ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲೆಯ ವಡಗೇರಾ ತಾಲೂಕಿನ ಕೃಷ್ಣವೇಣಿ ಭೀಮಾ ಸಂಗಮದ ಸಂಗಮೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಜಾತ್ರಾ ಸಮಿತಿ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸಂಗಮ ಸಿರಿ ಪ್ರಶಸ್ತಿ ಪ್ರದಾನ ಮಾಡಿ ಶ್ರೀಗಳು ಮಾತನಾಡಿದರು.
ಮುಂದಿನ ದಿನಗಳಲ್ಲಿ ತಾವುಗಳು ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಎಂದು ಹೇಳಿದರು.ಸಾಹಿತ್ಯ ಕ್ಷೇತ್ರದಲ್ಲಿ ಸಂಗಮ ಸಿರಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ, ಶ್ರೀಮಠವು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿರುವುದು ನಮ್ಮೆಲ್ಲರಿಗೂ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದಂತಾಗಿದೆ. ಮುಂದಿನ ದಿನಗಳಲ್ಲಿ ನಾವು ಇನ್ನಷ್ಟು ಸಾಹಿತ್ಯ ಕ್ಷೇತ್ರ, ವೈದ್ಯಕೀಯ, ಕೃಷಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದಾಗಿ ಹೇಳಿದರು.
ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಚಂದನಕೇರಾ ಅಧ್ಯಕ್ಷತೆ ವಹಿಸಿದ್ದರು. ವೀರಭದ್ರಯ್ಯ ಸ್ವಾಮಿ ದೇವಸೂಗೂರ ಸೇರಿ ದೇವಸ್ಥಾನ ಸಮಿತಿಯ ಸದಸ್ಯರು ಇದ್ದರು. ಮಲ್ಲೇಶ ಕುರುಕುಂದಿ ನಿರೂಪಿಸಿ, ವಂದಿಸಿದರು.