ಕೊಪ್ಪಳಕ್ಕೆ ಕೇಂದ್ರದ ಯೋಜನೆ ಮಂಜೂರು ಮಾಡಿಸಿ: ಸಿ.ವಿ. ಚಂದ್ರಶೇಖರ

KannadaprabhaNewsNetwork |  
Published : Mar 03, 2025, 01:46 AM IST
2ಕೆಪಿಎಲ್25 ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ  ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸುತ್ತಿರುವುದು. | Kannada Prabha

ಸಾರಾಂಶ

ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಮಂಜೂರು ಮಾಡಿಸಿಕೊಡಬೇಕು ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಸಚಿವ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಮಂಜೂರು ಮಾಡಿಸಿಕೊಡಬೇಕು ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಸಚಿವ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಕೊಪ್ಪಳಕ್ಕೆ ಆಗಮಿಸಿದ ಕೇಂದ್ರ ಸಚಿವರನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾಗತಿಸಿ, ಆನಂತರ ಮನವಿ ಸಲ್ಲಿಸಿದರು. ಜಿಲ್ಲಾ ಕೇಂದ್ರವಾಗಿ 25 ವರ್ಷ ಕಳೆದರೂ ಕೊಪ್ಪಳ ಅಭಿವೃದ್ಧಿ ಹೊಂದಿಲ್ಲ. ಹೀಗಾಗಿ ಕೊಪ್ಪಳಕ್ಕೆ ವಿವಿಧ ಖಾತೆಗಳ ವಿವಿಧ ಯೋಜನೆಗಳನ್ನು ಮಂಜೂರು ಮಾಡಿಸಿಕೊಡಬೇಕು ಎಂದು ಒತ್ತಾಯಿಸಿದರು.

ಕೊಪ್ಪಳ ನಗರಕ್ಕೆ ನವೋದಯ ಶಾಲೆ, ಇಎಸ್ಐ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವುದು, ತೋಟಗಾರಿಕೆ ಬೆಳೆಗಳಿಗೆ ಶೀತಲೀಕರಣ ಘಟಕ, ಸ್ಕಿಲ್ ಇಂಡಿಯಾ ಸೆಂಟರ್ ಹಾಗೂ ಸುಸಜ್ಜಿತ ಕ್ರೀಡಾ ತರಬೇತಿ ಸಂಕೀರ್ಣ ಯೋಜನೆಗಳನ್ನು ಕೇಂದ್ರ ಸರ್ಕಾರದಿಂದ ಮಂಜೂರು ಮಾಡಿಸಿಕೊಡಬೇಕು. ಕೋಳೂರು ಕಾಟ್ರಳ್ಳಿಯಲ್ಲಿ ನಿರ್ಮಾಣದ ಹಂತದಲ್ಲಿರುವ ಶ್ರೀ ಗವಿಮಠದ ಗುರುಕುಲ ಉಚಿತ ವಸತಿ ನಿಲಯ ಯೋಜನೆಗೆ ವಿಶೇಷ ಅನುದಾನ ಒದಗಿಸಿ ಕೊಡಬೇಕು. ಈ ಎಲ್ಲ ಯೋಜನೆಗಳು ಬಡ ಹಾಗೂ ಮಾಧ್ಯಮ ಕುಟುಂಬದವರ ಭವಿಷ್ಯದ ಭರವಸೆಗಳು. ಈ ಯೋಜನೆಗಳು ಕೊಪ್ಪಳವನ್ನು ಅಭಿವೃದ್ಧಿ ಹೊಂದಿದ ಜಿಲ್ಲೆಯನ್ನಾಗಿ ಮಾಡಲು ಪೂರಕವಾಗುತ್ತವೆ ಎಂದು ಒತ್ತಿ ಹೇಳಿದರು.

ಕೇಂದ್ರದ ವಿವಿಧ ಖಾತೆಗಳ ಸಚಿವರ ಜತೆಗೆ ವೈಯಕ್ತಿಕವಾಗಿ ಮಾತನಾಡಿ, ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುತ್ತೇನೆ. ಕೊಪ್ಪಳವನ್ನು ಅಭಿವೃದ್ಧಿ ಹೊಂದಿದ ಜಿಲ್ಲೆಯನ್ನಾಗಿ ಪರಿವರ್ತಿಸಲು ಅಗತ್ಯವಿರುವ ಸಹಕಾರ ನೀಡುತ್ತೇನೆ ಎಂದು ಸಚಿವರು ಭರವಸೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ