ಹಾರೋಹಳ್ಳಿ: ಕೊಟ್ಟಗಾಳು ಗ್ರಾಮ ಪಂಚಾಯಿತಿಯ ಗೊಲ್ಲಹಳ್ಳಿ ಗ್ರಾಮದ ಸರ್ವೆ ನಂ,105 /7ಮತ್ತು 38/3ರಲ್ಲಿ ಸರ್ಕಾರ 1999ನೇ ಸಾಲಿನ ಆಶ್ರಯ ಯೋಜನೆಯಲ್ಲಿ ಹಂಚಿಕೆ ಮಾಡಿದ್ದ ಆಶ್ರಯ ನಿವೇಶನಗಳನ್ನು ನಕಲಿ ಹಕ್ಕುಪತ್ರ ಸೃಷ್ಟಿಸಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲಂಕುಶವಾಗಿ ಪರಿಶೀಲಿಸುವಂತೆ ಲೋಕಾಯುಕ್ತಕ್ಕೆ ರಾಜ್ಯ ಸರ್ಕಾರ ಆದೇಶ ನೀಡಿದೆ.
ಹಾರೋಹಳ್ಳಿ ತಾಲೂಕಿನ ಕೊಟ್ಟಗಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲಹಳ್ಳಿ ಸರ್ವೆ ನಂ.105/7 ಮತ್ತು 38/3ರಲ್ಲಿ 1999ನೇ ಸಾಲಿನಲ್ಲಿ ಆಶ್ರಯ ಯೋಜನೆಯಡಿ ಹಂಚಿಕೆ ಮಾಡಿರುವ ಆಶ್ರಯ ನಿವೇಶನಗಳ ನಕಲಿ ಹಕ್ಕು ಪತ್ರಗಳನ್ನು ಸೃಷ್ಟಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡಿ, ಕನಕಪುರ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಸಿದ್ದರು.
ಈ ನೋಂದಣಿ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಎಸ್.ಸುರೇಶ್ ಅವರು ಸಾಕ್ಷಿಯಾಗಿ ಸಹಕರಿಸಿದ್ದು ನೋಂದಣಿಯಾಗಿರುವ ದಾಖಲೆಗಳ ಆಧಾರದ ಮೇಲೆ ಕೊಟ್ಟಗಾಳು ಗ್ರಾಮ ಪಂಚಾಯಿತಿಯ ಅನರ್ಹ ಫಲಾನುಭವಿಗಳಿಗೆ ಅಕ್ರಮವಾಗಿ ಮತ್ತು ಅನಧಿಕೃತವಾಗಿ ಇ-ಖಾತೆಯನ್ನು ಮಾಡಿ, ಕರ್ತವ್ಯಲೋಪ ಎಸಗಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಎಸಿಬಿಗೆ ದೂರು ನೀಡಿದ್ದರು. ಅಲ್ಲದೆ ಈ ಹಿಂದೆ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ವರಿ ಅವರೂ ಸಹ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿದ್ದರು. ಅಲ್ಲದೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಕಾಧಿಕಾರಿಯೂ ಸಹ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ಸಾಮ್ಯತೆ ಹೊಂದಿದ್ದು ಹೆಚ್ಚಿನ ತನಿಖೆ ನಡೆಸಬಹುದು ಎಂದು ಅಭಿಪ್ರಾಯ ತಿಳಿಸಿದ್ದರು.
ಗಂಭೀರ ಸ್ವರೂಪದ ಅಪರಾಧಿಕ ದುರ್ನಡತೆಯ ಈ ಪ್ರಕಣದ ವಿಸ್ತೃತ ತನಿಖೆಯ ಅಗತ್ಯವಿರುವುದರಿಂದ ಪ್ರಸ್ತಾಪಿತ ಅಧಿಕಾರಿ, ಸಿಬ್ಬಂದಿ, ಅಧಿಕಾರೇತರರ ವಿರುದ್ಧ ಪ್ರಾಥಮಿಕ ತನಿಖೆ - ವಿಚಾರಣೆ ಕೈಗೊಳ್ಳಲು ಸರ್ಕಾರ ಪೂರ್ವಾನುಮತಿ ನೀಡಿದೆ.
ಯಾರೆಲ್ಲ ವಿಚಾರಣೆಗೆ ?
ಕೊಟ್ಟಗಾಳು ಗ್ರಾಪಂ ಕಚೇರಿ.