ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಂಗೀತಾ ಕರಕಟ್ಟಿ ಅವಿರೋಧ ಆಯ್ಕೆ

KannadaprabhaNewsNetwork |  
Published : Jan 11, 2025, 12:47 AM IST
10ಐಎನ್‌ಡಿ1,ಇಂಡಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಸಂಗೀತಾ ಕರಕಟ್ಟಿ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ನಡೆದ ಸ್ಥಾಯಿ ಸಮಿತಿ ಸದಸ್ಯರ ಸಮ್ಮುಖದಲ್ಲಿ ಸದಸ್ಯರಾದ ಭೀಮನಗೌಡ ಪಾಟೀಲ ಅವರು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸಂಗೀತಾ ಸುಧೀರ ಕರಕಟ್ಟಿ ಅವರು ಅಧ್ಯಕ್ಷರು ಎಂದು ಸೂಚಿಸಿದಾಗ ಎಲ್ಲ ಸದಸ್ಯರು ಅದಕ್ಕೆ ಒಪ್ಪಿಗೆ ಸೂಚಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ಇಂಡಿ

ಇಲ್ಲಿನ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಂಗೀತಾ ಸುಧೀರ ಕರಕಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ನಡೆದ ಸ್ಥಾಯಿ ಸಮಿತಿ ಸದಸ್ಯರ ಸಮ್ಮುಖದಲ್ಲಿ ಸದಸ್ಯರಾದ ಭೀಮನಗೌಡ ಪಾಟೀಲ ಅವರು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸಂಗೀತಾ ಸುಧೀರ ಕರಕಟ್ಟಿ ಅವರು ಅಧ್ಯಕ್ಷರು ಎಂದು ಸೂಚಿಸಿದಾಗ ಎಲ್ಲ ಸದಸ್ಯರು ಅದಕ್ಕೆ ಒಪ್ಪಿಗೆ ಸೂಚಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಸ್ಥಾಯಿ ಸಮಿತಿಗೆ ನೂತನವಾಗಿ ಆಯ್ಕೆಯಾದ ಸಂಗೀತಾ ಸುಧೀರ ಕರಕಟ್ಟಿ ಮಾತನಾಡಿ, ಪಟ್ಟಣದಲ್ಲಿನ ಎಲ್ಲ ವಾರ್ಡ್‌ಗಳಲ್ಲಿ ಎಲ್ಲ ಸದಸ್ಯರ ಸಹಕಾರದಿಂದ ಶಾಸಕ ಯಶವಂತರಾಯಗೌಡ ಪಾಟೀಲರ ಮಾರ್ಗದರ್ಶನದಲ್ಲಿ ಕುಡಿಯುವ ನೀರು, ಬೀದಿ ದೀಪಗಳು ಹಾಗೂ ಚರಂಡಿಗಳ ಸ್ವಚ್ಛಗೆ ಹೆಚ್ಚಿನ ಗಮನ ನೀಡಲಾಗುವುದು. ಅಭಿವೃದ್ಧಿ ವಿಚಾರದಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ ಮಾತನಾಡಿ, ಎಲ್ಲ ಸದಸ್ಯರ ಸಹಕಾರದಿಂದ ಪಟ್ಟಣದ ಅಭಿವೃದ್ಧಿಯ ಜತೆಗೆ ಪಟ್ಟಣದ ನಾಗರಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ಅನುದಾನದ ಲಭ್ಯತೆಗೆ ಅನುಗುಣವಾಗಿ ಎಲ್ಲ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತದೆ. ಶಾಸಕರ ಮಾರ್ಗದರ್ಶನದಲ್ಲಿ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಸದಸ್ಯರು ಸೇರಿಕೊಂಡು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದರು.ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಮಾತನಾಡಿ, ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರ ಸಲಹೆಯ ಮೆರೆಗೆ ಎಲ್ಲ ಸ್ಥಾಯಿ ಸಮಿತಿ ಸದಸ್ಯರು ಸಂಗೀತಾ ಸುಧೀರ ಕರಕಟ್ಟಿ ಅವರನ್ನು ಅವಿರೋಧವಾಗಿ ಸ್ಥಾಯಿ ಸಮಿತಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಪುರಸಭೆಯ 23 ವಾರ್ಡ್‌ಗಳಲ್ಲಿ ಶಾಸಕರ ಮಾರ್ಗದರ್ಶನದಲ್ಲಿ ಅವರ ಸಲಹೆ ಸೂಚನೆಗಳನ್ನು ಪಡೆದುಕೊಂಡು ಅಭಿವೃದ್ಧಿಪಡಿಸಲಾಗುತ್ತದೆ. ಇರುವ ಕಡಿಮೆ ಅವಧಿಯಲ್ಲಿ ಪಟ್ಟಣದ ಸಾರ್ವಜನಿಕರಿಗೆ ಅನುಕೂಲವಾಗುವ ಯೋಜನೆಗಳನ್ನು ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ತಿಳಿಸಿದರು.ಪುರಸಭೆ ಕಚೇರಿ ಅಧೀಕ್ಷಕ ಪ್ರವೀಣ ಸೋನಾರ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಕುರಿತು ನಡುವಳಿಕೆ, ನಿಯಮಗಳನ್ನು ಓದಿ, ಸರ್ವರನ್ನು ಸ್ವಾಗತಿಸಿದರು.

ಪುರಸಭೆ ಉಪಾಧ್ಯಕ್ಷ ಜಹಾಂಗೀರ ಸೌದಾಗರ, ಸದಸ್ಯರಾದ ಶಬ್ಬಿರ ಖಾಜಿ, ಅಸ್ಲಮ ಕಡಣಿ, ಉಮೇಶ ದೇಗಿನಾಳ, ಮುಸ್ತಾಕ ಇಂಡಿಕರ, ಅಯುಬ್‌ ಬಾಗವಾನ, ರೇಖಾ ಭೀಮಾಶಂಕರ ಮೂರಮನ, ಇಂಜನಿಯರ್‌ ಅಶೋಕ ಚಂದನ, ಲೆಕ್ಕಾಧಿಕಾರಿ ಅಸ್ಲಮ ಖಾದೀಮ, ಆರೋಗ್ಯಾಧಿಕಾರಿ ಸೋಮನಾಯಕ, ತಸ್ಲೀಮ, ಹುಚ್ಚಪ್ಪ ಶಿವಶರಣ ಮೊದಲಾದವರು ಇದ್ದರು.

ಇದೇ ಸಂದರ್ಭದಲ್ಲಿ ನೂತನವಾಗಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಸಂಗೀತಾ ಸುಧೀರ ಕರಕಟ್ಟಿ ಅವರನ್ನು ಸನ್ಮಾನಿಸಲಾಯಿತು.

ಭೀಮಾಶಂಕರ ಮೂರಮನ, ಅವಿನಾಶ ಬಗಲಿ, ಶ್ರೀಶೈಲ ಪೂಜಾರಿ, ಪವಾರ,ಸುಧೀರ ಕರಕಟ್ಟಿ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ