ಕನ್ನಡಪ್ರಭ ವಾರ್ತೆ ದಾವಣಗೆರೆ
ಡಾ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಮೂಲಕ ಇತಿಹಾಸ ಬರೆದಿದೆ. 27 ವರ್ಷ ವಯಸ್ಸಿನ ಸಮರ್ಥ್ ಶಾಮನೂರು ಅವರ ಗೆಲುವು ಸಂಘಟಿತ ಪ್ರಯತ್ನಕ್ಕೆ ಸಂದ ಜಯ ಎಂದು ಬಣ್ಣಿಸಿದ್ದಾರೆ.
ಕೆಲ ಅಲ್ಪಸಂಖ್ಯಾತ ನಾಯಕರ ವಿರೋಧದ ನಡುವೆಯೂ ಮುಸ್ಲಿಂ ಸಮುದಾಯದವರು ಪಕ್ಷದಿಂದ ದೂರ ಸರಿದಿಲ್ಲ, ಸ್ವಲ್ಪ ಹೆಚ್ಚು ಕಡಿಮೆಯಾಗಿದೆ ಆದರೂ ಅಲ್ಪಸಂಖ್ಯಾತ ಸಮುದಾಯದ ಜನರು ಕಾಂಗ್ರೆಸ್‌ಗೆ ಮತ ನೀಡಿ ಗೆಲ್ಲಿಸಿದ್ದಾರೆ. ಈ ಮೂಲಕ ಕೋಮುವಾದಿ ಬಿಜೆಪಿ ಸೋಲಿಸಿ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ.ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಕಾಂಗ್ರೆಸ್ ಹಿರಿಯ ಮುಖಂಡರಾದ ಸಲೀಂ ಅಹ್ಮದ್, ರಾಜ್ಯ ಸಭೆ ಸದಸ್ಯ ಡಾ. ನಾಸೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಶಾಸಕ ರಿಜ್ವಾನ್ ಅರ್ಷದ್, ಅಲ್ಪಸಂಖ್ಯಾತ ನಾಯಕರು, ಸಚಿವರು, ವಿವಿಧ ಸಮುದಾಯದ ನಾಯಕರು, ಮುಖಂಡರು ಸೇರಿದಂತೆ ಪ್ರತಿಯೊಬ್ಬರೂ ಗೆಲುವಿಗೆ ತಂತ್ರಗಾರಿಕೆ ರೂಪಿಸಿದ್ದು ಸಹಾಯ ಮಾಡಿದೆ ಎಂದಿದ್ದಾರೆ.
- - -