ರಾಮನಗರ: ಕಾಲಮಿತಿಯೊಳಗೆ ಸರ್ಕಾರಿ ಸೇವೆ ಒದಗಿಸುವ ನಿಟ್ಟಿನಲ್ಲಿ ಅನುಷ್ಠಾನಗೊಂಡಿರುವ `ಸಕಾಲ'''''''' ಯೋಜನೆಯಡಿ ಬೆಂಗಳೂರು ದಕ್ಷಿಣ ಜಿಲ್ಲೆ ರಾಜ್ಯದಲ್ಲಿಯೇ ಕಳೆದ ಡಿಸೆಂಬರ್ ತಿಂಗಳಿನಲ್ಲಿ ಮೂರನೇ ಸ್ಥಾನ ಪಡೆದಿದೆ.
ಇನ್ನು ಪ್ರಥಮ ಸ್ಥಾನದಲ್ಲಿರುವ ಬಾಗಲಕೋಟೆ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ 91,784 ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರಲ್ಲಿ 75,307 ಅರ್ಜಿಗಳನ್ನು (ಶೇ.78.69) ವಿಲೇವಾರಿಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನದಲ್ಲಿದ್ದು, ಇಲ್ಲಿ ಸಲ್ಲಿಕೆಯಾದ 1,00,627 ಅರ್ಜಿಗಳ ಪೈಕಿ 90,659 ಅರ್ಜಿಗಳು (ಶೇ.78.42) ಕಾಲಮಿತಿಯೊಳಗೆ ವಿಲೇವಾರಿಗೊಂಡಿವೆ.
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆ ಕಂದಾಯ ಇಲಾಖೆಯಲ್ಲಿ ಒಟ್ಟು 11,401 ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರಲ್ಲಿ (ಹಳೇ ಅರ್ಜಿಗಳು ಸೇರಿ) 7909 ಅರ್ಜಿಗಳು ವಿಲೇವಾರಿಯಾಗಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಸಲ್ಲಿಕೆಯಾದ 7710 ಅರ್ಜಿಗಳ ಪೈಕಿ 7909 ಅರ್ಜಿಗಳು ವಿಲೇವಾರಿವಾರಿಗೊಂಡಿವೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿನ 15,835 ಅರ್ಜಿಗಳ ಪೈಕಿ 15,920 ಅರ್ಜಿಗಳ ವಿಲೇವಾರಿಯಾಗಿವೆ.ಇಲ್ಲಿವರೆಗೆ ಸಕಾಲ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆ ಮೂರನೇ ಸ್ಥಾನದೊಳಗೆ ಅವಕಾಶ ಪಡೆದಿರಲೇ ಇಲ್ಲ. ಸದರಿ ಯೋಜನೆ ಆರಂಭವಾದಾಗಿನಿಂದ (2012 ರಿಂದ) ಈವರೆಗೆ ಸರ್ಕಾರ ಈ ಯೋಜನೆಯ ಪ್ರಗತಿಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಮಾಹೆಗಳ ಪೈಕಿ ಜಿಲ್ಲೆಯು ಒಂದರೆಡು ಬಾರಿ 5 ಮತ್ತು 6ನೇ ಸ್ಥಾನ ಗಳಿಸಿತ್ತು.
ಸಕಾಲ ಯೋಜನೆಯಡಿ ಅರ್ಜಿಗಳ ವಿಲೇವಾರಿ ಕುರಿತಂತೆ ರಾಜ್ಯ ಸರ್ಕಾರ ಪ್ರತಿ ತಿಂಗಳು ರ್ಯಾಂಕಿಂಗ್ ಪಟ್ಟಿ ಪ್ರಕಟಿಸುತ್ತದೆ. ಜಿಲ್ಲೆಗಳ ಸಾಧನೆಗೆ ಅನುಗುಣವಾಗಿ ಸ್ಥಾನ ನೀಡಲಾಗುತ್ತದೆ. ಕಾಲ ಮಿತಿಯಲ್ಲಿ ಕಡತ ವಿಲೇವಾರಿಯಾಗಬೇಕು ಹಾಗೂ ನಾಗರೀಕರು ಸರ್ಕಾರಿ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸಕಾಲ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿ ಸಾರ್ವಜನಿಕರಿಗೆ ನಿಗದಿತ ಅವಧಿಯೊಳಗೆ ಸರ್ಕಾರದ ಸೇವೆಗಳು ಲಭ್ಯವಾಗಲಿವೆ.
ಕೋಟ್ ................
- ಯಶವಂತ್ ವಿ.ಗುರುಕರ್ , ಜಿಲ್ಲಾಧಿಕಾರಿಗಳು, ಬೆಂ.ದಕ್ಷಿಣ ಜಿಲ್ಲೆ
ಸಕಾಲ ಯೋಜನೆ ಅಡಿಯಲ್ಲಿ 114 ಇಲಾಖೆ - ಸಂಸ್ಥೆಗಳ 1446 ಸೇವೆಗಳನ್ನು ಒದಗಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ನಿಗದಿತ ಕಾಲಮಿತಿಯೊಳಗೆ ಅರ್ಜಿಗಳು ವಿಲೇವಾರಿಯಾಗುವುದರಿಂದ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಪದೇ ಪದೇ ಅಲೆಯುವುದು ತಪ್ಪುತ್ತದೆ. ಜೊತೆಗೆ ಆಡಳಿತವೂ ಪಾರದರ್ಶಕವಾಗಿ ನಡೆಯಲು ಈ ಯೋಜನೆ ಸಹಕಾರಿಯಾಗಿದೆ. ಸಕಾಲ ಯೋಜನೆ ಅನುಷ್ಠಾನದಲ್ಲಿ ಡಿಸೆಂಬರ್ ಮಾಹೆಯಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಮೂರನೇ ಸ್ಥಾನ ಪಡೆದುಕೊಂಡಿರುವುದು ಸಂತಸ ತಂದಿದೆ.
2ಕೆಆರ್ ಎಂಎನ್ 1,2,3.ಜೆಪಿಜಿ
2.ಯಶವಂತ್ ವಿ.ಗುರುಕರ್ , ಜಿಲ್ಲಾಧಿಕಾರಿಗಳು, ಬೆಂ.ದಕ್ಷಿಣ ಜಿಲ್ಲೆ.
3.ಚಂದ್ರಯ್ಯ, ಅಪರ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು, ಸಕಾಲ ಸಮನ್ವಯ ಸಮಿತಿ, ಬೆಂ.ದಕ್ಷಿಣ ಜಿಲ್ಲೆ.4.ಸಕಾಲ ಯೋಜನೆ ಲೋಗೊ