ಕನ್ನಡಪ್ರಭ ವಾರ್ತೆ ದಾವಣಗೆರೆ
ನಂತರ ಮಾತನಾಡಿ, ಪ್ರೀತಿ, ಮಮತೆ ಮತ್ತು ಕ್ಷಮೆ ಎಂಬ ಮಾನವೀಯ ಮೌಲ್ಯಗಳನ್ನು ಸಾರಿದ ಏಸು ಕ್ರಿಸ್ತನ ಬದುಕು ಎಲ್ಲರಿಗೂ ಆದರ್ಶವಾಗಲಿ. ಈ ಪವಿತ್ರ ಶುಭ ಶುಕ್ರವಾರವು ಸರ್ವರಿಗೂ ಮಂಗಳವನ್ನುಂಟು ಮಾಡಲಿ ಎಂದು ಹಾರೈಸಿದರು.
ನಂತರ ಭಾರತ್ ಕಾಲೋನಿ ಮತ್ತು ಎಚ್.ಕೆ.ಆರ್ ನಗರ,ಅಣ್ಣಾನಗರ ಸೇರಿದಂತೆ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಕಾಲ್ನಡಿಗೆಯ ಮೂಲಕ ಮನೆಮನೆಗೆ ತೆರಳಿ ಕಾಂಗ್ರೆಸ್‌ಗೆ ಮತ ನೀಡುವಂತೆ ಮನವಿ ಮಾಡಿದರು.ಈ ಸಂದರ್ಭ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡರಾದ ಬಿ.ವೀರಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಬೆಂಬಲ ಕೋರಿದರು. ನಂತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರಚಾರ ನಡೆಸಿ, ಸ್ಥಳೀಯರೊಂದಿಗೆ ಸಂವಾದ ನಡೆಸಿ, ಕ್ರಮ ಸಂಖ್ಯೆ-3 ಹಸ್ತದ ಗುರುತಿಗೆ ನಿಮ್ಮ ಮತ ನೀಡಿ ನನ್ನನ್ನು ಗೆಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದರು