ಕನ್ನಡಪ್ರಭ ವಾರ್ತೆ ಉಡುಪಿ
ಗರ್ಭಿಣಿಯರ ಆರೈಕೆಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜನನಿ ಸುರಕ್ಷಾ ಯೋಜನೆ, ಜನನಿ ಶಿಶು ಸುರಕ್ಷಾ ಕಾರ್ಯಕ್ರಮ ಮೊದಲಾದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಬಾಣಂತಿಯರ ಸಾವಿಗೆ ಇದೂ ಒಂದು ಕಾರಣ ಎಂದರು.
ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾಂಗ್ರೆಸ್ ಸರ್ಕಾರದ ಹೊಣೆಗೇಡಿತನದಿಂದಾಗಿ ಸಂಪುರ್ಣ ಹದಗೆಟ್ಟಿದೆ. ಸಿಬ್ಬಂದಿ ಕೊರತೆಯಿಂದ ಸೊರಗುತ್ತಿದೆ ಎಂದು ಆರೋಪಿಸಿದರು.ಬಿಜೆಪಿ ರಾಜ್ಯ ಮಹಿಳಾಮೋರ್ಚಾ ಪ್ರ.ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಮಾತನಾಡಿ, ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಮನೆಯಿಂದ ಹೊರಗೆ ಕೆಲಸ, ಕಾಲೇಜಿಗೆ ಹೋದವರು ವಾಪಸ್ ಸುರಕ್ಷಿತವಾಗಿ ಬರಲಿ ಎಂದು ಪ್ರಾರ್ಥನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ನವಜಾತ ಶಿಶು ಹಾಗೂ ಬಾಣಂತಿಯರು ಸಾವನ್ನಪ್ಪಿದರೂ ರಾಜ್ಯ ಸರ್ಕಾರ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಇದರ ವಿರುದ್ಧ ರಾಜ್ಯದ 31 ಜಿಲ್ಲೆಗಳಲ್ಲಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಧಿಕಾರಿಯವರಿಗೆ ಮನವಿ ನೀಡುತ್ತೇವೆ ಎಂದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರ.ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಉಪಸ್ಥಿತರಿದ್ದರು.