ಕನ್ನಡಪ್ರಭ ವಾರ್ತೆ ಪುತ್ತೂರು ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ ‘ಸಮ್ಮಾನ ರಶ್ಮಿ’ ವಿಜೃಂಭಣೆಯಿಂದ ನಡೆಯಿತು.
ಆಡಳಿತಾಧಿಕಾರಿ, ನ್ಯಾಯವಾದಿ ಅಶ್ವಿನ್ ಎಲ್. ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯದ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಅತಿಥಿಯಾಗಿ ಆಗಮಿಸಿದ್ದರು.
ಆರಂಭದಲ್ಲಿ ಅತ್ಯಾಧುನಿಕ ಸ್ಮಾರ್ಟ್ ಬೋರ್ಡನ್ನು ಉದ್ಘಾಟಿಸಲಾಯಿತು. ಸಂಸ್ಥೆಯ ಟ್ರಸ್ಟ್ಟಿಗಳಾದ ನಡುಮನೆ ಸುಂದರ ರೈ, ರಶ್ಮಿ ಅಶ್ವಿನ್ ಶೆಟ್ಟಿ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮ್ ಪ್ರಸಾದ್ ರೈ ಕಲಾಯಿ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ ಮತ್ತು ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ ಉಪಸ್ಥಿತರಿದ್ದರು. ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಫಾತಿಮಾತ್ ಹನ್ನಾ ಸಂವಿಧಾನದ ಪೀಠಿಕೆ ವಾಚಿಸಿದರು. ಎಂ . ವೈಷ್ಣವಿ ವಂದಿಸಿದರು. ರಶ್ಮಿತಾ ನಿರೂಪಿಸಿದರು.