ಕನ್ನಡಪ್ರಭ ವಾರ್ತೆ ಬೀಳಗಿ
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ತಾಲೂಕಿನ ಸುನಗ ಎಲ್.ಟಿ. 2 ಗ್ರಾಮದಲ್ಲಿ ಏರ್ಪಡಿಸಿದ್ದ ಶ್ರಮಿಕ ವಸತಿ ಶಾಲೆಯ ಭೂಮಿಪೂಜಾ ಸಮಾರಂಭ ನೆರವೇರಿಸಿ ಅವರು ಮಾತನಾಡಿದರು.
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಾದರಿಯಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಇದಕ್ಕೆ ಅಂದಾಜು ₹35 ಕೋಟಿ ಅನುದಾನವನ್ನು ಮಂಡಳಿ ಮೀಸಲಿಟ್ಟಿದೆ. 6ನೇ ತರಗತಿಯಿಂದ ಪಿಯುಸಿವರೆಗೆ ಉಚಿತ ಶಿಕ್ಷಣ ದೊರೆಯಲಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಮಾತ್ರ ಈ ಸೌಲಭ್ಯ ಸಿಗಲಿದೆ ಎಂದು ಹೇಳಿದರು.ಆರ್ಥಿಕವಾಗಿ ದುರ್ಬಲರಾಗಿರುವ ಕಟ್ಟಡ ಕಾರ್ಮಿಕರು ಸಾಮಾನ್ಯವಾಗಿ ವಲಸೆ ಪ್ರವೃತ್ತಿ ಹೊಂದಿರುತ್ತಾರೆ. ರಾಜ್ಯದ ಇತರೆ ನಗರ ಹಾಗೂ ಹೊರ ರಾಜ್ಯಗಳಿಗೂ ವಲಸೆ ಹೋಗುತ್ತಾರೆ. ಬದುಕು ಸಾಗಿಸುವ ಅನಿವಾರ್ಯತೆಯಲ್ಲಿ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವುದು ಕಡಿಮೆ. ಇಂತಹ ಕಾರ್ಮಿಕರು ವಲಸೆ ಹೋದರೂ ಅವರ ಮಕ್ಕಳು ವಸತಿ ಶಾಲೆಯಲ್ಲಿ ಓದಲು ಅನುಕೂಲವಾಗಲಿದೆ. ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದು ತಪ್ಪಲಿದೆ ಎಂದು ತಿಳಿಸಿದರು.
15 ರಿಂದ 20 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ: ಆನವಾಲ ಲಿಫ್ಟ್ ಇರಿಗೇಶನ್ ಯೋಜನೆಗೆ ₹767 ಕೋಟಿ ವೆಚ್ಚವಾಗಲಿದ್ದು, ಇದರಿಂದ 15 ರಿಂದ 20 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಲಿದೆ. ಬೀಳಗಿ ಲಿಫ್ಟ್ ಇರಿಗೇಶನ್ ಯೋಜನೆಯಡಿ 7 ಸಾವಿರ ಎಕರೆ ಪ್ರದೇಶಕ್ಕೆ ನೀರು ತಲುಪಿಸಲು ಮತ್ತು ಕಾಡರಕೊಪ್ಪ ಲಿಫ್ಟ್ ಇರಿಗೇಶನ್ ಯೋಜನೆಗೆ ₹167 ಕೋಟಿ ಈಗಾಗಲೇ ಮಂಜೂರಾಗಿದೆ. ಕಾಮಗಾರಿಗಳನ್ನು ಶೀಘ್ರ ಆರಂಭಿಸಿ ಪೂರ್ಣಗೊಳಿಸಲು ಆದ್ಯತೆ ನೀಡುತ್ತೇನೆ ಎಂದು ಶಾಸಕ ಜೆ.ಟಿ. ಪಾಟೀಲ ತಿಳಿಸಿದರು.
- ಜೆ.ಟಿ. ಪಾಟೀಲ ಶಾಸಕರು ಬಾದಾಮಿ