ಕನ್ನಡಪ್ರಭ ವಾರ್ತೆ ಸಕಲೇಶಪುರ
ಕಳೆದ ಮಾರ್ಚ್ ತಿಂಗಳಿನಿಂದ ಮುಂಗಾರು ಆಗಮಿಸದ ಕಾರಣ ಕಾಫಿ ಹೂವಾಗಲು ತೊಂದರೆಯಾಗಿದ್ದು ಭಾರಿ ಪ್ರಮಾಣದಲ್ಲಿ ಹಾನಿ ಸಂಭವಿಸಿದರೆ ಜುಲೈ ಮೊದಲವಾರದಲ್ಲಿ ಅಪಾರ ಪ್ರಮಾಣದಲ್ಲಿ ಅತಿವೃಷ್ಟಿಯಾಗಿದ್ದರಿಂದ ಬೆಳೆ ಸಾಕಷ್ಟು ಧರೆಸೇರುವ ಮೂಲಕ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಕಾಫಿ ತೋಟಗಳ ಸಮೀಕ್ಷೆ ನಡೆಸಿ ವೈಜ್ಞಾನಿಕ ಪರಿಹಾರ ನೀಡಬೇಕು. ಈ ನಿಟ್ಟಿನಲ್ಲಿ ಕೇಂದ್ರದ ಮಂತ್ರಿಯಾಗಿರುವ ಎಚ್.ಡಿ ಕುಮಾರಸ್ವಾಮಿಯವರ ಗಮನ ಸೇಳೆಯಲಾಗುವುದು ಎಂದರು. ಕನಿಷ್ಠ ಅವಧಿಯಲ್ಲಿ ಅತಿಯಾದ ಮಳೆಯಿಂದ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸಾಕಷ್ಟು ವಿದ್ಯುತ್ ಕಂಬಗಳು ಧರೆಗುರುಳಿರುವ ಪರಿಣಾಮ ವಾರದಿಂದಲು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಣ್ಮರೆಯಾಗಿದೆ. ವಿದ್ಯುತ್ ಕಂಬಗಳನ್ನು ದುರಸ್ಥಿಪಡಿಸಲು ಸಿಬ್ಬಂದಿಗಳ ಕೊರತೆ ಇದೆ ಎನ್ನಲಾಗುತ್ತಿದೆ. ಆದರೆ ಜಿಲ್ಲೆಯ ಹಲವೆಡೆ ಇದುವರಗೆ ಮಳೆಯೆ ಆಗಿಲ್ಲ. ಅಲ್ಲಿರುವ ಸಿಬ್ಬಂದಿಯನ್ನು ಇಲ್ಲಿ ನಿಯೋಜಿಸುವ ಮೂಲಕ ಸಕಾಲಕ್ಕೆ ವಿದ್ಯುತ್ ನೀಡಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿರುವ ತಾಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ. ಇದಲ್ಲದೆ ಸೆಸ್ಕಾಂ, ಅರಣ್ಯ ಹಾಗೂ ಲೋಕಪಯೋಗಿ ಇಲಾಖೆಯ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ ಎಂದರು.
ತಾಲೂಕು ಆಡಳಿತ ನಿರ್ಲಕ್ಷ್ಯದಿಂದ ೯೪ ಸಿ ಅಡಿ ಅರ್ಜಿ ಸಲ್ಲಿಸಿರುವ ಸಾವಿರಾರು ಜನರು ಹಕ್ಕುಪತ್ರಕ್ಕಾಗಿ ಕಾದುಕುಳಿತಿದ್ದರೆ. ಹಕ್ಕುಪತ್ರ ವಿತರಿಸಲು ಕುಂಟು ನೆಪ ಹೇಳುವುದು ಸರಿಯಲ್ಲ. ಸಾರ್ವಜನಿಕರ ಸಹನೆ ಪರೀಕ್ಷೆ ಒಳ್ಳೆಯದಲ್ಲ ಎಂದು ಎಚ್ಚರಿಸಿದ ಅವರು, ಪಟ್ಟಣದಲ್ಲಿ ಎಸ್.ಬಿ. ವೃತ್ತ ಸಮೀಪದ ಜನನಿಬಿಡ ಪ್ರದೇಶದಲ್ಲಿ ಫುಡ್‌ಕೋರ್ಟ್ ನಿರ್ಮಾಣ ಮಾಡುತ್ತಿರುವುದು ಅವೈಜ್ಞಾನಿಕ. ಹಳೇ ತಾಲೂಕು ಕಚೇರಿ ಅವರಣದಲ್ಲಿ ಫುಡ್‌ಕೋರ್ಟ್ ನಿರ್ಮಾಣ ಮಾಡುವುದರಿಂದ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೂ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ತಾಲೂಕು ಆಡಳಿತ ಗಮನಹರಿಸಬೇಕು ಎಂದು ಆಗ್ರಹಿಸಿದರು.ಪಟ್ಟಣದ ಸುಬಾಷ್ ಮೈದಾನದಲ್ಲಿ ಕಳೆದ ಮೂರು ವರ್ಷಗಳಿಂದ ಹಕಲಾಗಿರುವ ಕಸದ ರಾಶಿ ತೆರವುಗೊಳಿಸದೆ ಸ್ಥಳಿಯರಿಗೆ ಸಮಸ್ಯೆ ಎದುರಿಸುತ್ತಿದ್ದಾರೆ. ಕಸದ ರಾಶಿ ತೆರವುಗೊಳಿಸುವುದಾಗಿ ಹೇಳಿದ್ದ ರಾಜಕೀಯ ನಾಯಕರು ತೆರುವುಗೊಳಿಸದಿರಲು ಯಾವ ಸಮಸ್ಯೆ ಎದುರಾಗಿದೆ ಎಂಬುದನ್ನು ಸಾರ್ವಜನಿಕರಿಗೆ ಉತ್ತರಿಸಬೇಕು ಎಂದರು.