ಭದ್ರಾವತಿಯಲ್ಲಿ ದಸರಾ ಮೆರವಣಿಗೆಗೆ ಸಂಗಮೇಶ್ವರ್ ಚಾಲನೆ

KannadaprabhaNewsNetwork |  
Published : Oct 25, 2023, 01:15 AM IST
ಚಿತ್ರ: ಡಿ೨೪-ಬಿಡಿವಿಟಿ ಮತ್ತು (ಎ)ಭದ್ರಾವತಿಯಲ್ಲಿ ನಾಡಹಬ್ಬ ದಸರಾ ಅಂಗವಾಗಿ ನಗರಸಭೆ ವತಿಯಿಂದ ಸೋಮವಾರ ಆಯೋಜಿಸಲಾಗಿದ್ದ ಉತ್ಸವ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು. | Kannada Prabha

ಸಾರಾಂಶ

ಕನಕ ಮಂಟಪ ಮೈದಾನ ತಲುಪಿ ಬನ್ನಿ ಮುಡಿಯುವ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಭದ್ರಾವತಿ ನಾಡಹಬ್ಬ ದಸರಾ ಅಂಗವಾಗಿ ನಗರಸಭೆ ವತಿಯಿಂದ ಸೋಮವಾರ ಆಯೋಜಿಸಲಾಗಿದ್ದ ಉತ್ಸವ ಮೆರವಣಿಗೆಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಚಾಲನೆ ನೀಡಿದರು. ನಗರದ ಬಿ.ಎಚ್. ರಸ್ತೆ, ಅಪ್ಪರ್ ಹುತ್ತಾ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಸಂಜೆ 5 ಗಂಟೆಗೆ ಶ್ರೀ ಚಾಮುಂಡೇಶ್ವರಿ ಹಾಗೂ ನಂದಿಧ್ವಜಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು, ವಿವಿಧ ಶಾಲೆಗಳ ಸ್ಥಬ್ಧಚಿತ್ರಗಳು, ಹಳೇ ನಗರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ, ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿ, ಶ್ರೀ ರಾಮೇಶ್ವರ ಸ್ವಾಮಿ, ಶ್ರೀ ಹಳದಮ್ಮ ದೇವಿ, ಶ್ರೀ ಕಾಳಿಕಾಂಬ ದೇವಿ, ಶ್ರೀ ಕೋಟೆ ಬಸವಣ್ಣಸ್ವಾಮಿ, ಭೋವಿ ಕಾಲೋನಿ ಶ್ರೀ ಪಿಳ್ಳಗಮ್ಮ ದೇವಿ, ಶ್ರೀ ಸವದತ್ತಿ ಯಲ್ಲಮ್ಮ, ಶ್ರೀ ಶೆಟ್ಟಮ್ಮದೇವಿ, ಶ್ರೀ ಲಕ್ಷ್ಮಮ್ಮ ದೇವಿ, ಶ್ರೀ ಸಿಗಂದೂರು ಚೌಡೇಶ್ವರಿ, ಶ್ರೀ ಕಾಲರಮ್ಮ ದೇವಿ, ಕುಕ್ಕುವಾಡೇಶ್ವರಿ ದೇವಿ, ಶ್ರೀ ಕೋಟೆ ಮಾರಿಯಮ್ಮ ದೇವಿ, ದಾನವಾಡಮ್ಮ, ತಮ್ಮಣ್ಣ ಕಾಲೋನಿ ಶ್ರೀ ಚೌಡೇಶ್ವರಿ ದೇವಿ, ಸಂತೇ ಮೈದಾನದ ಶ್ರೀ ಸುಂಕಲಮ್ಮ ದೇವಿ, ನ್ಯೂಟೌನ್ ಫ್ಲೇಗ್ ಮಾರಿಯಮ್ಮ, ಭೂತನಗುಡಿ ಶ್ರೀ ಶನೇಶ್ವರ ಸ್ವಾಮಿ, ವಿಜಯನಗರ ಶ್ರೀ ಶನಿದೇವರು, ಬಿ.ಎಚ್ ರಸ್ತೆ ಶ್ರೀ ವಿಶ್ವಸ್ವರೂಪಿಣಿ ಮಾರಿಯಮ್ಮ ದೇವಿ ಸೇರಿದಂತೆ 50 ದೇವಸ್ಥಾನಗಳ ಅಲಂಕೃತಗೊಂಡ ದೇವಾನುದೇವತೆಗಳು ಮೆರವಣಿಗೆಯಲ್ಲಿ ಗಮನ ಸೆಳೆದವು. ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್ ಕುಮಾರ್, ಪೌರಾಯುಕ್ತ ಎಚ್.ಎಂ ಮನುಕುಮಾರ್, ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ ಹಾಗು ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರಾದ ಬಸವರಾಜ್, ಜಾರ್ಜ್, ಆರ್. ಮೋಹನ್ ಕುಮಾರ್, ಬಷೀರ್ ಅಹಮದ್, ವಿ. ಕದಿರೇಶ್, ಬಿ.ಟಿ ನಾಗರಾಜ್, ಬಿ.ಕೆ ಮೋಹನ್, ಅನುಸುಧಾ ಮೋಹನ್ ಪಳನಿ, ಲತಾ ಚಂದ್ರಶೇಖರ್, ಪ್ರೇಮ ಬದರಿನಾರಾಯಣ, ಶಶಿಕಲಾ ನಾರಾಯಣಪ್ಪ, ಗೀತಾ ರಾಜ್‌ಕುಮಾರ್, ಅನುಪಮ ಚನ್ನೇಶ್, ಕಾಂತರಾಜ್, ಕೋಟೇಶ್ವರರಾವ್, ಉದಯ್‌ಕುಮಾರ್, ರಿಯಾಜ್ ಅಹಮದ್, ಪಲ್ಲವಿ ದಿಲೀಪ್, ನಾಗರತ್ನ ಅನಿಲ್‌ಕುಮಾರ್, ಜಯಶೀಲ ಸುರೇಶ್, ಸವಿತಾ ಉಮೇಶ್, ರೇಖಾ ಪ್ರಕಾಶ್, ಮಂಜುಳ ಸುಬ್ಬಣ್ಣ, ಅನಿತಾ ಮಲ್ಲೇಶ್, ಆರ್. ಶ್ರೇಯಸ್ (ಚಿಟ್ಟೆ), ಬಿ.ಎಂ. ರವಿಕುಮಾರ್, ಅಧಿಕಾರಿಗಳಾದ ರಾಜ್‌ಕುಮಾರ್, ಪ್ರಭಾಕರ್, ಸುಹಾಸಿನಿ ಮತ್ತು ಪೌರಸೇವಾ ನೌಕರರ ಸೇವಾ ಸಂಘದ ಪದಾಧಿಕಾರಿಗಳು, ದಸರಾ ಉದ್ಘಾಟಕರು, ಸಮಾಜ ಸೇವಕರಾದ ಪಿ. ವೆಂಕಟರಮಣ ಶೇಟ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಪ್ರಮುಖರು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ನೌಕರರು ಸೇರಿದಂತೆ ಇನ್ನಿತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮೆರವಣಿಗೆ ಬಿ.ಎಚ್. ರಸ್ತೆ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ ಮೂಲಕ ಕನಕ ಮಂಟಪ ಮೈದಾನ ತಲುಪಿತು. ಅನಂತರ ಬನ್ನಿ ಮುಡಿಯುವ ಕಾರ್ಯಕ್ರಮ ಜರುಗಿತು. ಹಳೇ ನಗರದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ ಪ್ರಧಾನ ಅರ್ಚಕ ರಂಗನಾಥಶರ್ಮ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. - - - -ಡಿ24ಬಿಡಿವಿಟಿ ಮತ್ತು (ಎ): ಭದ್ರಾವತಿಯಲ್ಲಿ ನಾಡಹಬ್ಬ ದಸರಾ ಅಂಗವಾಗಿ ನಗರಸಭೆ ವತಿಯಿಂದ ಸೋಮವಾರ ಆಯೋಜಿಸಲಾಗಿದ್ದ ಉತ್ಸವ ಮೆರವಣಿಗೆಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ : ತೇಜಸ್ವಿ ಸೂರ್ಯ
ಜಿಬಿಎ ಪಾಲಿಕೆಗಳ ಚುನಾವಣೆಯಲ್ಲಿ ಬ್ಯಾಲೆಟ್‌ ಮತದಾನಕ್ಕೆ ತೊಂದರೆ ಆಗದಂತೆ ಕ್ರಮ: ಸುನೀಲ್ ಕುಮಾರ್‌