇಶ್ವರದ ಯಡಬೆಟ್ಟು ವಿದ್ಯೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಈ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ ಬ್ರಹ್ಮಾವರ ತಾಲೂಕು ಘಟಕ ಅಧ್ಯಕ್ಷ ರಾಮಚಂದ್ರ ಐತಾಳ್ ಮಾತನಾಡಿ, ಸಾಹಿತ್ಯ ಎಂದರೆ ಭಾವನೆಗಳನ್ನು, ಸೃಜನಶೀಲತೆಯನ್ನು, ಪಾಂಡಿತ್ಯವನ್ನು ಕೊಡುವ ಪ್ರಬಲ ಮಾಧ್ಯಮ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ರಕ್ಷಕರು ಚಟುವಟಿಕೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಕಥೆ ಕವನ ರಚನೆಯನ್ನು ಚಟುವಟಿಕೆಗಳ ಮೂಲಕ ವಿವರಿಸಿದರು.ಪರಿಷತ್ತಿನ ಪ್ರಮುಖರಾದ ಜಿ.ನಾಗೇಶ ಮಯ್ಯ, ಅಚ್ಯುತ ಪೂಜಾರಿ, ನರಸಿಂಹಮೂರ್ತಿ ಮಾರ್ಗದರ್ಶನ ನೀಡಿದರು. ಮುಖ್ಯೋಪಾಧ್ಯಾಯಿನಿ ಇಂದಿರಾ ನಾಯರಿ ಇಂತಹ ಉತ್ತಮ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ನೀಡಿ ಸಹಕರಿಸಿದ ಬಗ್ಗೆ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.