ಸಾಲಿಗ್ರಾಮ: ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

KannadaprabhaNewsNetwork |  
Published : May 27, 2026, 03:00 AM IST
26ಮಹಾಸಭಾ | Kannada Prabha

ಸಾರಾಂಶ

ಇಲ್ಲಿನ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವತಿಯಿಂದ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವರ ಸನ್ನಿಧಿಯಲ್ಲಿ ಅಧಿಕ ಜ್ಯೇಷ್ಠ ಮಾಸದ ಪ್ರಯುಕ್ತ ವಿಶೇಷವಾಗಿ ಹಮ್ಮಿಕೊಂಡಿದ್ದ ಸಹಸ್ರ ಪ್ರದಕ್ಷಿಣ ನಮಸ್ಕಾರ ಕಾರ್ಯಕ್ರಮಕ್ಕೆ ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ ಸಿ. ಚಂದ್ರಶೇಖರ ಉಪಾಧ್ಯ ಚಾಲನೆ ನೀಡಿದರು.

ಕುಂದಾಪುರ: ಇಲ್ಲಿನ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವತಿಯಿಂದ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವರ ಸನ್ನಿಧಿಯಲ್ಲಿ ಅಧಿಕ ಜ್ಯೇಷ್ಠ ಮಾಸದ ಪ್ರಯುಕ್ತ ವಿಶೇಷವಾಗಿ ಹಮ್ಮಿಕೊಂಡಿದ್ದ ಸಹಸ್ರ ಪ್ರದಕ್ಷಿಣ ನಮಸ್ಕಾರ ಕಾರ್ಯಕ್ರಮಕ್ಕೆ ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ ಸಿ. ಚಂದ್ರಶೇಖರ ಉಪಾಧ್ಯ ಚಾಲನೆ ನೀಡಿದರು.

ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ನಡೆಯುತ್ತಿರುವ ಈ ಸಹಸ್ರ ಪ್ರದಕ್ಷಿಣ ನಮಸ್ಕಾರ ದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಕೆ. ತಾರಾನಾಥ ಹೊಳ್ಳ, ಪ್ರಧಾನ ಅರ್ಚಕ ಪಿ. ಜನಾರ್ದನ ಅಡಿಗ, ಬ್ರಾಹ್ಮಣ ಮಹಾಸಭಾದ ಗೌರವಾಧ್ಯಕ್ಷ ಯಂ.ಶಿವರಾಮ ಉಡುಪ, ಅಧ್ಯಕ್ಷ ಪಟ್ಟಾಭಿರಾಮ ಸೋಮಯಾಜಿ, ಉಪಾಧ್ಯಕ್ಷ ಸಿ ಸುಬ್ರಾಯ ಉರಾಳ, ಕೋಶಾಧಿಕಾರಿ ನಾಗರಾಜ ಉಪಾಧ್ಯ, ಶ್ರೀ ದೇವಳದ ಸಿಬ್ಬಂದಿಗಳು, ವಲಯದ ಹೆಚ್ಚಿನ ಮಹಿಳಾ ಸದಸ್ಯರು , ಗ್ರಾಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಸಭಾದ ಕಾರ್ಯದರ್ಶಿ ಕೆ ರಾಜಾರಾಮ ಐತಾಳ ಕಾರ್ಯಕ್ರಮದ ಔಚಿತ್ಯದ ಕುರಿತು ಮಾಹಿತಿ ನೀಡಿ, ಅಧಿಕ ಜ್ಯೇಷ್ಠ ಮಾಸದ ಪ್ರಯುಕ್ತ ಲೋಕಕಲ್ಯಾಣಕ್ಕಾಗಿ ನಡೆಸುತ್ತಿರುವ ಈ ಸಹಸ್ರ ಪ್ರದಕ್ಷಿಣೆ ನಮಸ್ಕಾರ ಮುಂದಿನ ಮೂರು ಶನಿವಾರಗಳಂದು ಪೂರ್ವಾಹ್ನ ಗಂಟೆ ೮ ರಿಂದ ೯ರ ವರೆಗೆ ಜರುಗಲಿದ್ದು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸುವಂತೆ ವಿನಂತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಹೆಯಲ್ಲಿ ಜು. 22ರಿಂದ ‘ಯುಕೆ-ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’
‘ತುಡುವೆ ಜೇನು’ ರಕ್ಷಣೆ ಚಿಂತನೆ: ಗಿರಿಜನರಿಗೆ ಚಿಂತೆ!