ಸಂಗಮೇಶ್ವರ ಜಾತ್ರಾ ಮಹೋತ್ಸವ ಅದ್ಧೂರಿ

KannadaprabhaNewsNetwork |  
Published : Jan 20, 2024, 02:03 AM IST
ಸಿಂದಗಿ | Kannada Prabha

ಸಾರಾಂಶ

ಸಿಂದಗಿ ಪಟ್ಟಣದ ಆರಾಧ್ಯ ದೇವತೆ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಶುಕ್ರವಾರ ವಿಜೃಂಭಣೆಯಿಂದ ಜರುಗಿತು.ಬೆಳಗ್ಗೆ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವಗಳು ಭಕ್ತ ಸಮೂಹದೊಂದಿಗೆ ದೇವಸ್ಥಾನದಿಂದ ನಂದಿಕೋಲ ಹಾಗೂ ಸಕಲವಾದ್ಯಗಳೊಂದಿಗೆ ಪ್ರಾರಂಭವಾಯಿತು. ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಭಿಕಾ ಉತ್ಸವ ಮೂರ್ತಿಗಳ ಪಲ್ಲಕ್ಕಿ ಉತ್ಸವದ ಮೆರವಣಿಗೆ ಮತ್ತು ರಥೋತ್ಸವ ನೀಲಗಂಗಾ ದೇವಸ್ಥಾನದ ಮಾರ್ಗವಾಗಿ ಹಳೆ ಬಜಾರದಲ್ಲಿನ ಬಸವೇಶ್ವರ ದೇವಸ್ಥಾನದವರೆಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಸಿಂದಗಿ

ಪಟ್ಟಣದ ಆರಾಧ್ಯ ದೇವತೆ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಶುಕ್ರವಾರ ವಿಜೃಂಭಣೆಯಿಂದ ಜರುಗಿತು.

ಬೆಳಗ್ಗೆ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವಗಳು ಭಕ್ತ ಸಮೂಹದೊಂದಿಗೆ ದೇವಸ್ಥಾನದಿಂದ ನಂದಿಕೋಲ ಹಾಗೂ ಸಕಲವಾದ್ಯಗಳೊಂದಿಗೆ ಪ್ರಾರಂಭವಾಯಿತು. ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಭಿಕಾ ಉತ್ಸವ ಮೂರ್ತಿಗಳ ಪಲ್ಲಕ್ಕಿ ಉತ್ಸವದ ಮೆರವಣಿಗೆ ಮತ್ತು ರಥೋತ್ಸವ ನೀಲಗಂಗಾ ದೇವಸ್ಥಾನದ ಮಾರ್ಗವಾಗಿ ಹಳೆ ಬಜಾರದಲ್ಲಿನ ಬಸವೇಶ್ವರ ದೇವಸ್ಥಾನದವರೆಗೆ ನಡೆಯಿತು.

ದೇವಸ್ಥಾನದಲ್ಲಿ ಮತ್ತು ಮಾರ್ಗ ಮಧ್ಯ ನೀಲಗಂಗಾ ದೇವಸ್ಥಾನ ಹಾಗೂ ಹಳೆ ಬಜಾರದ ಮಧ್ಯದಲ್ಲಿ ವಿಶ್ವನಾಥ ಬಡಿಗೇರ ಹಾಗೂ ಸಂಗಡಿಗರು ಪುರವಂತರ ಸೇವೆ ಸಲ್ಲಿಸಿದರು. ಪುರವಂತರ ಸೇವೆಯೊಂದಿಗೆ ವಿವಿಧ ಕಾರ್ಯಕ್ರಮಗಳು ಜರುಗಿದವು. ಮಾರ್ಗದುದ್ದಕ್ಕೂ ಭಕ್ತಾಧಿಗಳು ಉತ್ಸವ ಪಲ್ಲಕ್ಕಿಯಲ್ಲಿರುವ ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಭಿಕಾ ಉತ್ಸವ ಮೂರ್ತಿಗಳಿಗೆ ಆರತಿ ಮತ್ತು ಪೂಜೆ ಸಲ್ಲಿಸುವ ಮೂಲಕ ದೇವರ ಕೃಪೆಗೆ ಪಾತ್ರರಾದರು.

ಸ್ಥಳೀಯ ಸಾರಂಗಮಠ-ಗಚ್ಚಿನಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಭೀಮಾಶಂಕರಮಠದ ಸದ್ಗುರು ದತ್ತಪ್ಪಯ್ಯ ಮಹಾಸ್ವಾಮಿಗಳು ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ಪಂಡಿತ ಕುಲಕರ್ಣಿ, ವಿಜಯ ಕುಲಕರ್ಣಿ, ನೀಲಗಂಗಾದೇವಿ ದೇವಸ್ಥಾನದ ಧರ್ಮದರ್ಶಿ ಸುನೀಲ ದೇವರಮನಿ, ಶ್ರೀಶೈಲ ನಂದಿಕೋಲ, ಸಂಗಮೇಶ್ವರ, ಮಲ್ಲಿಕಾರ್ಜುನ ಹಾಗೂ ಬೊಮ್ಮಲಿಂಗೇಶ್ವರ ದೇವಸ್ಥಾನಗಳ ಅರ್ಚಕರು, ಸ್ಥಳೀಯ ಹಾಗೂ ಸುತ್ತ-ಮುತ್ತಲಿನ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವವಿಸಿದ್ದರು. ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಮರುಳಿ ದೇವಸ್ಥಾನಕ್ಕೆ ಬಂದ ನಂತರ ಭಕ್ತರು ನೈವೇದ್ಯ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ನಿಖಿಲ್
ಬೆಂಬಲ ಬೆಲೆಯಡಿ ರಾಗಿ ಖರೀದಿಗೆ ಚುರುಕು