ಕನ್ನಡಪ್ರಭ ವಾರ್ತೆ ಕೋಟ
ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮ, ಸಂಘದ ವಿಸ್ತೃತ ಕಟ್ಟಡದ ಉದ್ಘಾಟನೆ ಮಂಗಳವಾರ ಸಾಲಿಗ್ರಾಮದ ಸಂಘದ ವಠಾರದಲ್ಲಿ ಜರುಗಿತು.ವಿಸ್ತೃತ ಕಟ್ಟಡವನ್ನು ಉದ್ಘಾಟಿಸಿದ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ಡಾ.ಕೆ.ಎಸ್. ಕಾರಂತ, ಈ ಹಾಲು ಉತ್ಪಾದಕರ ಸಂಘ ಅಭಿವೃದ್ಧಿ ಪಥದಲ್ಲಿ ಸ್ವಂತ ತಳಹದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಅಲ್ಲದೆ ಹೈನುಗಾರಿಕಾ ಕ್ಷೇತ್ರದಲ್ಲಿ ಸ್ಥಳೀಯ ರೈತರ ಸ್ವಾವಲಂಬಿ ಬದುಕಿಗೆ ಬಹಳ ಸಹಾಯ ಮಾಡಿದೆ ಎಂದು ಶ್ಲಾಘಿಸಿದರು.ದ.ಕ. ಸಹಕಾರಿ ಹಾಲು ಒಕ್ಕೂಟ ಮಂಗಳೂರು ಉಪಾಧ್ಯಕ್ಷ ಜಯರಾಮ ರೈ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟದ ಮಾಜಿ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಗೋ ಪೂಜೆ ನೆರವೇರಿಸಿದರು.ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಗಣೇಶ್ ಗಾಣಿಗ ಅಧ್ಯಕ್ಷತೆ ವಹಿಸಿದ್ದರು.
ಹೆಚ್ಚು ಹಾಲು ಹಾಕಿದ ಸದಸ್ಯರಾದ ರಾಘವೇಂದ್ರ ಮಧ್ಯಸ್ಥ, ಬಲರಾಮ ನಕ್ಷತ್ರಿ, ರಾಜು ದೇವಾಡಿಗ ಅವರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಒಕ್ಕೂಟದ ಅಧಿಕಾರಿಗಳಾದ ಡಾ.ಅನಿಲ್ ಕುಮಾರ್ ಶೆಟ್ಟಿ, ವಿಸ್ತರಣಾಧಿಕಾರಿ ಸರಸ್ವತಿ ಅವನ್ನು ಸನ್ಮಾನಿಸಲಾಯಿತು.ಮುಖ್ಯ ಅತಿಥಿಗಳಾಗಿ ಒಕ್ಕೂಟದ ನಿರ್ದೇಶಕ ರವಿರಾಜ ಹಗ್ಡೆ, ಒಕ್ಕೂಟದ ನಿರ್ದೇಶಕರಾದ ನರಸಿಂಹ ಕಾಮತ್, ಎಂ. ಸುಧಾಕರ ಶೆಟ್ಟಿ, ಸ್ಮಿತಾ ಆರ್. ಶೆಟ್ಟಿ, ಬೋಳ ಸದಾಶಿವ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ಒಕ್ಕೂಟದ ವ್ಯವಸ್ಥಾಪಕ ಡಾ. ರವಿರಾಜ ಉಡುಪ, ಒಕ್ಕೂಟ ಮಂಗಳೂರು ಮಾಜಿ ಅಧ್ಯಕ್ಷ ಶೇಡಿಕೊಡ್ಲು ವಿಠಲ ಶೆಟ್ಟಿ, ಮಾಜಿ ನಿರ್ದೇಶಕಿ ಜಾನಕಿ ಹಂದೆ, ಕಾರ್ತಟ್ಟು ಅಘೋರೇಶ್ವರ ದೇಗುಲದ ಮೊಕ್ತೇಸರ ಚಂದ್ರಶೇಖರ ಕಾರಂತ ಆಗಮಿಸಿದ್ದರು.ಸಂಘ ಅಧ್ಯಕ್ಷ ಗಣೇಶ ಗಾಣಿಗ, ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಡಾ. ನಿಜಾಮ್ ಪಾಟೀಲ್ ಗುಣಿಗಾರ್ ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಾಹಕಾರಿ ಜ್ಯೋತಿ ಸುರೇಶ ನಾಯರಿ ವರದಿ ವಾಚಿಸಿದರು. ಸಂಘದ ಸದಸ್ಯ ಶ್ರೀನಿವಾಸ ಸೋಮಯಾಜಿ ಪ್ರಾಸ್ತಾವನೆ ಸಲ್ಲಿಸಿದರು. ಸಂಘದ ನಿರ್ದೇಶಕ ಸುಬ್ರಾಯ ಉರಾಳ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸುಜಾತ ಬಾಯರಿ ನಿರೂಪಿದರು. ಸಂಘದ ಉಪಾಧ್ಯಕ್ಷ ರಮೇಶ ಹಂದೆ ವಂದಿಸಿದರು.