ಕನ್ನಡಪ್ರಭ ವಾರ್ತೆ ತಿಪಟೂರು
ನಗರದ ಪಿಜಿಎಂ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಮುರುಘರಾಜೇಂದ್ರ ಬೃಹನ್ಮಠ ಚಿತ್ರದುರ್ಗ ಮಠದ ಶೂನ್ಯ ಪೀಠಾಧ್ಯಕ್ಷ ತ್ರಿವಿದ ದಾಸೋಹಿ ಲಿಂಗೈಕ್ಯ ಜಯದೇವ ಮುರುಘರಾಜೇಂದ್ರ ಸ್ವಾಮೀಜಿ ಪುಣ್ಯ ಸ್ಮರಣೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಲಿಂ. ಜಯದೇವ ಮುರುಘರಾಜೇಂದ್ರ ಶ್ರೀಗಳ ಪುಣ್ಯಸ್ಮರಣೆಯನ್ನು ಮಾಡಲಾಗುತ್ತಿದ್ದು, ಶ್ರೀಗಳು ರಾಜ್ಯದ್ಯಂತ ಜಯದೇವ ಹಾಸ್ಟೆಲ್‌ಗಳನ್ನು ನಿರ್ಮಿಸುವ ಮೂಲಕ ಸಾವಿರಾರು ಮಕ್ಕಳಿಗೆ ಜ್ಞಾನ ಮತ್ತು ಅನ್ನ ದಾಸೋಹ ಮಾಡಿದ್ದರು. ತಿಪಟೂರು ನಗರದಲ್ಲಿಯೂ ಜಯದೇವ ಹಾಸ್ಟೆಲ್‌ಯಿದ್ದು ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿರುವ ಜಯದೇವ ಹಾಸ್ಟೆಲ್ ವಾಣಿಜ್ಯ, ವ್ಯವಹಾರಿಕ ಜಾಗದಲ್ಲಿರುವ ಕಾರಣ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ಆದ್ದರಿಂದ ನಗರದ ಕೆಐಟಿ ಪಕ್ಕದಲ್ಲಿ ಐದು ಎಕರೆ ಜಾಗವನ್ನು ಖರೀದಿಸಿದ್ದು ಮುಂದಿನ ದಿನಗಳಲ್ಲಿ ಹಾಸ್ಟೆಲ್ ನಿರ್ಮಾಣವಾಗಲಿದೆ ಎಂದರು.ಇತಿಹಾಸ ತಜ್ಞ ಹಾಗೂ ಸಂಶೋಧಕ ಡಾ.ಜಿ. ನಂಜುಂಡಸ್ವಾಮಿ ಶೂನ್ಯ ಪೀಠದ ಇತಿಹಾಸ ಹಾಗೂ ಪರಂಪರೆಯ ಬಗ್ಗೆ ಉಪನ್ಯಾಸ ನೀಡುತ್ತಾ, ಬಸವಣ್ಣ ಅವರು ಕಾಯಕ ಜೀವಿಗಳ ಧರ್ಮವನ್ನು ಹುಟ್ಟುಹಾಕಿ, ಶೂನ್ಯ ಪೀಠವನ್ನು ಸ್ಥಾಪಿಸಿ ಅದರ ಪ್ರಥಮ ಅಧ್ಯಕ್ಷರನ್ನಾಗಿ ಅಲ್ಲಮಪ್ರಭುವನ್ನು ಮಾಡಿದರು. ಅವರ ಅಧ್ಯಕ್ಷತೆಯಲ್ಲಿ ಸಹಸ್ರಾರು ಶರಣರು ವಚನಗಳ ರಚನೆ ಮಾಡಿ ಶರಣ ಧರ್ಮಕ್ಕೆ ಕಾಯಕಲ್ಪ ನೀಡಿದರು.
ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಗಮಕ ವಿದ್ವಾನ್ ಎಂ.ಜಿ. ಸಿದ್ದರಾಮಯ್ಯ ಉಪನ್ಯಾಸ ನೀಡಿ, ಶತಮಾನಗಳ ಹಿಂದೆ ವಿದ್ಯಾರ್ಥಿ ನಿಲಯಗಳನ್ನು ತೆರೆದು ಅನ್ನ, ಜ್ಞಾನ ನೀಡುತ್ತಾ ಸಾವಿರಾರು ವಿದ್ಯಾರ್ಥಿಗಳ ಬದುಕಿನ ಭವಿಷ್ಯವನ್ನು ರೂಪಿಸಿದ ಲಿಂಗೈಕ್ಯ ಶ್ರೀ ಜಯದೇವ ಮುರುಘರಾಜೇಂದ್ರ ಸ್ವಾಮೀಜಿಗಳ ಪುಣ್ಯಸ್ಮರಣೆ ಸಮಾಜಕ್ಕೆ ಪ್ರಸ್ತುತವಾಗಿದೆ ಎಂದರು.