ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿತಂದ ಸಂಗೀತಾ: ನೀಲಕಂಠಪ್ಪ

KannadaprabhaNewsNetwork |  
Published : May 30, 2025, 12:06 AM IST
29ಕೆಕೆಡಿಯು2. | Kannada Prabha

ಸಾರಾಂಶ

ಕಡೂರು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 582 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತಾಲೂಕಿನ ಮರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಸಂಗೀತಾರನ್ನು ತಾಲೂಕು ಬಿಜೆಪಿ ಮಂಡಲದ ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ನಾಗರಿಕ ಸನ್ಮಾನ ನೀಡಿ ಗೌರವ ಸಮರ್ಪಿಸಿದರು.

ಕನ್ನಡಪ್ರಭ ವಾರ್ತೆ, ಕಡೂರು

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 582 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತಾಲೂಕಿನ ಮರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಸಂಗೀತಾರನ್ನು ತಾಲೂಕು ಬಿಜೆಪಿ ಮಂಡಲದ ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ನಾಗರಿಕ ಸನ್ಮಾನ ನೀಡಿ ಗೌರವ ಸಮರ್ಪಿಸಿದರು.

ಗ್ರಾಮದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ಪಟ್ಟಣಗೆರೆ ಯಂತಹ ಗ್ರಾಮೀಣ ಪ್ರದೇಶದ ಕಾಲೇಜಿನಲ್ಲಿ ಸೀಮಿತ ಸೌಲಭ್ಯವನ್ನೆ ಬಳಸಿಕೊಂಡು ಶ್ರಮ ಹಾಕಿ ಉತ್ತಮವಾಗಿ ಅಧ್ಯಯನ ಮಾಡುವ ಮೂಲಕ ಸಂಗೀತಾ ಕಲಾ ವಿಭಾಗದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.ಅವರ ಮುಂದಿನ ಶೈಕ್ಷಣಿಕ ವಿದ್ಯಾಭ್ಯಾಸ ಉತ್ತಮವಾಗಿ ಇರುವ ಮೂಲಕ ಮುಂದಿನ ದಿನಗಳಲ್ಲಿ ಸಂಗೀತಾ ಅವರಿಗೆ ಉನ್ನತ ಅವಕಾಶಗಳು ದೊರೆಯಲಿ ಎಂದು ಶುಭ ಹಾರೈಸಿದರು.ಗೌರವ ಸ್ವೀಕರಿಸಿದ ವಿದ್ಯಾರ್ಥಿನಿ ಸಂಗೀತಾ ಕೃತಜ್ಞತೆ ಅರ್ಪಿಸಿ ಮಾತನಾಡಿ, ನನ್ನ ಪೋಷಕರ ಅತಿ ಹೆಚ್ಚಿನ ಸಹಕಾರ ಕಾಲೇಜಿನ ಪ್ರಾಚಾರ್ಯರು,ಉಪನ್ಯಾಸಕರ ನಿರಂತರ ಮಾರ್ಗದರ್ಶನದಿಂದ ನೀಡಿದ ಪ್ರೋತ್ಸಾಹ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಈ ಸನ್ಮಾನವನ್ನು ನನ್ನ ಕಾಲೇಜಿಗೆ ಅರ್ಪಿಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಮರಡೀಹಳ್ಳಿ ಹನುಮಂತಪ್ಪ, ಜಿಗಣೇಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಪಿ. ಕೆಂಚಪ್ಪ, ರಮೇಶ್, ಸಣ್ಣಪ್ಪ, ಮಾರುತಿ, ಚಂದ್ರಕಲಾ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರರು.29ಕೆಕೆಡಿಯು2.

ಕಡೂರು ತಾಲೂಕಿನ ಮರಡಿಹಳ್ಳಿ ವಿದ್ಯಾರ್ಥಿನಿ ಸಂಗೀತಾರವರನ್ನು ನಾಗರಿಕ ಸನ್ಮಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲ ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''