ಶಾಸಕ ಪ್ರಭು ಚವ್ಹಾಣ್‌ರಿಂದ ಸಂಗಮ್ ದೇವಸ್ಥಾನ ಸ್ವಚ್ಛತೆ

KannadaprabhaNewsNetwork |  
Published : Jan 20, 2024, 02:05 AM IST
ಚಿತ್ರ 19ಬಿಡಿಆರ್59 | Kannada Prabha

ಸಾರಾಂಶ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸ್ಚಚ್ಛ ಮಂದಿರ ಅಭಿಯಾನದನ್ವಯ ಶಾಸಕ ಪ್ರಭು.ಬಿ ಚವ್ಹಾಣ ಶುಕ್ರವಾರ ಕಮಲನಗರ ತಾಲೂಕಿನ ಸಂಗಮ ಗ್ರಾಮದ ಸುಕ್ಷೇತ್ರ ಸಂಗಮೇಶ್ವರ ದೇವಸ್ಥಾನ ಸ್ವಚ್ಛಗೊಳಿಸಿದರು.

ಕಮಲನಗರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸ್ಚಚ್ಛ ಮಂದಿರ ಅಭಿಯಾನದನ್ವಯ ಶಾಸಕ ಪ್ರಭು.ಬಿ ಚವ್ಹಾಣ ಶುಕ್ರವಾರ ಕಮಲನಗರ ತಾಲೂಕಿನ ಸಂಗಮ ಗ್ರಾಮದ ಸುಕ್ಷೇತ್ರ ಸಂಗಮೇಶ್ವರ ದೇವಸ್ಥಾನ ಸ್ವಚ್ಛಗೊಳಿಸಿದರು.

ಲುಂಗಿ ಧರಿಸಿ, ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯಕ್ಕೆ ಇಳಿದ ಶಾಸಕರು ನೀರಿನಿಂದ ಗರ್ಭಗುಡಿ ಸೇರಿದಂತೆ ದೇವಸ್ಥಾನದ ಆವರಣವೆಲ್ಲ ಸ್ವಚ್ಛಗೊಳಿಸಿದರು. ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಸಾಥ್ ನೀಡಿದರು. ದೇವಸ್ಥಾನದಲ್ಲಿ "ಜೈ ಶ್ರೀರಾಮ " ಎಂಬ ಜಯಘೋಷಗಳು ಕೇಳಿಸಿದವು.

ಬಳಿಕ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಶಾಸಕರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂಬುದು 500 ವರ್ಷಗಳ ಬೇಡಿಕೆಯಾಗಿತ್ತು. ಇದಕ್ಕಾಗಿ ಅನೇಕ ಹೋರಾಟಗಳಾಗಿವೆ. ಇಷ್ಟು ದಿನ ಕೇವಲ ಭರವಸೆ ಮತ್ತು ಆಶ್ವಾಸನೆಗಳು ಮಾತ್ರ ಸಿಗುತ್ತಿದ್ದವು. ಮಂದಿರ ಮಾತ್ರ ನಿರ್ಮಾಣವಾಗಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಇಚ್ಛಾಶಕ್ತಿಯಿಂದಾಗಿ ಇದು ಸಾಕಾರಗೊಂಡಿದೆ. ಅಯೋಧ್ಯೆಯಲ್ಲಿ ಸುಂದರ ಮತ್ತು ಭವ್ಯವಾದ ಮಂದಿರ ನಿರ್ಮಾಣಗೊಂಡಿದೆ. ಜ.22ರಂದು ಪ್ರಧಾನಿಗಳ ಅಮೃತ ಹಸ್ತದಿಂದ ಉದ್ಘಾಟನೆ ನೆರವೇರಲಿದೆ ಎಂದರು.

ಈ ಸಂದರ್ಭದಲ್ಲಿ ಔರಾದ ಎಪಿಎಂಸಿ ಅಧ್ಯಕ್ಷ ದೊಂಡಿಬಾ ನರೋಟೆ, ಮುಖಂಡರಾದ ಶಿವಾಜಿರಾವ ಪಾಟೀಲ್ ಮುಂಗನಾಳ, ರಾಮಶೆಟ್ಟಿ ಪನ್ನಾಳೆ, ಕಿರಣ ಪಾಟೀಲ, ಖಂಡೋಬಾ ಕಂಗಟೆ, ಶಿವಾಜಿರಾವ ಕಾಳೆ, ಗಿರೀಶ ವಡೆಯರ್, ಶಿವಕುಮಾರ ಪಾಂಚಾಳ, ಮಲ್ಲಿಕಾರ್ಜುನ ದಾನಾ, ಅಶೋಕ ಮೇತ್ರೆ, ಶಕುಂತಲಾ ಮುತ್ತಂಗೆ, ರವೀಂದ್ರ ರೆಡ್ಡಿ, ಬಂಟಿ ರಾಂಪೂರೆ, ವಿಷ್ಣು ರುದ್ನೂರೆ, ಕೇರಬಾ ಪವಾರ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಯಿಲ ಎಂಡೋ ಪಾಲನಾ ಕೇಂದ್ರದಲ್ಲಿ ಪೋಷಕರ ಸಭೆ
ವಾದಿರಾಜ ಕಲ್ಲೂರಾಯಗೆ ‘ಬಹುಮುಖಿ’ ಪ್ರಶಸ್ತಿ