ಸಂಡೂರು ವಿಧಾನಸಭೆ ಉಪಚುನಾವಣೆ: ಮತ ಎಣಿಕೆಗೆ ಸಕಲ ಸಿದ್ಧತೆ

KannadaprabhaNewsNetwork |  
Published : Nov 23, 2024, 12:32 AM IST
ಸಂಡೂರು ವಿಧಾನಸಭೆ ಉಪಚುನಾವಣೆ ಮತ ಎಣಿಕೆ ಸಿದ್ಧತೆ ಕುರಿತು  ಚುನಾವಣಾಧಿಕಾರಿ ರಾಜೇಶ್ ಹೆಚ್.ಡಿ ಅವರು ಸುದ್ದಿಗೋಷ್ಠಿಯಲ್ಲಿ ಗುರುವಾರ ಸಂಜೆ ಮಾಹಿತಿ ನೀಡಿದರು.  | Kannada Prabha

ಸಾರಾಂಶ

ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದೆ.

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ಕಾರ್ಯ ನ.23ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ, ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ. ಹೇಳಿದರು.

ಸಂಡೂರು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ಕಾರ್ಯ ಕುರಿತಂತೆ ಗುರುವಾರ ಸಂಜೆ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದೆ. ಇದಕ್ಕೂ ಮುನ್ನ 7 ಗಂಟೆಗೆ ಭದ್ರತಾ ಕೊಠಡಿ ತೆರೆಯಲಾಗುವುದು. ಮತ ಎಣಿಕೆ ಕೇಂದ್ರದಲ್ಲಿ 253 ಮತಗಟ್ಟೆಗಳ ಮತಯಂತ್ರಗಳು, 13 ಅಂಚೆ ಮತಗಳ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.

ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು 14+1 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‌ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ವೀಕ್ಷಕರನ್ನು ನಿಯೋಜಿಸಲಾಗಿದೆ.

ಇದಲ್ಲದೆ 19 ಎಣಿಕಾ ಮೇಲ್ವಿಚಾರಕರು, 21 ಎಣಿಕಾ ಸಹಾಯಕರು ಮತ್ತು 20 ಎಣಿಕಾ ಮೈಕ್ರೋ ವೀಕ್ಷಕರನ್ನು ಸಹ ನೇಮಕ ಮಾಡಲಾಗಿದೆ. ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದರು.

ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು 253 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ 19 ಸುತ್ತು ಮತ ಎಣಿಕೆ ನಡೆಯಲಿದೆ. ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿ ಹಂತದ ಮತ ಎಣಿಕೆ ವಿವರವನ್ನು ಮಾಧ್ಯಮಗಳ ಮೂಲಕ ಪ್ರಚುರಪಡಿಸಲು ಅನುವಾಗುವಂತೆ ಮಾಧ್ಯಮದವರಿಗೆ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರವನ್ನು ತೆರೆಯಲಾಗುವುದು ಎಂದರು.

ಮತ ಎಣಿಕೆ ಕೇಂದ್ರ ಸುತ್ತಲೂ 100 ಮೀಟರ್ ಪ್ರದೇಶ ಆವರಣದಲ್ಲಿ ವಾಹನಗಳ ಪ್ರವೇಶವಿರುವುದಿಲ್ಲ. ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತ ಎಣಿಕೆ ಕೇಂದ್ರವಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ ಸಿಆರ್‌ಪಿಎಫ್, ಸಿಎಎಸ್‌ಎಫ್, ಕೆಎಸ್‌ಆರ್‌ಪಿ ಮತ್ತು ಸಿವಿಲ್ ಪೊಲೀಸ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ರಾಜೇಶ್.ಹೆಚ್.ಡಿ ಅವರು ವಿವರಿಸಿದರು.

ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ