ಎಸ್ಸೆಸ್ಸೆಲ್ಸಿಯಲ್ಲಿ ಸಮರ್ಥ ನಲವಡೆ ಜಿಲ್ಲೆಗೆ ಪ್ರಥಮ

KannadaprabhaNewsNetwork |  
Published : Jun 02, 2026, 03:15 AM IST
ಪೊಟೋ ಜೂ.1ಎಂಡಿಎಲ್ 1. ಸಮರ್ಥ ಶಿವಾಜಿ ನಲವಡೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮುಧೋಳಅರಳಿಕಟ್ಟಿ ಫೌಂಡೇಶನ್ ದ ಮುಧೋಳ ರಾಯಲ್ ಶಾಲೆಯ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಮರ್ಥ ಶಿವಾಜಿ ನಲವಡೆ ಈ ವಿದ್ಯಾರ್ಥಿಯು 625ಕ್ಕೆ 622 (ಶೇ.99.52) ಅಂಕಗಳನ್ನು ಪಡೆದು ಇಡೀ ರಾಜ್ಯಕ್ಕೆ 4ನೇ ರ್ಯಾಂಕ್ ಮತ್ತು ಮುಧೋಳ ತಾಲೂಕಿಗೆ ಹಾಗೂ ಬಾಗಲಕೋಟ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಉತ್ತೀರ್ಣನಾಗಿದ್ದಾನೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

ಕನ್ನಡಪ್ರಭ ವಾರ್ತೆ ಮುಧೋಳ

ಅರಳಿಕಟ್ಟಿ ಫೌಂಡೇಶನ್ ದ ಮುಧೋಳ ರಾಯಲ್ ಶಾಲೆಯ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಮರ್ಥ ಶಿವಾಜಿ ನಲವಡೆ ಈ ವಿದ್ಯಾರ್ಥಿಯು 625ಕ್ಕೆ 622 (ಶೇ.99.52) ಅಂಕಗಳನ್ನು ಪಡೆದು ಇಡೀ ರಾಜ್ಯಕ್ಕೆ 4ನೇ ರ್ಯಾಂಕ್ ಮತ್ತು ಮುಧೋಳ ತಾಲೂಕಿಗೆ ಹಾಗೂ ಬಾಗಲಕೋಟ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಉತ್ತೀರ್ಣನಾಗಿದ್ದಾನೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ. ಈ ವಿದ್ಯಾರ್ಥಿಯ ಸಾಧನೆಗೆ ಅರಳಿಕಟ್ಟಿ ಫೌಂಡೇಶನ್ ದ ಸಂಸ್ಥಾಪಕ ಅಧ್ಯಕ್ಷ ಡಾ.ತಿಮ್ಮಣ್ಣ ಅರಳಿಕಟ್ಟಿ, ಮುಧೋಳ ರಾಯಲ್ ಸ್ಕೂಲ್ ಅಧ್ಯಕ್ಷೆ ಸವಿತಾ ಡಾ.ತಿಮ್ಮಣ್ಣ ಅರಳಿಕಟ್ಟಿ, ಕಾರ್ಯದರ್ಶಿ ವಿನಾಯಕ ಡಾ.ತಿಮ್ಮಣ್ಣ ಅರಳಿಕಟ್ಟಿ, ಆಡಳಿತಾಧಿಕಾರಿ ಇಂದಿರಾ ಸಾತನೂರ, ಪ್ರಾಚಾರ್ಯ ಚಂದ್ರಶೇಖರ ನಾಗವಂದ, ಉಪ ಪ್ರಾಚಾರ್ಯ ಮಾರುತಿ ಪವಾರ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಯ ಪರಿಶ್ರಮ ಮತ್ತು ಶಿಕ್ಷಕರ ನಿಷ್ಠಾವಂತ ಮಾರ್ಗದರ್ಶನ ಶ್ಲಾಘಿಸಿದ್ದಾರೆ. ಒಟ್ಟು 36 ವಿದ್ಯಾರ್ಥಿಗಳ ಪೈಕಿ 22 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇ.100ಕ್ಕೆ 100ರಷ್ಟು ಫಲಿತಾಂಶ ಬಂದಿರುವದಕ್ಕೆ ಡಾ.ತಿಮ್ಮಣ್ಣ ಅರಳಿಕಟ್ಟಿ ಅವರು ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರ್ಧಕ್ಕೆ ನಿಂತ ಶಾಪಿಂಗ್‌ ಕಾಂಪ್ಲೆಕ್ಸ್ ಕಾಮಗಾರಿ
ಹಿಂದುತ್ವ ಉಳಿಸಲು ಹೆಚ್ಚಿಗೆ ಮಕ್ಕಳ ಹೊಂದಿ