ಹೊಸದುರ್ಗ: ತಾಲೂಕಿನಲ್ಲಿ ಬಡವರಿಗಾಗಿ ಸರ್ಕಾರದಿಂದ ನೀಡಲಾಗುತ್ತಿರುವ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದ್ದರೂ ಅಧಿಕಾರಿಗಳು ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಡಿ.ಶೇಖರ್ ಆರೋಪಿಸಿದ್ದಾರೆ.
ಹೊಸದುರ್ಗ ಪಟ್ಟಣ ಸೇರಿದಂತೆ ಬೆಲಗೂರು ಗ್ರಾಮದಲ್ಲಿ ದೊಡ್ಡದಾದ ಗೋಡೌನ್‌ಗಳನ್ನು ಮಾಡಿಕೊಳ್ಳಲಾಗಿದ್ದು ಅವುಗಳಲ್ಲಿ ಶೇಖರಿಸಲಾಗಿದ್ದರೂ ಅವುಗಳನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಪೊಲೀಸರಾಗಲಿ, ಆಹಾರ ಇಲಾಖೆಯ ಅಧಿಕಾರಿಗಳಾಗಲಿ ಮುಂದಾಗದಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ತಿಳಿಸಿದ್ದಾರೆ.
ಬೆಲಗೂರಿನ ವ್ಯಕ್ತಿಯೊರ್ವ ಇಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಈ ಬಗ್ಗೆ ಹಲವಾರು ಬಾರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಅಧಿಕಾರಿಗಳು ಕೂಡ ಅಲ್ಲಿ ಅಂತಹ ಯಾವುದೇ ಚಟುವಟಿಕೆ ನಡೆಯುತ್ತಿಲ್ಲ ಎನ್ನುವ ಉತ್ತರ ನೀಡುತ್ತಿದ್ದಾರೆ. ಆದರೆ ಹಾಡ ಹಗಲೇ ಈ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಫೋಟೋ ಸಹಿತ ಕರೆ ಮಾಡಿ ತಿಳಿಸುತ್ತಿದ್ದಾರೆ. ಈಗಲಾದರೂ ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮ ವಹಿಸುವಂತೆ ಒತ್ತಾಯಿಸಿದ್ದಾರೆ.